ಮೆಟ್ರೋ ಹಿಂದಿ ಹೇರಿಕೆ; ದುಂಡುಮೇಜಿನ ಸಭೆ ಇಂದು
Team Udayavani, Jul 15, 2017, 10:54 AM IST
ಬೆಂಗಳೂರು: “ನಮ್ಮ ಮೆಟ್ರೋ’ದಲ್ಲಿ ಹಿಂದಿ ಹೇರಿಕೆ ಖಂಡಿಸಿ ಹಾಗೂ ಭಾಷಾ ಸಮಾನತೆಗಾಗಿ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ನೇತೃತ್ವದಲ್ಲಿ ಶನಿವಾರ ನಗರದ ಸಿಟಡೆಲ್ ಹೋಟೆಲ್‌ನಲ್ಲಿ ವಿವಿಧ ರಾಜ್ಯಗಳ ಮುಖಂಡರ ದುಂಡುಮೇಜಿನ ಸಭೆ ನಡೆಯಲಿದೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಡಿಎಂಕೆ ವಕ್ತಾರ ಶರವಣನ್, ಸಂಸದ ತಿರುಚ್ಚಿ ಸಿವಾ ಸೇರಿದಂತೆ ಹಲವು ರಾಜ್ಯಗಳ ಭಾಷಾ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು, ಧರ್ಮಗುರುಗಳು, ಸಾಹಿತಿಗಳು, ಪ್ರಗತಿಪರ ಚಿಂತಕರು ಈ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದೆ.
ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಅನಗತ್ಯವಾಗಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಆದ್ದರಿಂದ ಈ ಧೋರಣೆ ವಿರುದ್ಧ ಕೈಜೋಡಿಸಬೇಕು ಎಂದು ಬೆಂಬಲ ಕೋರಿ ಒಂಬತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ರಾಜ್ಯಗಳ ಮುಖಂಡರಿಗೆ ಸಂಘಟನೆ ಪತ್ರ ಬರೆದಿತ್ತು. ಇದಕ್ಕೆ ಪೂರಕವಾಗಿ ಕೆಲ ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಲಿದ್ದಾರೆ ಎಂದು ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.