ಕಸಾಪ ಗದ್ದುಗೆ ಮೇಲೆ ನಿವೃತ್ತ ಅಧಿಕಾರಿಗಳ ಕಣ್ಣು
ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ6 ತಿಂಗಳ ಮೊದಲೇ ಪ್ರಾರಂಭವಾದ "ಹೈಫೈ' ಪ್ರಚಾರ
Team Udayavani, Oct 10, 2020, 12:55 PM IST
ಬೆಂಗಳೂರು: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಗದ್ದುಗೆ ಮೇಲೆ ಇದೀಗ ನಿವೃತ್ತ ಅಧಿಕಾರಿಗಳ ಕಣ್ಣು ಬಿದ್ದಿದೆ. ಮುಂದಿನ ಮಾರ್ಚ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು ಈಗಿನಿಂದಲೇ ವಾಟ್ಸ್ ಆ್ಯಪ್, ಫೇಸ್ ಬುಕ್‌ಮೂಲಕ “ಹೈಫೈ’ಪ್ರಚಾರವೂ ಪ್ರಾರಂಭವಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಕಾರ್ಯಕಾರಿಣಿ ಸಮಿತಿಯ ಆಡಳಿತ ಅವಧಿ ಮುಂದಿನ ವರ್ಷದ ಮಾರ್ಚ್‌ಗೆ ಅಂತ್ಯವಾಗಲಿದೆ. ನಂತರ ಚುನಾವಣೆ ನಡೆಯಬೇಕಿದ್ದು, ಸಾಹಿತ್ಯ ವಲಯದಿಂದ ದೂರ ಇದ್ದ ಅಧಿಕಾರಿಗಳು ಹಾಗೂ ಸಾಹಿತ್ಯ ವಲಯದೊಂದಿಗೆ ಸಂಪರ್ಕ ಹೊಂದಿದ್ದವರು ‘ಅಖಾಡ’ಕ್ಕೆ ಇಳಿಯಲು ಸಜ್ಜಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಮತ್ತು ತುಮಕೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಈಗಾಗಲೇ ನಿವೃತ್ತರಾಗಿರುವ ಹಿರಿಯ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ದೂರದರ್ಶನದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶಿ ಹಾಗೂ ಆಹಾರ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಕುಷ್ಟಗಿ ಮೂಲದ ಸಂಗಮೇಶ್ ಬಾದವಾಡಿಗಿ ಅವರು ಪರಿಷತ್ತಿನ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.
ನಿವೃತ್ತ ಅಧಿಕಾರಿಗಳಲ್ಲಿ ಸಂಗಮೇಶ್ ಬಾದವಾಡಗಿ ಅವರು ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಕಸಾಪದ ಮಾಜಿ ಅಧ್ಯಕ್ಷರಾದ ಡಾ.ನಲ್ಲೂರು ಪ್ರಸಾದ್ ಮತ್ತು ಪುಂಡಲೀಕ ಹಾಲಂಬಿ ಅವರುಗಳ ಆಡಳಿತ ಅವಧಿಯಲ್ಲಿ ಗೌರವ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಈ ಮಧ್ಯೆ, ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಗೌರವ ಕಾರ್ಯದರ್ಶಿವ.ಚ.ಚನ್ನೇಗೌಡ ಅವರು ಕೂಡ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತಾಂತ್ರಿಕ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರುಗಳಲ್ಲದೆ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಧ್ಯಕ್ಷ ಶೇಖರ ಗೌಡ ಮಾಲಿಪಾಟೀಲ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಕೂಡ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ.
ಸಾಹಿತ್ಯ ಸಮ್ಮೇಳನದಲ್ಲೇ ಪ್ರಚಾರ: ಈ ಹಿಂದೆ ಧಾರವಾಡದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಿಂದಲೇ ದೂರದರ್ಶನದ ನಿವೃತ್ತ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್‌ಜೋಶಿ ತಮ್ಮ ಪ್ರಚಾರವನ್ನು ಆರಂಭಿಸಿದ್ದರು. ಜತೆಗೆ ಕಲಬುರಗಿ ಸಾಹಿತ್ಯ ಸಮ್ಮೇಳನದಲ್ಲೂ ತಮ್ಮದೇ ಆದ ತಂಡ ಕಟ್ಟಿಕೊಂಡು ಪ್ರಚಾರ ನಡೆಸಿದ್ದರು.
ಕಸಾಪ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ಮಹೇಶ್ ಜೋಶಿ, ಈ ಹಿಂದೆ ನನ್ನ ಆಡಳಿತ ಅವಧಿಯಲ್ಲಿ ದೂರದರ್ಶನ ಚಂದನ ಸಮೀಪ ದರ್ಶನವಾಯಿತು. ಅಂತೆಯೇ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿ ಮಾಡಲು ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
ಕನ್ನಡಪರ ಹೋರಾಟಗಾರ ಸಿ.ಕೆ.ರಾಮೇಗೌಡ, ಕಲಬುರಗಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದಿಂದಲೇ ಪ್ರಚಾರದ ಅಖಾಡಕ್ಕೆ ಇಳಿದಿದ್ದೇನೆ. ಹಿರಿಯ ಸಾಹಿತಿಗಳನ್ನು ಭೇಟಿ ಮಾಡುತ್ತಿದ್ದೇನೆ. ಇಡೀ ಉತ್ತರ ಕರ್ನಾಟಕವನ್ನು ಒಂದುಬಾರಿಪ್ರವಾಸ ಮಾಡಿಪ್ರಚಾರ ಮಾಡಿದ್ದೇನೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತನ್ನುಕಟ್ಟಿ ಬೆಳೆಸಲು ನಾಡಿನ ಹೆಸರಾಂತ ಸಾಹಿತಿಗಳು ಬೆವರು ಹರಿಸಿದ್ದಾರೆ. ಹೀಗಾಗಿ ಕನ್ನಡ ಸಾಹಿತ್ಯದಲ್ಲಿಕೃಷಿ ಮಾಡಿರುವವರು ಸಾಹಿತ್ಯ ಪರಿಷತ್ತಿನ ಚುಕ್ಕಾಣಿ ಹಿಡಿಯಬೇಕು.ಯಾವತ್ತೂಕೂಡಕನ್ನಡ ಸಾಹಿತ್ಯ ಪರಿಷತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳ ವಿಶ್ರಾಂತಿ ತಾಣವಾಗಬಾರದು. –ಕೋ.ವೆಂ.ರಾಮಕೃಷ್ಣೇಗೌಡ, ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ
ಸ್ನೇಹಿತರ ಒತ್ತಾಸೆಯಂತೆ ಕಸಾಪ ಅಧ್ಯಕ್ಷ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದೇನೆ.ಕೋವಿಡ್ ಹಿನ್ನೆಲೆಯಲ್ಲಿ ಪ್ರಚಾರ ಆರಂಭಿಸಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪ್ರಚಾರಕೈಗೊಳ್ಳುತ್ತೇನೆ.- ಡಾ.ಸಿ.ಸೋಮಶೇಖರ್, ನಿವೃತ್ತ ಐಎಎಸ್ ಅಧಿಕಾರಿ
–ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.