ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ವಿಳಂಬ: ಹೆಚ್ಚಿದ ಆತಂಕ


Team Udayavani, Jul 19, 2017, 11:21 AM IST

vydyakiya-seet.jpg

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಸೀಟ್‌ ಮ್ಯಾಟ್ರಿಕ್‌ ಪ್ರಕಟಿಸದೇ ಇರುವುದರಿಂದ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆ ವಿಳಂಬವಾಗಲಿದೆ.

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ತೇರ್ಗಡೆಯಾಗಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಆರಂಭವಾಗಿದೆ. ಆದರೆ, ಈ ವರ್ಷ ಎಷ್ಟು ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟು ರಾಜ್ಯದಲ್ಲಿ ಲಭ್ಯವಿದೆ ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಸೀಟು ಸಿಗಬಹುದು ಎಂಬಿತ್ಯಾದಿ ಅಂಶಗಳನ್ನು ಒಳಗೊಂಡಿರುವ ಸೀಟ್‌ ಮ್ಯಾಟ್ರಿಕ್‌ ಅನ್ನು ರಾಜ್ಯ ಸರ್ಕಾರ ಇನ್ನು ಕೆಇಎಗೆ ನೀಡಿಲ್ಲ.

ರಾಜ್ಯ ಸರ್ಕಾರ ಈಗಾಗಲೇ ಸೀಟ್‌ ಮ್ಯಾಟ್ರಿಕ್ಸ್‌ ನೀಡಬೇಕಿತ್ತು. ಆದರೆ, ಇನ್ನು ನೀಡಿಲ್ಲ. ಇದರಿಂದ ಬಹುತೇಕ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಷ್ಟು ಸೀಟು ಲಭ್ಯವಿದೆ ಹಾಗೂ ಯಾವ ರ್‍ಯಾಂಕ್‌ಗೆ ಯಾವ ಕಾಲೇಜು ಲಭ್ಯವಾಗಬಹುದು ಎಂಬ ಯಾವ ಮಾಹಿತಿಯೂ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಆಪ್ಷನ್‌ ಎಂಟ್ರಿ ಆರಂಭವಾದ ನಂತರವೇ ಕಾಲೇಜುಗಳ ಮಾಹಿತಿ ಲಭ್ಯವಾಗಲಿದೆ.

ನೀಟ್‌ ರ್‍ಯಾಂಕ್‌ ಆರ್ಧಾರದಲ್ಲಿ ಸೀಟು ಲಭ್ಯವಾಗದೇ ಇದ್ದರೆ, ಸಿಇಟಿ ರ್‍ಯಾಂಕ್‌ ಆಧಾರದಲ್ಲೇ ಎಂಜಿನಿಯರಿಂಗ್‌ ಅಥವಾ ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ ಸೇರಬಹುದೆಂದು ಆಶಾ ಭಾವನೆಹೊಂದಿದ್ದ ವಿದ್ಯಾರ್ಥಿಗಳಿಗೂ ನಿರಾಸೆಯಾಗಿದೆ. ವೈದ್ಯಕೀಯ ಕೋರ್ಸ್‌ನ ಮೊದಲ ಹಂತದ ಸೀಟು ಹಂಚಿಕೆಯ ನಂತರ ಎಂಜಿನಿಯರಿಂಗ್‌ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಬೇಕು ಎಂದು ಹಲವು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು.

ಆದರೆ, ಕೆಇಎ ಇದಕ್ಕೆ ಅವಕಾಶ ನೀಡಿಲ್ಲ. ಎಂಜಿನಿಯರಿಂಗ್‌ ಎರಡನೇ ಸುತ್ತಿನ ಸೀಟು ಹಂಚಿಕೆ ಮುಗಿದೆ. ಎಂಜಿನಿಯರಿಂಗ್‌ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಲ್ಲಿ ಕೆಲವರು ವೈದ್ಯಕೀಯ ಕೋರ್ಸ್‌ಗೆ ನೀಟ್‌ ಅಡಿಯಲ್ಲಿ ಸೀಟು ಪಡೆದು, ಎಂಜಿನಿಯರಿಂಗ್‌ ಸೀಟನ್ನು ಕೆಇಎಗೆ ಒಪ್ಪಿಸುವ ಸಾಧ್ಯತೆ ಇದೆ. ಉಳಿಕೆಯಾಗಿರುವ ಎಲ್ಲಾ ಸೀಟುಗಳನ್ನು ಎಂಜಿನಿಯರಿಂಗ್‌ 2ನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆ ಮಾಡುವುದಕ್ಕೆ ಪ್ರಾಧಿಕಾರ ನಿರ್ಧರಿಸಿದೆ.

ಈ ಮಧ್ಯೆ, ವಿದ್ಯಾರ್ಥಿಗಳಿಗೆ ಇನ್ನೊಂದು ಸಂಕಟ ಎದುರಾಗಿದೆ. ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್‌ ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು. ಇಲ್ಲವಾದರೆ, ಸೀಟು ರದ್ದಾಗಲಿದೆ ಎಂಬ ಸಂದೇಶ ಪ್ರಾಧಿಕಾರ ನೀಡಿದೆ. ಇದರಿಂದ ಪಾಲಕರು ಹಾಗೂ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೆಯೇ ನೀಟ್‌ ಅಡಿಯಲ್ಲಿ ಸೀಟು ಲಭ್ಯವಾಗುವುದಿಲ್ಲ ಎಂಬ ಸಂದೇಶವನ್ನು ಕೆಲವು ವಿದ್ಯಾರ್ಥಿಗಳಿಗೆ ಕಳುಹಿಸಲಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.

ಪ್ರಸ್ತಕ ಸಾಲಿನಿಂದಲೇ ವೈದ್ಯಕೀಯ ಶಿಕ್ಷಣದ ಪ್ರವೇಶ ಶುಲ್ಕ ಶೇ.10ರಷ್ಟು ಏರಿಸಲು ಸರ್ಕಾರ ನಿರ್ಧರಿಸಿದ್ದು, ಶುಲ್ಕದ ವಿವರವನ್ನು ಇನ್ನು ಪ್ರಾಧಿಕಾರಕ್ಕೆ ನೀಡಿಲ್ಲ. ಕಳೆದ ವರ್ಷ ಸರ್ಕಾರಿ ವೈದ್ಯ ಸೀಟಿಗೆ 70 ಸಾವಿರ ಹಾಗೂ ಖಾಸಗಿ ಪ್ರವೇಶ ಶುಲ್ಕ 5.85 ಲಕ್ಷ ವಿಧಿಸಲಾಗಿತ್ತು. ಶೇ.10ರಷ್ಟು ಹೆಚ್ಚಳದಿಂದ ಈ ವರ್ಷ ಸರ್ಕಾರಿ ಕಾಲೇಜು ಪ್ರವೇಶ ಶುಲ್ಕ 77 ಸಾವಿರ ಹಾಗೂ ಖಾಸಗಿ ಸೀಟಿಗೆ 6.35 ಲಕ್ಷ ಶುಲ್ಕವಾಗಲಿದೆ.

ಸರ್ಕಾರಿ ವೈದ್ಯಕೀಯ ಕಾಲೇಜಿನ ಶುಲ್ಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 16,000 ರೂ. ಶುಲ್ಕ ಇರಲಿದೆ. ಆದರೆ, ಈ ಬಗ್ಗೆ ಅಧಿಕೃತ ಆದೇಶ ಇನ್ನು ಪ್ರಾಧಿಕಾರಕ್ಕೆ ಸಿಕ್ಕಿಲ್ಲ. ಹಾಗೆಯೇ ಈ ಬಾರಿ ರಾಜ್ಯದಲ್ಲಿ ಆರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು 100ರಿಂದ 150ಕ್ಕೆ ಹಾಗೂ ಕಿಮ್ಸ್‌ ವೈದ್ಯಕೀಯ ಕಾಲೇಜಿನಲ್ಲಿ 150ರಿಂದ 200ಕ್ಕೆ  ಏರಿಸಲಾಗಿದೆ. ಇದರಿಂದ ಹೆಚ್ಚುವರಿ 350 ಸರ್ಕಾರಿ ಸೀಟುಗಳು ಲಭ್ಯವಾಗಿದೆ. 

ಸರ್ಕಾರದಿಂದ ಇನ್ನು ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ಹಾಗೂ ಶುಲ್ಕ ವಿವರ ಬಂದಿಲ್ಲ. ಸರ್ಕಾರದಿಂದ ಸೀಟ್‌ ಮ್ಯಾಟ್ರಿಕ್ಸ್‌ ನೀಡಿದ ನಂತರವೇ ಸೀಟು ಹಂಚಿಕೆ ಪ್ರಕ್ರಿಯೆ ಮುಂದುವರಿಸಲು ಸಾಧ್ಯ. ವೈದ್ಯಕೀಯ ಸೀಟು ಹಂಚಿಕೆ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ.
-ಗಂಗಾಧರಯ್ಯ, ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಟಾಪ್ ನ್ಯೂಸ್

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

naksal (2)

Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.