ಬಸವೇಶ್ವರ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ


Team Udayavani, Dec 29, 2017, 12:08 PM IST

basaveshwara-Revanna.jpg

ಬೆಂಗಳೂರು: ಸೌಲಭ್ಯಗಳ ಕೊರತೆಯಿಂದ ನಿರುಪಯುಕ್ತವಾಗಿರುವ ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣಕ್ಕೆ ಸಮಗ್ರ ಸಾರಿಗೆ ಸೇವೆ ಕಲ್ಪಿಸಲು ಮುಂದಾಗಿರುವ ಸರ್ಕಾರ, ಬಸ್‌ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಚಿಂತನೆ ನಡೆಸಿದೆ. 

ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣದ ಮೂಲಕ ಸುಮಾರು 17 ಜಿಲ್ಲೆಗಳ ಬಸ್‌ಗಳು ಹಾದುಹೋಗುತ್ತವೆ. ಆದರೆ, ಸೂಕ್ತ ಸಾರಿಗೆ ಸಂಪರ್ಕ ಸೇವೆಗಳ ಕೊರತೆ ಹಿನ್ನೆಲೆಯಲ್ಲಿ ಪ್ರಯಾಣಿಕರು ವಿಮುಖರಾಗಿದ್ದಾರೆ. ಇದರಿಂದ ಸುಮಾರು 70 ಕೋಟಿ ರೂ.ಗಳಲ್ಲಿ ನಿರ್ಮಾಣಗೊಂಡ ನಿಲ್ದಾಣವು ನಿರೀಕ್ಷಿತ ಮಟ್ಟದಲ್ಲಿ ಉಪಯೋಗ ಆಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಸಮಗ್ರ ಸಾರಿಗೆ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದರು. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಬಿಬಿಎಂಪಿ, ಸಾರಿಗೆ ಇಲಾಖೆ, ಬಿಎಂಆರ್‌ಸಿ ಒಟ್ಟಾಗಿ ಮುಖ್ಯರಸ್ತೆಯಿಂದ ಪೀಣ್ಯ ಬಸ್‌ ನಿಲ್ದಾಣದ ನಡುವೆ ಸಂಪರ್ಕ ಸೇತುವೆ ಕಲ್ಪಿಸಲು ಮುಂದಾಗಿವೆ.

ಈ ಪೈಕಿ ನಿಲ್ದಾಣದ ಪಕ್ಕದಲ್ಲೇ ಪೀಣ್ಯ ಡಿಪೋಗೆ ಮೆಟ್ರೋ ಹಾದುಹೋಗಿದೆ. ಇಲ್ಲೊಂದು ನಿಲ್ದಾಣ ನಿರ್ಮಿಸಲು ಯೋಜಿಸಲಾಗಿದೆ. ಈ ಸಂಬಂಧದ ಸಾಧಕ-ಬಾಧಕಗಳ ಕುರಿತು ಕಾರ್ಯಸಾಧು ತಾಂತ್ರಿಕ ಅಧ್ಯಯನ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು. 

ಯಶ್‌ ರಾಯಭಾರಿ: ಫೆಬ್ರವರಿ ಎರಡನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ವಿರಳ ಸಂಚಾರ ದಿನಾಚರಣೆಗೆ ಸಂಬಂಧಿಸಿದಂತೆ ಈಗಾಗಲೇ ವಿವಿಧೆಡೆಯಿಂದ ಬೆಂಬಲ ವ್ಯಕ್ತವಾಗಿದೆ. ಇದಕ್ಕೆ ನಟ ಯಶ್‌ ಪ್ರಚಾರದ ರಾಯಭಾರಿಯಾಗಿ ನೇಮಿಸಲು ನಿರ್ಧರಿಸಲಾಗಿದೆ. ಯಶ್‌ ಕೂಡ ಸಮ್ಮತಿಸಿದ್ದಾರೆ. ಇನ್ನು ಸಾರಿಗೆ ಇಲಾಖೆ ಕೂಡ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಸರ್ಕಾರೇತರ ಸ್ವಯಂ ಸೇವಾ ಸಂಘಟನೆಗಳು, ಪರಿಸರವಾದಿಗಳೊಂದಿಗೂ ಚರ್ಚೆ ನಡೆಸಲಿದೆ ಎಂದರು. 

ಟ್ರಾವೆಲೇಟರ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬಸವೇಶ್ವರ ಬಸ್‌ ನಿಲ್ದಾಣದಿಂದ ನೇರವಾಗಿ ಪೀಣ್ಯ ಕೈಗಾರಿಕಾ ಮೆಟ್ರೋ ನಿಲ್ದಾಣಕ್ಕೆ ಎಸ್ಕಲೇಟರ್‌ ಮಾದರಿಯ ಅಟೋಮೆಟಿಕ್‌ ಚಲಿಸುವ ಪಾದಚಾರಿ ಮಾರ್ಗ (ಟ್ರಾವೆಲೇಟರ್‌) ನಿರ್ಮಿಸಲು ಉದ್ದೇಶಿಸಲಾಗಿದೆ.  ಬಸವೇಶ್ವರ ಬಸ್‌ ನಿಲ್ದಾಣ-ಪೀಣ್ಯ ಕೈಗಾರಿಕಾ ಮೆಟ್ರೋ ನಿಲ್ದಾಣದ ನಡುವಿನ ಅಂತರ ಸುಮಾರು 800 ಮೀ.ನಿಂದ 1 ಕಿ.ಮೀ.

ಇದರ ನಡುವೆ ಖಾಸಗಿ ಸಹಭಾಗಿತ್ವದಲ್ಲಿ ಟ್ರಾವೆಲೇಟರ್‌ ನಿರ್ಮಿಸುವ ಚಿಂತನೆ ಇದೆ. ಇದು ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಸಾಧಕ-ಬಾಧಕಗಳ ಕುರಿತು ಕಾರ್ಯಸಾಧು ಅಧ್ಯಯನ ನಡೆಸಲಾಗುವುದು. ವಾರದಲ್ಲಿ ಈ ಸಂಬಂಧ ವರದಿ ಸಿದ್ಧಪಡಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ತಿಳಿಸಿದರು.

ಟಾಪ್ ನ್ಯೂಸ್

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.