ಮೂರು ತಿಂಗಳಲ್ಲಿ ಶೇ.100 ಕಸ ವಿಂಗಡಿಸುವ ಗುರಿ
78 ವಾರ್ಡ್‌ಗಳಲ್ಲೂ ಪ್ರತ್ಯೇಕ ಹಸಿಕಸ ಯೋಜನೆಗೆ ಶೀಘ್ರ ಚಾಲನೆ
Team Udayavani, Sep 18, 2020, 12:05 PM IST
ಬೆಂಗಳೂರು: ಪಾಲಿಕೆ ವ್ಯಾಪ್ತಿಯ 78 ವಾರ್ಡ್‌ಗಳಲ್ಲೂ ಪ್ರತ್ಯೇಕ ಹಸಿಕಸ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.
ಗುರುವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯೇಕ ಕಸ ಸಂಗ್ರಹ ಯೋಜನೆ ಜಾರಿ ಸಂಬಂಧ ಸಭೆ ನಡೆಸಲಾಯಿತು.ಈ ವೇಳೆ ಮಾತನಾಡಿದ ಆಯುಕ್ತರು, ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತ್ಯೇಕ ಕಸ ಸಂಗ್ರಹ ಯೋಜನೆಗೆ 38 ವಾರ್ಡ್‌ಗಳಲ್ಲಿ ಕಾರ್ಯಾದೇಶ ನೀಡಲಾಗಿದ್ದು, ಉಳಿದ 78 ವಾರ್ಡ್‌ಗಳಲ್ಲಿ ಪ್ರತ್ಯೇಕ ಕಸ ಸಂಗ್ರಹಿಸುವ ಜಾರಿ ಕುರಿತು ಗುತ್ತಿಗೆದಾರರಿಗೆ ಕೆಲಸ ಆರಂಭಕ್ಕೆ ಸ್ವೀಕೃತಿ ಪತ್ರ ನೀಡಲಾಗಿದೆ. ಶೀಘ್ರವಾಗಿ ಕೆಲಸ ಆರಂಭಿಸಲು ಸೂಚಿಸಲಾಗಿದೆ ಎಂದರು.
ಪಾಲಿಕೆಯ ಹಸಿಕಸ ಸಂಸ್ಕರಣಾ ಘಟಕಗಳಲ್ಲಿ ವಾಸನೆ ಬರದಂತೆ ಹಾಗೂ ವೇಸ್ಟ್ ಟು ಎನರ್ಜಿ ಘಟಕಗಳನ್ನು ಶೀಘ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಬೆಸ್ಕಾಂ ಹಾಗೂ ಕೆಪಿಸಿಎಲ್ ಜತೆ ಸೇರಿ ಅನುಷ್ಟಾನ ಮಾಡಲಾಗುವುದು. ಇದ ಕ್ಕಾಗಿ ಬಿಡದಿ ಬಳಿ ಜಮೀನು ಗುರುತಿಸಲಾಗಿದ್ದು, ಈಗಾಗಲೇ ಟೆಂಡರ್ ಅಂತಿಮವಾಗಿದೆ. ಕನ್ನಹಳ್ಳಿ, ಸೀಗೇಹಳ್ಳಿಯಲ್ಲಿ ವೇಸ್ಟ್ ಟು ಎನರ್ಜಿ ಘಟಕ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ. ಮಾವಳ್ಳಿಪುರ ದಲ್ಲಿ ಎರಡು ಹಾಗೂ ದೊಡ್ಡಬಿದರೆಕಲ್ಲಿ ಘಟಕ ಸ್ಥಾಪನೆ ಮಾಡುವ ಪ್ರಸ್ತಾವನೆ ಇದೆ. ಕಾರ್ಯಾದೇಶ ನೀಡಿದರೆ ಕೆಲಸ ಪ್ರಾರಂಭವಾಗಲಿದ್ದು, ಇದಕ್ಕೆ ಆಡಳಿತಾಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದರು.
ವಿಶೇಷ ಆಯುಕ್ತ (ಘನತ್ಯಾಜ್ಯ) ಡಿ.ರಂದೀಪ್, ಜಂಟಿ ಆಯುಕ್ತ ಸರ್ಫರಾಜ್ ಖಾನ್, ಅಧೀಕ್ಷಕ ಎಂಜಿನಿಯರ್ ಬಸವರಾಜ್ ಕಬಾಡೆ, ಘನತ್ಯಾಜ್ಯ ನಿರ್ವಹಣೆ ಮುಖ್ಯ ಎಂಜಿನಿಯರ್ ವಿಶ್ವನಾಥ್ ಇತರರಿದ್ದರು.
3 ತಿಂಗಳಲ್ಲಿ ಶೇ.100 ಕಸ ವಿಂಗಡನೆ ಗುರಿ: ನಗರದಲ್ಲಿ ಕಸ ಸಂಗ್ರಹ ಮಾಡುವುದಕ್ಕೆ ಚಾಲನೆ ನೀಡುತ್ತಿರುವ ಬೆನ್ನಲ್ಲೇ ನಗರದಲ್ಲಿ ಶೇ.100 ಕಸ ವಿಂಗಡಣೆಗೆ ಪಾಲಿಕೆ ಗಡುವು ನೀಡಲು ಮುಂದಾಗಿದೆ. ಈಗಾಗಲೇ ನೂತನ ಯೋಜನೆ ಜಾರಿಯಾಗುತ್ತಿರುವ ವಾರ್ಡ್‌ಗಳಲ್ಲಿ ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗುತ್ತಿದ್ದು, ಇದೇ ಮಾದರಿ ನಗರದ ಎಲ್ಲೆಡೆ ಅಳವಡಿಸಿಕೊಳ್ಳಲು ಪಾಲಿಕೆ ನಿರ್ಧರಿಸಿದೆ.
ಕಸ ವಿಲೇವಾರಿ ಮಾಹಿತಿಗೆ ನೂತನ ಆ್ಯಪ್:ಒಣ-ಹಸಿ ಕಸ ವಿಂಗಡಣೆ ಸಂಬಂಧ ನೂತನ ಬಿಬಿಎಂಪಿ ಆ್ಯಪ್ ಬಿಡುಗಡೆ ಮಾಡಲಾಗುವುದು ಆ್ಯಪ್ ಮೂಲಕ ಸಾರ್ವಜನಿಕರು ಕಸದ ವಾಹನದ ಲೈವ್ ಲೊಕೇಷನ್ (ಆಟೋ ಇರುವ ಸ್ಥಳ)ಮಾಹಿತಿ ಪಡೆಯಬಹುದು. ಕಸದ ವಾಹನ ಮನೆ ಬಳಿಗೆ ಎಷ್ಟು ಹೊತ್ತಿಗೆ ಬರಬಹುದು ಎಂದು ತಿಳಿಬಹುದು. ಒಂದು ವೇಳೆ ಬರದಿದ್ದರೆ ದೂರು ನೀಡಬಹುದು. ಹಸಿ ಕಸವನ್ನು ಸ್ಥಳೀಯವಾಗಿ ‘ನಮ್ಮ ಕಸ ನಮ್ಮ ಜವಾಬ್ದಾರಿ’ಘೋಷಣೆಯ ಮೂಲಕ ಸಂಸ್ಕರಿಸಲು ಕ್ರಮ ಕೈಗೊಳ್ಳಬೇಕು. ಕಸದ ಬಗ್ಗೆ ಸಾರ್ವಜನಿಕರು ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮಗ್ರ ಮಾಹಿತಿಯ ಕೈಪಿಡಿ ಬಿಡುಗಡೆ ಮಾಡಲಾಗುವುದು ಎಂದು ಆಯುಕ್ತರು ತಿಳಿಸಿದರು.
ಆದಾಯ ಸಂಪನ್ಮೂಲ ಹೆಚ್ಚಳಕ್ಕೆ ಕ್ರಮ: ಪಾಲಿಕೆಯ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಪಾಲಿಕೆಯ ಆದಾಯಕ್ಕಿಂತ ಹೆಚ್ಚು ವೆಚ್ಚ ಭರಿಸಬೇಕಾಗಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಪರಿಷ್ಕರಿಸಿ ಮಂಡನೆಮಾಡಲಿದ್ದಾರೆ. ವರದಿ ಮಂಡನೆಯಾದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತಾಧಿಕಾರಿ ಗೌರವ್ ಗುಪ್ತಾ ತಿಳಿಸಿದರು.
ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಸ ಸಂಗ್ರಹಣೆ, ಸಾಗಾಣಿಕೆ, ವಿಲೇವಾರಿ ಬಗ್ಗೆ ಘನತ್ಯಾಜ್ಯ ವಿಭಾಗದ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಸಮಸ್ಯೆ ಪರಿಹಾರಕ್ಕೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಿದ್ದೇವೆ. – ಗೌರವ್ ಗುಪ್ತಾ, ಬಿಬಿಎಂಪಿ ಆಡಳಿತಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.