ಮೆಟ್ರೋ ಸೇವೆ ವ್ಯತ್ಯಯ; ಇಂದು ನಿರ್ಧಾರ
Team Udayavani, Dec 21, 2018, 11:16 AM IST
ಬೆಂಗಳೂರು: ಮೆಟ್ರೋ ಮಾರ್ಗದ ದುರಸ್ತಿ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಸೇವೆ ಸ್ಥಗಿತಗೊಳಿಸುವ ಬಗ್ಗೆ ಬೆಂಗಳೂರು
ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಶುಕ್ರವಾರ ಬೆಳಗ್ಗೆ ನಿರ್ಧಾರ ಕೈಗೊಳ್ಳಲಿದೆ.
ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬರುವ ಶನಿವಾರ ಮತ್ತು ಭಾನುವಾರ ಟ್ರಿನಿಟಿ ವೃತ್ತ ನಿಲ್ದಾಣದಿಂದ ಇಂದಿರಾನಗರ
ನಿಲ್ದಾಣದ ನಡುವೆ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲು ಈ ಮೊದಲು ಚಿಂತನೆ ನಡೆದಿತ್ತು. ಈ ಬಗ್ಗೆ ಇನ್ನೂ ಪರಿಶೀಲನೆ ನಡೆಯುತ್ತಿದ್ದು, ಶುಕ್ರವಾರ ಬೆಳಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ನಿಗಮದ ವ್ಯವಸ್ಥಾಪಕ
ನಿರ್ದೇಶಕ ಅಜಯ್ ಸೇಠ… ಸ್ಪಷ್ಟಪಡಿಸಿದ್ದಾರೆ.
ದುರಸ್ತಿ ಕಾರ್ಯ ಈಗಾಗಲೇ ನಡೆಯುತ್ತಿದೆ. ಆದರೆ ಇದರಲ್ಲಿ ವಿವಿಧ ಹಂತಗಳಿದ್ದು, ಕಾಮಗಾರಿ ಮಾಡುವಾಗ
ಉದ್ದೇಶಿತ ಮಾರ್ಗದಲ್ಲಿ ಮಾತ್ರ ಸಂಚಾರ ಸೇವೆ ಸ್ಥಗಿತಗೊಳಿಸಬೇಕಾಗುತ್ತದೆ. ವಾರಾಂತ್ಯದಲ್ಲಿ ಕಡಿಮೆ ಜನ
ಸಂಚರಿಸುವುದರಿಂದ ಬರುವ ಶನಿವಾರ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿತ್ತು. ಈ ಸಂಬಂಧ ತಜ್ಞರ ಅಭಿಪ್ರಾಯ ಪಡೆದು, ಅಂತಿಮಗೊಳಿಸುವುದಾಗಿಯೂ ಬಿಎಂಆರ್‌ಸಿ ಸ್ಪಷ್ಟಪಡಿಸಿತ್ತು.
ಈ ಮಧ್ಯೆ “ಹನಿ ಕಾಂಬ್’ನಲ್ಲಿ ರಂಧ್ರಗಳ ಮೂಲಕ ಸಿಮೆಂಟ್ ತುಂಬುವ ಕಾರ್ಯ ನಡೆದಿದೆ. ಸಚಿವ ಡಾ.ಜಿ. ಪರಮೇಶ್ವರ ಅವರ ಸೂಚನೆ ಮೇರೆಗೆ ಬೇರಿಂಗ್ ಕೂಡ ಬದಲಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ವಯಾಡಕ್ಟ್ಗಳನ್ನು ಕೊಂಚ ಮೇಲಕ್ಕೆತ್ತಿ ಜೋಡಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.