ಫೆ.7ರಿಂದ ರಾಜ್ಯಾದ್ಯಂತ ದಡಾರ, ರುಬೆಲಾ ಲಸಿಕೆ ಅಭಿಯಾನ
Team Udayavani, Jan 31, 2017, 12:11 PM IST
ಬೆಂಗಳೂರು: ಮಾರಕವಾದ ದಡಾರ ಮತ್ತು ರುಬೆಲಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಫೆ.7ರಿಂದ 28ರವರೆಗೆ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನಲ್ಲೂ ನಡೆಯುವ ಅಭಿಯಾನಕ್ಕೆ ಎಲ್ಲಾ ಸದಸ್ಯರು ಸಹಕರಿಸುವಂತೆ ಆರೋಗ್ಯ ವಿಭಾಗದ ಅಧಿಕಾರಿಯೊಬ್ಬರು ಕೌನ್ಸಿಲ್ ಸಭೆಯಲ್ಲಿ ಮನವಿ ಮಾಡಿದರು.
ದಡಾರ ಕಾಯಿಲೆ ಮಕ್ಕಳಲ್ಲೇ ಕಂಡುಬರುತ್ತದೆ. ಈ ಕಾಯಿಲೆಯಿಂದ ವಿಶ್ವದಲ್ಲಿ ಪ್ರತಿ ಗಂಟೆಗೆ 17 ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.40ರಷ್ಟು ಭಾರತದವರಾಗಿದ್ದಾರೆ. ಆದ್ದರಿಂದ ದೇಶದಲ್ಲಿ ಆದ್ಯತೆ ಮೇರೆಗೆ ಧಿಪೋಲಿಯೊ ಮಾದರಿಯಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಉದ್ದೇಶಿಸಿದೆ.
ಮೊದಲ ಹಂತದಲ್ಲಿ ಕರ್ನಾಟಕ, ಗೋವಾ, ತಮಿಳುನಾಡು, ಪುದುಚೇರಿ, ಲಕ್ಷದ್ವೀಪದಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ 1.26 ಕೋಟಿ ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಇದ್ದು, ಬೆಂಗಳೂರು ನಗರ ಜಿಲ್ಲೆಯಲ್ಲೇ 26 ಲಕ್ಷ ಮಕ್ಕಳಿಗೆ ಈ ಚುಚ್ಚುಮದ್ದು ಹಾಕಲಾಗುವುದು.
9 ತಿಂಗಳಿಂದ 15 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಇದನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕಾಗಿ ಪೋಷಕರು ಸಹಕರಿಸಬೇಕು. ಪಾಲಿಕೆ ಸದಸ್ಯರು ಕೂಡ ಆಯಾ ವಾರ್ಡ್‌ಗಳಲ್ಲಿ ಈ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಕೋರಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.