ಗಲಭೆ ನಡೆಸಿದರೆ ಗಡಿಪಾರು ಮಾಡಿ
Team Udayavani, Jan 18, 2018, 6:00 AM IST
ಬೆಂಗಳೂರು: ಕೋಮುಭಾವನೆ ಕೆರಳಿಸುವ ಮೂಲಭೂತವಾದಿಗಳನ್ನು ಪತ್ತೆ ಮಾಡಿ ಅಗತ್ಯವೆನಿಸಿದರೆ ಗೂಂಡಾಕಾಯ್ದೆ ಅಡಿ ಪ್ರಕರಣ ದಾಖಲಿಸಿ ಗಡೀಪಾರು ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತೀಯವಾದಿಗಳು ಇರುವವರೆಗೆ ಕೋಮುಗಲಭೆ ಇರುತ್ತದೆಂದು ಹೇಳಿದರು.
ಕೋಮುಗಲಭೆ ತಡೆಗಟ್ಟಬೇಕಾದರೆ ಮುಂಜಾಗ್ರತೆ ವಹಿಸುವುದೊಂದೇ ದಾರಿಯಾಗಿದೆ. ಕೆಲ ದಿನಗಳಿಂದ ಮೂಲಭೂತವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚುr ಸಕ್ರಿಯರಾಗಿದ್ದು, ಪ್ರಚೋದನಾಕಾರಿ ಹೇಳಿಕೆ, ಬರಹಗಳನ್ನು ಪ್ರಕಟಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಅಂತಹ ಕೃತ್ಯವನ್ನು ಯಾರೇ ಮಾಡಿದರೂ, ಯಾವುದೇ ಧರ್ಮದ ಸಂಘಟನೆಗೆ ಸೇರಿದವರಾಗಿದ್ದರೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ. ಅಗತ್ಯಬಿದ್ದರೆ ಗಡಿಪಾರು ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದರು.
ಹಲ್ಲೆಕೋರರ ವಿರುದ್ಧ ಕ್ರಮ
ಪೊಲೀಸರ ಕೆಲಸ ಬಹಳ ಕಠಿಣವಾದ ಕೆಲಸ. ಪೊಲೀಸರ ಮೇಲೆ ಹಲ್ಲೆ ನಡೆಸುವವರು ಮತೀಯವಾದಿಗಳು, ಕೋಮುವಾದಿಗಳೇ ಹೊರತು ಬೇರೆ ಯಾರೂ ಅಲ್ಲ. ಅಂತಹ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಸಿಎಂ ಹೇಳಿದರು.
ಗುಪ್ತಚರದಳ ವೈಫಲ್ಯ
ಮಂಗಳೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಗುಪ್ತಚರ ದಳದ ವೈಫಲ್ಯ ಇರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ದೀಪಕ್‌ರಾವ್ ಮತ್ತು ಬಷೀರ್ ಕೊಲೆಗೆ ಮುಂಜಾಗ್ರತೆ ವಹಿಸಿದ್ದರೆ ಕಾನೂನು ಕ್ರಮಕೈಗೊಳ್ಳಬಹುದಿತ್ತು. ಆದರೆ, ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿ ಕೆಲ ಸೂಕ್ಷ್ಮಪ್ರದೇಶಗಳಲ್ಲಿ ಗುಪ್ತಚರ ದಳ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.
ಗುಪ್ತಚರಕ್ಕೆ ಪ್ರತ್ಯೇಕ ನೇಮಕಾತಿ
ಇತ್ತೀಚಿನ ದಿನಗಳಲ್ಲಿ ರಾಜ್ಯ ಗುಪ್ತಚರ ದಳದ ಕಾರ್ಯವೈಖರಿ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ನೇಮಕಾತಿ ಪ್ರಕ್ರಿಯೆ ನಡೆಸಿ ಅವರಿಗೆ ವಿಶೇಷ ತರಬೇತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯನವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಈಗಾಗಲೇ ನೇಮಕಾತಿಯೂ ಆರಂಭವಾಗಿದೆ ಎಂದಿದ್ದಾರೆ. ಅಲ್ಲದೆ ಗುಪ್ತಚರ ವಿಭಾಗದಲ್ಲಿ ಲೋಪದೋಷ ಇರುವುದನ್ನು ಒಪ್ಪಿಕೊಂಡಿರುವ ಅವರು, ಇದನ್ನು ಸರಿಪಡಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದರು.
ಮಾದಕ ವಸ್ತು ಮಾರಾಟ ಜಾಲ ಪತ್ತೆಗೆ ಸೂಚನೆ
ಮಾದಕ ವಸ್ತುಗಳ ಮಾರಾಟ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮಾರಾಟಗಾರರನ್ನು ಬಂಧಿಸುವುದರ ಜತೆಗೆ ಅದು ಎಲ್ಲಿಂದ ಸರಬರಾಜು ಆಗುತ್ತಿದೆ ಎಂಬುದನ್ನು ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾದಕ ವಸ್ತುಗಳ ಮಾರಾಟದ ಮೂಲಬೇರು ಪತ್ತೆ ಹಚ್ಚಿ ಕಡಿವಾಣ ಹಾಕುವಂತೆಯೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ರಾಜ್ಯದಲ್ಲಿ 2016ಕ್ಕೆ ಹೋಲಿಸಿದರೆ 2017ರಲ್ಲಿ ಅಪರಾಧಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ರಾಜ್ಯದಲ್ಲಿ ಶೇ.1ರಷ್ಟು, ರಾಷ್ಟ್ರೀಯ ಮಟ್ಟದಲ್ಲಿ ಶೇ.6ರಷ್ಟು ಕಡಿಮೆಯಾಗಿದೆ. ಇನ್ನೂ ಗಣನೀಯವಾಗಿ ಕಡಿಮೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ವೇಳೆ ಗೃಹ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ, ಮುಖ್ಯಮಂತ್ರಿಯರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಹಿರಿಯ ಮತ್ತು ಕಿರಿಯ ಐಪಿಎಸ್ ಅಧಿಕಾರಿಗಳು ಇದ್ದರು.
ಗುಪ್ತದಳ ವಿಭಾಗಕ್ಕೆಂದೇ ಪ್ರತ್ಯೇಕ ನೇಮಕಾತಿ ಪ್ರಕ್ರಿಯೆ ನಡೆಸಲು ಆದೇಶಿಸಲಾಗಿದೆ. ಅದರಂತೆ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದೆ. ನೇಮಕ ಪ್ರಕ್ರಿಯೆ ವಿಶೇಷವಾಗಿ ನಡೆಯುತ್ತಿದೆ. ನೇಮಕಗೊಂಡ ಸಿಬ್ಬಂದಿಗೆ ಅತ್ಯಾಧುನಿಕ ತರಬೇತಿ ನೀಡಿ ಸಮರ್ಥರನ್ನಾಗಿ ರೂಪಿಸಲಾಗುವುದು ಎಂದು ಹೇಳಿದರು.
ಗುಪ್ತಚರ ದಳಕ್ಕೆ ವರ್ಗಾವಣೆ ಎಂದರೆ ಅದೊಂದು ಶಿಕ್ಷೆ ಎಂಬ ಮಾತು ಇಲಾಖೆಯಲ್ಲಿದೆ. ಕೆಲವೊಮ್ಮೆ ಸಾಮಾನ್ಯ ಪೊಲೀಸ್ ವಿಭಾಗದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಪೊಲೀಸರನ್ನು ಗುಪ್ತಚರ ವಿಭಾಗಕ್ಕೆ ವರ್ಗಾವಣೆ ಮಾಡುವುದೂ ಇದೆ. ಈ ಸಮಸ್ಯೆ ತಪ್ಪಿಸಿ ಗುಪ್ತಚರ ವಿಭಾಗವನ್ನು ಶಕ್ತಿಯುತವಾಗಿ ರೂಪಿಸಲು ಪ್ರತ್ಯೇಕ ನೇಮಕಾತಿ ನಡೆಸಲಾಗುತ್ತಿದೆ. ಒಮ್ಮೆ ಗುಪ್ತಚರ ದಳಕ್ಕೆ ನೇಮಕಗೊಂಡರೆ ನಿವೃತ್ತಿವರೆಗೆ ಅಲ್ಲೇ ಕಾರ್ಯನಿರ್ವಹಿಸಬೇಕು ಎಂದರು.
ಗುಪ್ತಚರ ದಳ ಸಮರ್ಥವಾಗಿ ಕೆಲಸ ನಿರ್ವಹಿಸಿದರೆ ದೊಡ್ಡ ಮಟ್ಟದ ಅಪರಾಧಗಳನ್ನು ತಡೆಯಬಹುದು. ಪ್ರಮುಖವಾಗಿ ಗುಪ್ತಚರ ದಳದ ಅಪರಾಧ ವಿಭಾಗ ಬಲಪಡಿಸಿ, ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು. ದರೋಡೆ, ಕಳ್ಳತನ, ಸರಗಳ್ಳತನ, ಮತೀಯವಾದ, ಗೂಂಡಾಗಿರಿಗೆ ಕಾರಣರಾಗುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು. ಅದರ ಬದಲು ಅಪರಾಧಗಳು ಹೆಚ್ಚಾದರೆ ಆಯಾ ಪೊಲೀಸ್ ಠಾಣಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.