ಸಾಮಾಜಿಕ ಬದಲಾವಣೆಗೆ ಸಾಮೂಹಿಕ ವಿವಾಹ

Team Udayavani, Jun 16, 2017, 12:23 PM IST

samuhika-married.jpg

ಕೆಂಗೇರಿ: “ಆರ್ಥಿಕ ದುರ್ಬಲರಿಗೆ ಸಾಮೂಹಿಕ ವಿವಾಹಗಳು ಸಹಕಾರಿಯಾಗುತ್ತವೆ. ಅಲ್ಲದೆ, ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ,’ ಎಂದು ಸಿದ್ದಗಂಗಾ ಕ್ಷೇತ್ರದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಮಹಾಸ್ವಾಮಿ ತಿಳಿಸಿದರು.

ಕೆಂಗೇರಿಯ ಕೃಷ್ಣಪ್ರಿಯ ಕಲ್ಯಾಣ ಮಂಟಪದ ಆವರಣದಲ್ಲಿ ಸಮಾನ ಮನಸ್ಕರ ಒಕ್ಕೂಟ ಟ್ರಸ್ಟ್‌ ಆಯೋಜಿಸಿದ್ದ 21 ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು “ಇನ್ನೊಬ್ಬರ ಬದುಕಿನ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಮನೋಭಾವವನ್ನು ರೂಢಿಸಿಕೊಂಡಾಗ ಮಾತ್ರ ಬದುಕು ಸಾರ್ಥಕತೆ ಪಡೆಯುತ್ತದೆ. ಆಡಂಭರದ ಮದುವೆ ಮಹೋತ್ಸವಗಳು ಸಮಾಜದ ಪ್ರಗತಿಗೆ ಮಾರಕ.

ಜನತೆ ಯಾವುದೇ ಕಾರಣಕ್ಕೂ ಆಡಂಭರದ ಮದುವೆಯ ವ್ಯಾಮೋಹ ಬೆಳೆಸಿಕೊಳ್ಳಬಾರದು,’ ಎಂದು ಕಿವಿಮಾತು ಹೇಳಿದರು. ಟ್ರಸ್ಟ್‌ನ ಅಧ್ಯಕ್ಷ ಶಾಸಕ ಎಸ್‌.ಟಿ.ಸೋಮಶೇಖರ್‌ ಮಾತನಾಡಿ, “ಸಮಾನ ಮನಸ್ಕರ ಒಕ್ಕೂಟದಿಂದ 21 ವರ್ಷಗಳಿಂದ ಸಾಮೂಹಿಕ ವಿವಾಹ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ವಿವಾಹವಾದ 2340 ಮಂದಿ ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ,’ ಎಂದು ತಿಳಿಸಿದರು. 

76 ಜೋಡಿ ವಧು-ವರರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಅವರಿಗೆ ಸಸಿಯನ್ನು ಕಾಣಿಕೆಯಾಗಿ ನೀಡಿ, ಉತ್ತಮ ರೀತಿಯಲ್ಲಿ ಪೋಷಿಸುವಂತೆ ಸಲಹೆ ನೀಡಲಾಯಿತು. ವ್ಯಕ್ತಿಯೊಬ್ಬರು ಅಂದ ವಧುವನ್ನು ಇದೇ ಸಮಾರಂಭದಲ್ಲಿ ವಿವಾಹವಾಗುವ ಮೂಲಕ ಆದರ್ಶ ಮೆರೆದರು. 

ಕನಕಪುರ ಮರಳೇಗವಿ ಮಠದ ಡಾ.ಮುಮ್ಮಡಿ ಶಿವರುದ್ರಮಹಾಸ್ವಾಮಿ, ಏಕದಳಬಿಲ್ವ ಬಂಡೇಮಠ ಕಿರಿಯ ಶ್ರೀ ಶಿವಾನಂದಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಬಿಬಿಎಂಪಿ ಸದಸ್ಯ ರಾಜಣ್ಣ, ಆರ್ಯ ಶ್ರೀನಿವಾಸ್‌, ವಾಸುದೇವ್‌, ನಾಮನಿರ್ದೇಶಿತ ಸದಸ್ಯ ಜಿ.ವಿ.ಸುರೇಶ್‌, ಟ್ರಸ್ಟ್‌ನ ಡಾ.ಬೈರಮಂಗಲ ರಾಮೇಗೌಡ, ತ್ಯಾಗರಾಜು, ಮರಿಮಲ್ಲಯ್ಯ, ಮಹದೇವಮ್ಮ, ಎಚ್‌.ಎಸ್‌.ನರಸಿಂಹೇಗೌಡ ಇದ್ದರು. 

ಟಾಪ್ ನ್ಯೂಸ್

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.