ಮೆಟ್ರೋ ಸಿಬ್ಬಂದಿಗೆ ಎಸ್ಮಾ ಜಾರಿ ಎಚ್ಚರಿಕೆ
Team Udayavani, Mar 16, 2018, 11:43 AM IST
ಬೆಂಗಳೂರು: “ನಮ್ಮ ಮೆಟ್ರೋ ಅಗತ್ಯ ಸಾರ್ವಜನಿಕ ಸೇವೆಯಾಗಿರುವ ಕಾರಣ ಪ್ರತಿಭಟನೆಗೆ ಮುಂದಾಗುವ ಸಿಬ್ಬಂದಿ ವಿರುದ್ಧ ಎಸ್ಮಾ ಜಾರಿ ಮಾಡಲು ಅವಕಾಶವಿದೆ,’ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.22ರಿಂದ ಕರ್ತವ್ಯ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ಸಂಸ್ಥೆಯ ಸಿಬ್ಬಂದಿಯ ಸಮಸ್ಯೆಗಳಿಗೆ ಸ್ಪಂದಿಸಲು ಸಂಸ್ಥೆ ಸಿದ್ಧವಿದ್ದು, ಸರ್ಕಾರ ಸಹ ಬೇಡಿಕೆಗಳ ಈಡೇರಿಕೆಗೆ ಮುಕ್ತ ಮನಸ್ಸಿನಿಂದ ಚರ್ಚಿಸುವುದಾಗಿ ತಿಳಿಸಿದೆ.
ರಾಜ್ಯ ಸರ್ಕಾರ ಮೆಟ್ರೋ ರೈಲು ಸೇವೆಯನ್ನು ಅಗತ್ಯ ಸೇವಾ ವ್ಯಾಪ್ತಿಗೆ ತಂದಿದ್ದು, ಸಿಬ್ಬಂದಿ ಮುಷ್ಕರ ಮಾಡಿದರೆ ಎಸ್ಮಾ ಜಾರಿಗೊಳಿಸುವ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಅದನ್ನು ನಿರ್ಲಕ್ಷಿಸಿ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ,
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಈಗಾಗಲೇ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಪ್ರಮಾಣಿಕೃತ 92 ರೈಲು ಆಪರೇಟರ್‌ಗಳನ್ನು ಸಿದ್ಧಗೊಳಿಸಲಾಗಿದೆ. ಅಲ್ಲದೇ ಅವರು ವಾರಾಂತ್ಯದಲ್ಲಿ ರೈಲು ಚಲಾಯಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಮಿಕ ಆಯುಕ್ತರೊಂದಿಗೆ ಸಭೆ: ಮೆಟ್ರೋ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಈ ಕುರಿತು ಮತ್ತೂಮ್ಮೆ ಪ್ರಾದೇಶಿಕ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಮುಷ್ಕರಕ್ಕೆ ಹೋಗದಂತೆ ಮನವರಿಗೆ ಮಾಡಿಕೊಡಲಾಗುವುದು ಎಂದು ಮಹೇಂದ್ರ ಜೈನ್ ತಿಳಿಸಿದರು.
ಬೇಗ ಜಾರಿಗೊಳಿಸಿದರೆ ದುಡ್ಡು ಹೊಡೆದಿದ್ದಾರೆ ಅಂತೀರಾ?: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಚಿಸಲಾಗುತ್ತಿರುವ ಪರಿಷ್ಕೃತ ಮಹಾಯೋಜನೆ 2031ಕ್ಕೆ ಈಗಾಗಲೇ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಸಾರ್ವಜನಿಕರ ಸಲಹೆಗಳನ್ನು ಪಡೆಯಲಾಗುತ್ತಿದೆ. ಹೀಗಾಗಿ ಯೋಜನೆಯನ್ನು ಚುನಾವಣೆಯ ನಂತರ ಹೊಸ ಸರ್ಕಾರ ಜಾರಿಗೊಳಿಸಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಕಳೆದ ಎರಡು ವರ್ಷಗಳಿಂದ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆಗೆ ಮೊದಲು ಜಾರಿಗೊಳಿಸಿದರೆ ದುಡ್ಡು ಹೊಡೆಯೋಕೆ ಮಾಡ್ತಿದಾರೆ ಅಂತೀರಾ? ಎಲ್ಲರ ಅಭಿಪ್ರಾಯ ಪಡೆದು ಮಾಡಲು ಹೋದರೆ ವಿಳಂಬವಾಯ್ತು ಅಂತೀರಾ? ಏನು ಮಾಡೋದು ಎಂದು ನಕ್ಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.