ಮ್ಯಾಟ್ರಿಮೊನಿ ದೋಖಾ: ಯುವತಿಯ ನಯವಾದ ಮಾತಿಗೆ ಮನಸೋತು 9.95 ಲಕ್ಷ ರೂ. ಕಳೆದುಕೊಂಡ ಯುವಕ!

Team Udayavani, Sep 10, 2022, 3:28 PM IST

ಮ್ಯಾಟ್ರಿಮೊನಿ ದೋಖಾ: ಯುವತಿಯ ನಯವಾದ ಮಾತಿಗೆ ಮನಸೋತು 9.95 ಲಕ್ಷ ರೂ. ಕಳೆದುಕೊಂಡ ಯುವಕ!

ಬೆಂಗಳೂರು: ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಯುವತಿಯ ನಯವಾದ ಮಾತಿಗೆ ಮನಸೋತ ಯುವಕನೊಬ್ಬ 9.95 ಲಕ್ಷ ರೂ. ಕಳೆದುಕೊಂಡಿದ್ದಾನೆ.

ಹನುಮಗಿರಿನಗರದ ನಿವಾಸಿ ಅಜಯ್‌ ಕುಮಾರ್‌ (36) ವಂಚನೆಗೊಳಗಾದವ. ಖಾಸಗಿ ಕಂಪನಿಯೊಂದರ ಉದ್ಯೋಗಿ ಅಜಯ್‌ ಆ.29ರಂದು ಮ್ಯಾಟ್ರಿಮೋನಿಯಲ್ಲಿ ತಮ್ಮ ಫೋಟೊ ಅಪ್‌ಲೋಡ್‌ ಮಾಡಿ ವಿವಾಹವಾಗಲು ವಧುವನ್ನು ಹುಡುಕುತ್ತಿದ್ದ. ಕೆಲ ದಿನಗಳ ಹಿಂದೆ ಉತ್ತರ ಭಾರತ ಮೂಲದ ಯುವತಿ ಮ್ಯಾಟ್ರಿಮೋನಿಯಲ್ಲಿ ಅಜಯ್‌ಗೆ ಸಂದೇಶ ಕಳುಹಿಸಿದ್ದಳು.

ಇದನ್ನೂ ಓದಿ: ಕುಡಿತದ ಚಟ ಬಿಡಿಸಲು ಯತ್ನಿಸಿದಕ್ಕೆ ಪಾಲಕರಿಗೆ ಚೂರಿ ಹಾಕಿ, ಎ ಸಿನಿಮಾದ ಪೋಸ್‌ ಕೊಟ್ಟ ಆರೋಪಿ

ಇದಕ್ಕೆ ಅಜಯ್‌ ಸಹ ಪ್ರತಿಕ್ರಿಯಿಸಿದ್ದ. ನಂತರ ಇಬ್ಬರೂ ಸಲುಗೆಯಿಂದ ಮಾತ ನಾಡಲಾರಂಭಿಸಿದ್ದರು. ಅಜಯ್‌ ಮೊಬೈಲ್‌ ನಂಬರ್‌ ಪಡೆದುಕೊಂಡ ಯುವತಿ ಆತನಿಗೆ ಕರೆ ಮಾಡಿ “ನಿಮ್ಮ ಪ್ರೊಫೈಲ್‌ ನನಗೆ ಬಹಳ ಇಷ್ಟವಾಗಿದೆ. ನಿಮ್ಮನ್ನು ನಾನು ನೋಡಬೇಕು. ಇದಕ್ಕಾಗಿ ದೆಹಲಿಗೆ ಬರುತ್ತಿದ್ದೇನೆ’ ಎಂದು ಹೇಳಿದ್ದಳು. ಆಕೆಯ ಮೋಹಕ ಮಾತಿಗೆ ಮರುಳಾದ ಅಜಯ್‌ ಆಕೆಯ ಸೂಚನೆಯಂತೆ ಆಕೆ ಕೊಟ್ಟ ಬ್ಯಾಂಕ್‌ ಖಾತೆಗೆ ಒಂದಿಷ್ಟು ಹಣ ಹಾಕಿದ್ದ. ಇಷ್ಟಕ್ಕೆ ಸುಮ್ಮನಾಗದ ಯುವತಿ ಸಬೂಬು ಹೇಳಿ ತನ್ನ ಖಾತೆಗೆ ಅಜಯ್‌ನಿಂದ ಮತ್ತೆ ಹಾಕಿಸಿಕೊಂಡಿದ್ದಳು. ನಿನ್ನನ್ನು ಭೇಟಿಯಾದ ಕೂಡಲೇ ಎಲ್ಲ ಹಣ ಹಿಂತಿರುಗಿಸುವುದಾಗಿ ಯುವತಿ ನಂಬಿಸಿದ್ದಳು.

ಹೀಗೆ ಹಂತ-ಹಂತವಾಗಿ ಅಜಯ್‌ ಆಕೆಯ ಬ್ಯಾಂಕ್‌ ಖಾತೆಗೆ ಒಟ್ಟು 9.95 ಲಕ್ಷರೂ. ಜಮೆ ಮಾಡಿದ್ದ. ಇದಾದ ಬಳಿಕ ಯುವತಿ ಮೊಬೈಲ್‌ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.