ಸಿಗ್ನಲ್ ಸಮಸ್ಯೆಯಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
Team Udayavani, Sep 23, 2019, 3:05 AM IST
ಬೆಂಗಳೂರು: ಸಿಗ್ನಲ್‌ನಲ್ಲಿ ಕಂಡುಬಂದ ಸಮಸ್ಯೆಯಿಂದಾಗಿ “ನಮ್ಮ ಮೆಟ್ರೋ’ ಸೇವೆಯಲ್ಲಿ ಭಾನುವಾರ ಸುಮಾರು ಎರಡು ತಾಸು ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದರು. ಯಲಚೇನಹಳ್ಳಿ-ನಾಗಸಂದ್ರ ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಮಧ್ಯಾಹ್ನ 12.06ರಿಂದ 1.52ರವರೆಗೆ ಯಲಚೇನಹಳ್ಳಿ-ಆರ್.ವಿ.ರಸ್ತೆ ನಡುವೆ ಸೇವೆ ಸ್ಥಗಿತಗೊಂಡು ನೂರಾರು ಪ್ರಯಾಣಿಕರಿಗೆ ಅದರ ಬಿಸಿ ತಟ್ಟಿತು.
ಏಕಾಏಕಿ ಕಾಣಿಸಿಕೊಂಡ ಸಮಸ್ಯೆಯಿಂದ ಜನ ಮೆಟ್ರೋ ನಿಲ್ದಾಣಗಳಿಗೆ ಬಂದು ಬೇಸರದಿಂದ ಹಿಂತಿರುಗುತ್ತಿರುವುದು ಕಂಡುಬಂತು. ಈ ವೇಳೆ ಆರ್.ವಿ.ರಸ್ತೆ, ಬನಶಂಕರಿ, ಜೆ.ಪಿ. ನಗರ ಮತ್ತು ಯಲಚೇನಹಳ್ಳಿ ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ವ್ಯತ್ಯಯ ಉಂಟಾಗಿ, ಆರ್.ವಿ. ರಸ್ತೆಯಿಂದ ನಾಗಸಂದ್ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿತ್ತು.
“ಸಿಗ್ನಲ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಯಿತು. ದೋಷ ಪರಿಹರಿಸಿದ್ದು, ಮಧ್ಯಾಹ್ನ 1.52ರ ಸುಮಾರಿಗೆ ಸೇವೆ ಯಥಾಸ್ಥಿತಿಗೆ ಮರಳಿದೆ’ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಏನಿದು ಸಿಗ್ನಲಿಂಗ್ ಸಮಸ್ಯೆ?: ಒಂದೇ ಹಳಿಯಲ್ಲಿ ಯಾವ ರೈಲು ಎಲ್ಲಿದೆ ಎಂಬುದನ್ನು ಸಿಗ್ನಲಿಂಗ್ ವ್ಯವಸ್ಥೆ ತಿಳಿಸುತ್ತದೆ. ಇಂತಹ ಸಂವಹನ ಸಮರ್ಪಕವಾಗಿ ನಡೆಯದಿದ್ದರೆ, ಇದನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ ಆ ಹಳಿಯಲ್ಲಿನ ಉಳಿದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ.
ಸಾಮಾನ್ಯವಾಗಿ ಒಂದೇ ಹಳಿಯಲ್ಲಿ ಎರಡು ರೈಲುಗಳು ಸಂಚರಿಸುವ ವೇಳೆ ನಡುವೆ ಒಂದು ನಿಲ್ದಾಣದ ಅಂತರವಿರುತ್ತದೆ. ದಟ್ಟಣೆಯ ಅವಧಿಯಲ್ಲಿ ಪ್ರತಿ ರೈಲಿನ ಸಂಚಾರದ ನಡುವೆ 3ರಿಂದ 5 ನಿಮಿಷದ ಅಂತರವಿರುತ್ತದೆ. ಸಿಗ್ನಲಿಂಗ್ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಎರಡರ ನಡುವೆ ಸಂವಹನ ಸ್ಥಗಿತಗೊಳ್ಳುತ್ತದೆ. ಭಾನುವಾರ ಕಂಡುಬಂದಿದ್ದೂ ಇದೇ ಸಮಸ್ಯೆ ಎಂದು ನಿಗಮದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.