ಕಾಂಗ್ರೆಸ್‌ ಬ್ಯಾನರ್‌ ಕಂಡು ಹೊರಟೇ ಹೋದ ಮೇಯರ್‌!


Team Udayavani, Dec 3, 2017, 1:01 PM IST

banner-mayor-flex.jpg

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಗರದಲ್ಲಿನ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಕಟೌಟ್‌ಗಳ ತೆರವು ಕಾರ್ಯಕ್ಕೆ ಚಾಲನೆ ನೀಡಿದ ಮೇಯರ್‌ ಆರ್‌.ಸಂಪತ್‌ರಾಜ್‌, ತಮ್ಮದೇ ಪಕ್ಷದ ಶಾಸಕರಿಗೆ ಶುಭ ಕೋರಿ ಅಳವಡಿಸಿದ ಫ್ಲೆಕ್ಸ್‌ಗಳನ್ನು ಕಂಡು ಕಾರ್ಯಾಚರಣೆ ಸ್ಥಳದಿಂದ ಹೊರಟು ಹೋದ ಪ್ರಸಂಗ ನಡೆಯಿತು. 

ಮೇಯರ್‌ ಸಂಪತ್‌ರಾಜ್‌ ಅವರ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಮೈಸೂಈರು ಬ್ಯಾಂಕ್‌ ವೃತ್ತದ ಸುತ್ತಮುತ್ತ ರಾರಾಜಿಸುತ್ತಿದ್ದ ಶಾಸಕ ಆರ್‌.ವಿ.ದೇವರಾಜ್‌ ಅವರಿಗೆ ಹುಟ್ಟುಹಬ್ಬದ ಶುಭ ಕೋರಿ ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಮೇಯರ್‌ ಹಿಂದೇಟು ಹಾಕಿದರು.

ಪೂರ್ವ ನಿಗದಿಯಂತೆ ಬೆಳಗ್ಗೆ 9.30ಕ್ಕೆ ಮೈಸೂರು ಬ್ಯಾಂಕ್‌ ವೃತ್ತದಿಂದ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ, ಮೇಯರ್‌ ಸ್ಥಳಕ್ಕೆ ಬಂದಿದ್ದೆ 11.30ಕ್ಕೆ. ಆದರೆ ಆ ಭಾಗದಲ್ಲಿ ಶಾಸಕ ಆರ್‌.ವಿ.ದೇವರಾಜ್‌ ಅವರಿಗೆ ಜನ್ಮದಿನದ ಶುಭಾಷಯ ಕೋರಿದ್ದ ಫ್ಲೆಕ್ಸ್‌ಗಳೇ ರಾರಾಜಿಸುತ್ತಿದ್ದವು.

ಮಾಧ್ಯಮದವರು ಜತೆಗಿದ್ದ ಕಾರಣ ಒಲ್ಲದ ಮನಸ್ಸಿನಿಂದಲೇ ಒಂದೆರಡು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿಸಿದ ಸಂಪತ್‌ರಾಜ್‌, ನಂತರ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಜಿ.ಕೋಕಿಲಾ ಚಂದ್ರಶೇಖರ್‌ ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎಂದು ತಿಳಿಸಿ ಹೊರಡಲು ಸಿದ್ಧರಾದರು.

ಮತ್ತೆ ಫ್ಲೆಕ್ಸ್‌ ಅಳವಡಿಸಿದರೆ ದಂಡ: ಈ ವೇಳೆ ಮಾತನಾಡಿದ ಮೇಯರ್‌, ನ್ಯಾಯಾಲಯದ ಆದೇಶದಂತೆ ಫ್ಲೆಕ್ಸ್‌ಗಳ ತೆರವು ಕಾರ್ಯ ನಡೆಸಲಾಗುತ್ತಿದ್ದು, ಯಾರೇ ಫ್ಲೆಕ್ಸ್‌ ಅಳವಡಿಸಿದರೂ ಪಕ್ಷಾತೀತವಾಗಿ ತೆರವುಗೊಳಿಸುತ್ತೇವೆ. ಫ್ಲೆಕ್ಸ್‌ಗಳ ತೆರವುಗೊಳಿಸುವ ಸಂಪೂರ್ಣ ಅಧಿಕಾರ ಅಧಿಕಾರಿಗಳಿಗೆ ನೀಡಲಾಗಿದೆ.

ಶಾಸಕ ಆರ್‌.ವಿ.ದೇವರಾಜ್‌ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಮತ್ತೆ ಫ್ಲೆಕ್ಸ್‌ ಅಳವಡಿಸಿದರೆ ದಂಡ ವಿಧಿಸಲಾಗುವುದು ಎಂದು ಹೇಳಿದರು. ಈ ವೇಳೆ ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷ ನಾಯಕ ಮಹಮದ್‌ ರಿಜ್ವಾನ್‌ ನವಾಬ್‌ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಪ್ರಭಾವಿ ಶಾಸಕರಿಗೆ ಪ್ರಚಾರ ಬೇಡ: ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಜಿ.ಕೋಕಿಲಾ ಚಂದ್ರಶೇಖರ್‌ ಮಾತನಾಡಿ, “ಹೈಕೋರ್ಟ್‌ ಆದೇಶದಂತೆ ನಗರದಲ್ಲಿನ ಫ್ಲೆಕ್ಸ್‌, ಬ್ಯಾನರ್‌ಗಳ ತೆರವು ಕಾರ್ಯಕ್ಕೆ ಮುಂದಾಗಿದ್ದೇವೆ. ಯಾವುದೇ ಭಿನ್ನಮತ, ರಾಜಕೀಯ ದ್ವೇಷದಿಂದ ಕಾರ್ಯಾಚರಣೆ ನಡೆಸುತ್ತಿಲ್ಲ. ಆರ್‌.ವಿ.ದೇವರಾಜ್‌ ಅವರು ಪ್ರಭಾವಿ ನಾಯಕರಾಗಿದ್ದು ಅವರಿಗೆ ಪ್ರಚಾರ ಅನಗತ್ಯ.

ಆದರೆ, ಅವರ ಬೆಂಬಲಿಗರು ಹುಟ್ಟುಹಬ್ಬದ ಶುಭಾಶಯ ಕೋರಲು ಫ್ಲೆಕ್ಸ್‌ ಅಳವಡಿಸಿದ್ದು, ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ರಾಜಕಾರಣಿಗಳು ಹಾಕಿರುವ ಯಾವುದೇ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.