ಇಂದು ಔಷಧ ಅಂಗಡಿಗಳು ಬಂದ್‌


Team Udayavani, Sep 28, 2018, 6:30 AM IST

mediocal.jpg

ಬೆಂಗಳೂರು: ಆನ್‌ಲೈನ್‌ನಲ್ಲಿ ಔಷಧ ಮಾರಾಟ ಕುರಿತಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆ ರದ್ಧತಿಗೆ ಒತ್ತಾಯಿಸಿ ಅಖೀಲ ಭಾರತ ಕೆಮಿಸ್ಟ್‌ ಮತ್ತು ಡ್ರಗಿಸ್ಟ್‌ ಸಂಸ್ಥೆಯು ಶುಕ್ರವಾರ ರಾಷ್ಟ್ರವ್ಯಾಪಿ ಔಷಧ ಮಳಿಗೆ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಔಷಧ ಲಭ್ಯತೆಯಲ್ಲಿ ವ್ಯತ್ಯಯವಾಗುವ ಭೀತಿ ಎದುರಾಗಿದೆ.

ರಾಜ್ಯದಲ್ಲಿ ಸುಮಾರು 24,000 ಔಷಧಾಲಯಗಳಿದ್ದು, ಬೆಂಗಳೂರಿನಲ್ಲಿ 8000ಕ್ಕೂ ಹೆಚ್ಚು ಔಷಧ ಮಳಿಗೆಗಳಿವೆ ಎಂಬ ಅಂದಾಜು ಇದೆ. ಈ ಎಲ್ಲ ಮಳಿಗೆಗಳು ಗುರುವಾರ ಮಧ್ಯರಾತ್ರಿಯಿಂದ ಶುಕ್ರವಾರ ಮಧ್ಯರಾತ್ರಿವರೆಗೆ ಬಂದ್‌ ಆಗಿರಲಿವೆ ಎಂದು ಅಖೀಲ ಭಾರತ ಕೆಮಿಸ್ಟ್‌ ಮತ್ತು ಡ್ರಗಿಸ್ಟ್‌ ಸಂಸ್ಥೆಯ ಕರ್ನಾಟಕ ಘಟಕದ ಅಧ್ಯಕ್ಷ ಆರ್‌.ರಘುನಾಥರೆಡ್ಡಿ ಹೇಳಿದ್ದಾರೆ. ಇ- ಫಾರ್ಮಸಿ ವ್ಯವಸ್ಥೆ ವಿರುದ್ಧ ಹೋರಾಟಕ್ಕೆ ಬೃಹತ್‌ ಬೆಂಗಳೂರು ಕೆಮಿಸ್ಟ್‌ ಮತ್ತು ಡ್ರಗಿಸ್ಟ್‌ ಸಂಸ್ಥೆ ಬೆಂಬಲ ಸೂಚಿಸಿದ್ದರೂ ಮಳಿಗೆ ಬಂದ್‌ ಮಾಡದಿರಲು ನಿರ್ಧರಿಸಿದೆ.

ಗರಿಷ್ಠ ಮಾರಾಟ ಬೆಲೆಗಿಂತಲೂ ಶೇ.50, ಶೇ. 60ರಷ್ಟು ರಿಯ್ತಾಯಿ ದರದಲ್ಲಿ ಔಷಧ ಪೂರೈಸುವುದಾಗಿ ಪ್ರಚಾರ ನಡೆಸಿ ಇ- ಫಾರ್ಮಸಿ ಸಂಸ್ಥೆಗಳು ಗ್ರಾಹಕರನ್ನು ಆಕಷಿಸುತ್ತಿವೆ. ಈ ಬಗ್ಗೆ ಔಷಧ ನಿಯಂತ್ರಣ ಮಂಡಳಿ ಮೇಲ್ವಿಚಾರಣೆ ನಡೆಸದ ಕಾರಣ ಔಷಧಗಳ ಗುಣಮಟ್ಟ, ಪ್ರಮಾಣಗಳ ಬಗ್ಗೆ ಗ್ರಾಹಕರಿಗೆ ಖಾತರಿಯೇ ಇಲ್ಲದಂತಾಗಿದೆ ಎಂದು ಅವರು ದೂರಿದ್ದಾರೆ.

ಅಮೂಲ್ಯವಾದ ಔಷಧಗಳನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಅವಕಾಶ ನೀಡದಂತೆ ಮನವಿ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬದಲಿಗೆ ಆನ್‌ಲೈನ್‌ನಲ್ಲಿ ಔಷಧ ಮಾರಾಟಕ್ಕೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಆ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಹಿಂಪಡೆಯುವ ಮೂಲಕ ಆನ್‌ಲೈನ್‌ನಲ್ಲಿ ಔಷಧ ಮಾರಾಟಕ್ಕೆ ನಿಯಂತ್ರಣ ಹೇರಬೇಕು ಎಂದು ಒತ್ತಾಯಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಷ್ಕರವಿಲ್ಲ: ಪ್ರತಿಭಟನೆ
ಈ ಹಿಂದೆ ಎರಡು ಬಾರಿ ಔಷಧ ಮಳಿಗೆಗಳನ್ನು ಬಂದ್‌ ಮಾಡಿ ಹೋರಾಟ ನಡೆಸಿದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಇ- ಫಾರ್ಮಸಿ ವ್ಯವಹಾರಕ್ಕೆ ಸಂಸ್ಥೆಯ ತೀವ್ರ ವಿರೋಧವಿದೆ. ಆದರೆ ಮುಷ್ಕರಕ್ಕೆ ಬದಲಿಗೆ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದೆ. ಮಳಿಗೆಗಳನ್ನು ಬಂದ್‌ ಮಾಡಿದರೆ ನಾನಾ ಸಂಸ್ಥೆಗಳ ಸರಣಿ ಔಷಧಾಲಯಗಳು ವಿಶೇಷ ರಿಯಾಯ್ತಿ ನೀಡಿ ಗ್ರಾಹಕರನ್ನು ಸೆಳೆಯಲಿವೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಪುರಭವನದ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯಪಾಲರು, ಸಂಸದರು, ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹೋರಾಟ ಮುಂದುವರಿಸಲಾಗುವುದು. ಶುಕ್ರವಾರ ನಗರದಲ್ಲಿ ಶೇ.80ರಷ್ಟು ಮಳಿಗೆಗಳು ತೆರೆದಿರಲಿವೆ ಎಂದು ಬೃಹತ್‌ ಬೆಂಗಳೂರು ಕೆಮಿಸ್ಟ್‌ ಮತ್ತು ಡ್ರಗಿಸ್ಟ್‌ ಸಂಸ್ಥೆ ಅಧ್ಯಕ್ಷ ಎಂ.ಕೆ.ಮಾಯಣ್ಣ ತಿಳಿಸಿದರು.

ಅಗತ್ಯ ಪ್ರಮಾಣದಲ್ಲಿ ಔಷಧ ದಾಸ್ತಾನು
ಔಷಧಾಲಯಗಳ ಬಂದ್‌ ಕರೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಮತ್ತು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೀವನಾವಶ್ಯಕ ಔಷಧಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿದೆ. ಎಲ್ಲಿಯೂ ಯಾವುದೇ ರೀತಿಯಲ್ಲಿ ಔಷಧ ಕೊರತೆ ಸೇರಿದಂತೆ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿ ಔಷಧಾಲಯ ಸೇವೆ ಅಬಾಧಿತ
ರಾಜ್ಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಔಷಧಾಲಯಗಳು, ಖಾಸಗಿ ಆಸ್ಪತ್ರೆ, ನರ್ಸಿಂಗ್‌ ಹೋಂ, ಕಾರ್ಪೋರೇಟ್‌ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳಿಗೆ ಮುಷ್ಕರದಿಂದ ವಿನಾಯ್ತಿಯಿದ್ದು, ಅವು ಶುಕ್ರವಾರ ಎಂದಿನಂತೆ ತೆರೆದಿರುತ್ತವೆ ಎಂದು ಔಷಧ ನಿಯಂತ್ರಣ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.