ವಾಲ್ಮೀಕಿ ಪ್ರತಿಮೆ ಅನಾವರಣ ಸಿದ್ಧತೆಗೆ 19ರಂದು ಸಭೆ
Team Udayavani, Aug 13, 2017, 11:20 AM IST
ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದ ಬಲಭಾಗದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಅನಾವರಣ ಕಾರ್ಯಕ್ರಮದ ಸ್ವಾಗತ ಸಮಿತಿ ರಚನೆ ಮತ್ತಿತರ ರೂಪುರೇಷೆ ತಯಾರಿಸಲು ಆ.19ರಂದು ಸಭೆ ನಡೆಸಲು ಅಖೀಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತೀರ್ಮಾನಿಸಿದೆ.
ಶಾಸಕರ ಭವನದಲ್ಲಿ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅಧ್ಯಕ್ಷತೆಯಲ್ಲಿ ನಡೆದ ವಾಲ್ಮೀಕಿ ಸಮಾಜದ ಮಠಾಧೀಶರು, ಮುಖಂಡರ ಪೂರ್ವಭಾವಿ ಸಭೆಯಲ್ಲಿ ಆ.19ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಪೀಠ ಮಹಾಸಂಸ್ಥಾನದಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.
ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಬೇಕಾಗಿದೆ. ಸುಮಾರು 1 ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರ ಗಣ್ಯರನ್ನು ಆಹ್ವಾನಿಸಬೇಕಿದೆ.
ಇದಕ್ಕೆ ಸ್ವಾಗತ ಸಮಿತಿ ಸೇರಿದಂತೆ ಹಲವು ಉಪಸಮಿತಿಗಳನ್ನು ರಚಿಸಬೇಕಾಗಿದೆ. ಅದಕ್ಕಾಗಿ ವಾಲ್ಮೀಕಿ ಸಮಾಜದ 12 ಮಠಾಧೀಶರ ಸಮ್ಮುಖದಲ್ಲಿ ಸಭೆ ನಡೆಸಲು ವಾಲ್ಮೀಕಿ ನಾಯಕ ಮಹಾಸಭಾ ನಿರ್ಧರಿಸಿದೆ. ಸಭೆಯಲ್ಲಿ ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನದ ಪ್ರಸನ್ನಾನಂದ ಸ್ವಾಮೀಜಿ, ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.