ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಿಕೆಶಿ
Team Udayavani, Jun 12, 2018, 6:50 AM IST
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದರು.
ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸ್ಥಳಾಂತರ,ವೈದ್ಯಕೀಯ ಸೀಟುಗಳ ಶುಲ್ಕ ಹೆಚ್ಚಳ, ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಿತಿಗತಿ ಸೇರಿ ಅನೇಕ ವಿಷಯಗಳ ಕುರಿತು ಮಾಹಿತಿ ಪಡೆದರು.
ಜಯನಗರದ ಟಿ ಬ್ಲಾಕ್‌ನಲ್ಲಿ ಇರುವ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕ್ಯಾಂಪಸ್
ಅನ್ನು ರಾಮನಗರ ಜಿಲ್ಲೆಗೆ ಸ್ಥಳಾಂತರಿಸುವ ಪ್ರಸ್ತಾವ 2008 ರಿಂದಲೇ ಜಾರಿಯಲ್ಲಿದೆ. 2018ರ ಜನವರಿಯಲ್ಲಿ ಸರ್ಕಾರ ಈ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಂಡು ಸ್ಥಳಾಂತರಿಸುವಂತೆ ವಿವಿಯ ಅಧಿಕಾರಿಗಳಿಗೆ ಆದೇಶಿಸಿತ್ತು. ಆದರೆ,ಸ್ಥಳಾಂತರ ಕಾರ್ಯ ನಡೆದಿಲ್ಲ. ವಿವಿಯ ಕ್ಯಾಂಪಸ್ ಸ್ಥಳಾಂತರ ಮಾಡಬಾರದು ಎಂದು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ಮಾಡಿದ್ದರು.
ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ಥಳಾಂತರಕ್ಕೆ ಸಚಿವರು ಸಕಾರಾ ತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ಕಡತಗಳನ್ನು ಆದಷ್ಟು ಬೇಗ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.
ವೈದ್ಯಕೀಯ ಸೀಟುಗಳ ಶುಲ್ಕ ಹೆಚ್ಚಳಕ್ಕೆ ಪ್ರತಿ ವರ್ಷ ಖಾಸಗಿ ಕಾಲೇಜುಗಳಿಂದ ಪ್ರಸ್ತಾವನೆ ಬರುತ್ತದೆ. ಈ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಮತ್ತು ಇಲಾಖೆ ಅಧಿಕಾರಿಗಳ ಸಭೆ ಕರೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಕೊರತೆಯಿಂದ ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 150 ಸೀಟು ಈ ವರ್ಷ ಖೋತವಾಗಿದೆ. ಈ ಬಗ್ಗೆಯು ಸಚಿವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ವೈದ್ಯಕೀಯ ಶಿಕ್ಷಣದ ಪ್ರಸಕ್ತ ವಿದ್ಯಾಮಾನ, ತುರ್ತು ಆಗಬೇಕಿರುವ ಕೆಲಸ, ಹೊಸ ಮಾರ್ಪಾಡು ಇತ್ಯಾದಿ
ಹಲವು ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.