ಮಾರುಕಟ್ಟೆಯಲ್ಲಿ ಅನೈರ್ಮಲ್ಯಕಂಡು ಮೇಯರ್ ಆಕ್ರೋಶ
Team Udayavani, Jul 15, 2017, 10:54 AM IST
ಬೆಂಗಳೂರು: ಕೆ.ಆರ್.ಮಾರುಕಟ್ಟೆ ಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಮೇಯರ್ ಜಿ.ಪದ್ಮಾವತಿ ಅವರು, ಮಾರುಕಟ್ಟೆಯಲ್ಲಿ ಸ್ವತ್ಛತೆ ಕಾಪಾಡದ ಮಳಿಗೆದಾರರು ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಸ್ಮಾರ್ಟ್‌ಸಿಟಿ ಯೋಜನೆಯಡಿ ಕೆ.ಆರ್.ಮಾರುಕಟ್ಟೆ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಪರಿಶೀಲನೆ ನಡೆಸಿದ ಅವರು, ಮಾರುಕಟ್ಟೆಯ ಸುತ್ತಮುತ್ತಲಿನ ಭಾಗಗಳಲ್ಲಿ ಸ್ವತ್ಛತೆ ಕಾಪಾಡದ ಹಾಗೂ ತ್ಯಾಜ್ಯ ವಿಂಗಡಣೆ ಮುಂದಾಗದ ಮಳಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.
ಮಾರುಕಟ್ಟೆಯ ಸುತ್ತಲಿನ ಭಾಗದಲ್ಲಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿ ಹಾಗೂ ಒಳಾಂಗಣದಲ್ಲಿ ಅಗತ್ಯವಿರುವ ವಿದ್ಯುತ್ ದೀಪಗಳನ್ನು ಅಳವಡಿಕೆ ಮಾಡುವಂತೆ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ಕಾಮಗಾರಿಗಳಿಗೆ ಅಗತ್ಯವಾದ ಅನುದಾನವನ್ನು ಮೇಯರ್ ನಿಧಿಯಿಂದ ನೀಡುವ ಭರವಸೆ ನೀಡಿದರು.
ಪಾದಚಾರಿ ಮಾರ್ಗದ ಬಳಿ ತ್ಯಾಜ್ಯ ಸಂಗ್ರಹಣೆ ವಾಹನದಿಂದ ದುರ್ವಾಸನೆ ಹರಡುತ್ತಿರುವುದನ್ನು ಗಮನಿಸಿದ ಮೇಯರ್, ಗುತ್ತಿಗೆದಾರರಿಗೆ 50 ಸಾವಿರ ದಂಡ ವಿಧಿಸಿದರು. ಜತೆಗೆ ತ್ಯಾಜ್ಯ ವಿಂಗಡಣೆ ಮಾಡದ ಮಳಿಗೆದಾರರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಮಾರುಕಟ್ಟೆ ಕಟ್ಟಡದಲ್ಲಿ ಇಂದಿರಾ ಕ್ಯಾಂಟಿನ್!
ಬಿಬಿಎಂಪಿಯ ಎರಡನೇ ಮಹಡಿಯಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮೇಯರ್ ಜಿ.ಪದ್ಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಎರಡನೇ ಮಹಡಿಯನ್ನು ಪರಿಶೀಲನೆ ನಡೆಸಿದ ಅವರು ಇಲ್ಲಿ ಕ್ಯಾಂಟಿನ್ ನಿರ್ಮಾಣದಿಂದ ವ್ಯಾಪಾರಿಗಳೊಂದಿಗೆ ಗ್ರಾಹಕರಿಗೂ ಅನುಕೂಲವಾಗಲಿದೆ ಎಂದರು.
ಬಿಬಿಎಂಪಿ ವತಿಯಿಂದ ಉದ್ಯಾನ, ಮೈದಾನಗಳಲ್ಲಿ ಕ್ಯಾಂಟಿನ್ ನಿರ್ಮಿಸುತ್ತಿಲ್ಲ. ಜಾಗದ ಕೊರತೆಯಿರುವ ಭಾಗಗಳಲ್ಲಿ ಮಾತ್ರ ಖಾಲಿ ಜಾಗ ಬಳಸಿಕೊಳ್ಳಲಾಗುತ್ತಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಪೂರೈಕೆ ಮಾಡುವುದು ಬಿಜೆಪಿಗೆ ಇಷ್ಟವಿಲ್ಲ. ಹೀಗಾಗಿ ಅವರು ಕ್ಯಾಂಟಿನ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
-ಜಿ.ಪದ್ಮಾವತಿ, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.