ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಸಿದ್ದು ಅರ್ಹರು
Team Udayavani, Apr 19, 2018, 6:30 AM IST
ಬೆಂಗಳೂರು:ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆಗಾಗಿ ಕೇಂದ್ರಕ್ಕೆ ಶಿಫಾರಸು ಕಳುಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅರ್ಹರು ಎಂದು ಬಸವಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.
ಬುಧವಾರ ರಾಷ್ಟ್ರೀಯ ಬಸವ ದಳ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಧರ್ಮ ಒಡೆಯುತ್ತಿಲ್ಲ. ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಶೋಭಾ ಕರಂದ್ಲಾಜೆ ಅವರು ಪ್ರಚೋಧನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಈ ಹಿಂದೆ ಬೌದ್ಧ, ಜೈನ್, ಸಿಖ್ ಧರ್ಮದವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಸಿಕ್ಕಾಗ ಎಲ್ಲರೂ ಸ್ವಾಗತ ಮಾಡಿದರು. ಯಾರೊಬ್ಬರೂ ವಿರೋಧ ವ್ಯಕ್ತಪಡಿಸಲಿಲ್ಲ ಎಂದು ತಿಳಿಸಿದರು.
ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ವಿರೋಧ ವ್ಯಕ್ತಪಡಿಸುತ್ತಿರುವುದು ನ್ಯಾಯ ಸಮ್ಮತವಲ್ಲ. 30 ವರ್ಷಗಳ ಸತತ ಹೋರಾಟಗಳು ನಡೆಯುತ್ತಿದ್ದರೂ ನಮಗೆ ನ್ಯಾಯ ಸಿಕ್ಕಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದನೆ ನೀಡಿದೆ. ಇದಕ್ಕೆ ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ ಎಂಬುದು ತಿಳಿದಿದೆ ಎಂದರು.
ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿರುವ ಮಠಾಧೀಶರ ಮತ್ತು ನೇತಾರರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವವರಿಗೆ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಲಿಂಗಾಯತ ಧರ್ಮದ ಇತಿಹಾಸವನ್ನು ಅರಿಯದ ಅವರು ರಾಜಕಿಯ ಪ್ರೇರಿತ ಅಭಿಪ್ರಾಯ ನೀಡಿದ್ದಾರೆ. ಹಿಂದೂ ಧರ್ಮವನ್ನು ಇಬ್ಭಾಗ ಮಾಡಲು ಹೊರಟಿದ್ದಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.