ಸೋತ ಕೈ ನಾಯಕರಿಂದ ಮೈತ್ರಿಗೆ ಆಕ್ಷೇಪ
Team Udayavani, Jul 10, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಜೆಡಿಎಸ್ ಜತೆ ಮಾಡಿಕೊಂಡಿರುವ ಮೈತ್ರಿಯನ್ನು ಲೋಕಸಭೆ ಚುನಾವಣೆಯಲ್ಲೂ ಮುಂದುವರಿಸಲು ಕಾಂಗ್ರೆಸ್‌ನಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಜೆಡಿಎಸ್ ಜತೆ ಸೀಟು ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಿದರೆ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು 2018 ವಿಧಾನಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ಸೋಮವಾರ ನಡೆದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿಗಳ ಸಭೆಯಲ್ಲಿ ಬಹುತೇಕ ಮಂದಿ ಜೆಡಿಎಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದ ಬಗ್ಗೆಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈತ್ರಿ ಮುಂದುವರಿದರೆ ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೂ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ವಿಧಾನಸಭೆ ಚುನಾವಣೆ ಮತ್ತು ಸರ್ಕಾರ ರಚನೆ ಬಳಿಕ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿದ್ದು, ಕಾಂಗ್ರೆಸ್ ಪಕ್ಷ ಬಲವರ್ಧನೆ ಮಾಡುವುದು ಕಷ್ಟವಾಗುತ್ತದೆ ಎಂದು ಈ ಭಾಗದ ಸೋತ ಅಭ್ಯರ್ಥಿಗಳು ತಮ್ಮ ಆತಂಕವನ್ನು ಸಭೆಯಲ್ಲಿ ಹೊರಹಾಕಿದ್ದಾರೆ ಎಂದು ಮೂಲಗಳು ಹೇಳಿವೆ. ಜತೆಗೆ, ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಈ ಸರ್ಕಾರದಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾಗದಂತೆ ನೋಡಿಕೊಳ್ಳಬೇಕು. ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನ ನೀಡಿದರೆ ಲೋಕಸಭೆ ಚುನಾವಣೆಯಲ್ಲಿ ಮತ್ತಷ್ಟು ಸಮಸ್ಯೆಯಾಗುತ್ತದೆ ಎಂದು ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವರ್ಗಾವಣೆಯಲ್ಲಿ ಸ್ಪಂದನೆ ನೀಡಿ:
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನ ಸೋತ ಅಭ್ಯರ್ಥಿಗಳ ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ತಾವು ಹೇಳಿದ ಅಧಿಕಾರಿಗಳನ್ನು ತಮ್ಮ ಕ್ಷೇತ್ರಗಳಿಗೆ ಹಾಕುವಂತೆ ಮುಖ್ಯಮಂತ್ರಿಯವರಿಗೂ ಪಕ್ಷದಿಂದ ಸೂಚನೆ ನೀಡಬೇಕು ಎಂದು ಕೋರಿರುವುದಾಗಿ ತಿಳಿದುಬಂದಿದೆ.
ಈ ಮಧ್ಯೆ ನಿಗಮ-ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ತಮಗೂ ಆದ್ಯತೆ ನೀಡುವಂತೆ ಮಹಿಳಾ ಸ್ಪರ್ಧಿಗಳಾಗಿದ್ದ ಸುಷ್ಮಾ ರಾಜಗೋಪಾಲ್ ಹಾಗೂ ಚಂದ್ರಕಲಾ ನಾಯಕರಿಗೆ ಮನವಿ ಮಾಡಿದ್ದಾರೆ. ಅವರಿಗೆ ಧ್ವನಿಗೂಡಿರುವ ಕೆಲವು ಅಭ್ಯರ್ಥಿಗಳು, ನಿಗಮ- ಮಂಡಳಿಗಳ ನೇಮಕಾತಿಯಲ್ಲಿ ತಾವು ಸೂಚಿಸುವ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ದೂರು:
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಹುತೇಕ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಅಸಮಾಧಾನ ಹೊರಹಾಕಿದ್ದಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ. ಈ ಕುರಿತು ಲಿಖೀತ ದೂರು ಸಲ್ಲಿಸುವಂತೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಬೇಗ ಅಭ್ಯರ್ಥಿ ಘೋಷಣೆಗೆ ಒತ್ತಾಯ:
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಜೆಡಿಎಸ್ ಜತೆಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ. ಇದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಲೆಕ್ಕಾಚಾರವಾಗಿದ್ದು, ಹೈಕಮಾಂಡ್ ಆದೇಶ ಪಾಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆಯಲ್ಲಿ ಎಲ್ಲರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಭ್ಯರ್ಥಿಗಳು, ಆದಷ್ಟು ಬೇಗ ಕ್ಷೇತ್ರಗಳ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆಂದು ಕೋರಿದ್ದಾರೆ. ಅಲ್ಲದೆ, ಬಿಜೆಪಿ ಅಭ್ಯರ್ಥಿಗಳನ್ನು ಎದುರಿಸಲು ಈಗಿನಿಂದಲೇ ಕ್ಷೇತ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳುವಂತೆ ನಾಯಕರು ಸೋತ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಏಕೆ ಸೋತಿದ್ದೇವೆ ಎಂದು ಸೂಕ್ಷ್ಮವಾಗಿ ಅವಲೋಕನ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚರ್ಚಿಸಿದ್ದೇವೆ.
– ಕಾಗೋಡು ತಿಮ್ಮಪ್ಪ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.