ಮೇಯರ್ ಚುನಾವಣೆಗೆ ಆಸ್ತಿ ಘೋಷಣೆ ಕಂಟಕ?
Team Udayavani, Sep 16, 2017, 12:47 PM IST
ಬೆಂಗಳೂರು: ಬಿಬಿಎಂಪಿಯ ಬಹುತೇಕ ಸದಸ್ಯರು ಆಸ್ತಿ ಘೋಷಣೆ ಮಾಡದೆ ಕೆಎಂಸಿ ಕಾಯ್ದೆಯನ್ನು ಉಲ್ಲಂ ಸಿರುವ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ರದ್ದುಪಡಿಸುವಂತೆ ನವಭಾರತ ಪ್ರಜಾಸತ್ತಾತ್ಮಕ ಪಕ್ಷದ ಮುಖಂಡರು ನಗರದ ಪ್ರಾದೇಶಿಕ ಆಯುಕ್ತೆ ಜಯಂತಿ ಅವರಿಗೆ ದೂರು ನೀಡಿದ್ದಾರೆ.
ಕೆಎಂಸಿ ಕಾಯ್ದೆ 1976ರ ಕಲಂ 19ರಂತೆ ಪ್ರತಿಯೊಬ್ಬ ಚುನಾಯಿತ ಬಿಬಿಎಂಪಿ ಸದಸ್ಯರು ಮೇಯರ್ ಚುನಾವಣೆಯಾದ 1 ತಿಂಗಳೊಳಗಾಗಿ ಬಿಬಿಎಂಪಿ ಆಯುಕ್ತರಿಗೆ ತಮ್ಮ ಹಾಗೂ ಕುಟುಂಬದವರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2015ರ ಸೆ.11ರಂದು ಮೊದಲ ಮೇಯರ್ ಆಯ್ಕೆಯಾಗಿ ಒಂದು ತಿಂಗಳು ಕಳೆದರೂ 90 ಕ್ಕೂ ಹೆಚ್ಚು ಸದಸ್ಯರು ವಿವರಗಳನ್ನು ಸಲ್ಲಿಕೆ ಮಾಡಿಲ್ಲ.
ಆ ಹಿನ್ನೆಲೆಯಲ್ಲಿ ನವಭಾರತ ಪ್ರಜಾಸತ್ತಾತ್ಮಕ ಪಕ್ಷದ ಮುಖಂಡರು 2016ರ ಜನವರಿಲ್ಲಿ ಸರ್ಕಾರಕ್ಕೆ ಪತ್ರ ಬರೆದು ಅವರ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿತ್ತು. ಅದರ ಆಧಾರದ ಮೇಲೆ ನಿಯಮದಂತೆ ಕ್ರಮಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರಿಗೆ ಸರ್ಕಾರ ಪತ್ರ ಬರೆದಿತ್ತು. ಆದರೆ, ಪ್ರಾದೇಶಿಕ ಆಯುಕ್ತರು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮತ್ತೂಮ್ಮೆ ದೂರು ನೀಡಿರುವ ಪಕ್ಷದ ಮುಖಂಡರು ಈಗಲೂ ಕ್ರಮಕೈಗೊಳ್ಳದಿದ್ದರೆ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ಮೇಯರ್ ಚುನಾವಣೆಯನ್ನೇ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ಒಂದೊಮ್ಮೆ ಈ ವಿಚಾರ ನ್ಯಾಯಾಲಯ ಅಂಗಳಕ್ಕೆ ಹೋದರೆ ಸೆ. 28ರ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ತೊಡಕಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.