ಎಂ.ಜಿ. ರಸ್ತೆ ಲೈಂಗಿಕ ದೌರ್ಜನ್ಯ: ಸಿಸಿಬಿ ತನಿಖೆ
Team Udayavani, Jan 5, 2017, 11:36 AM IST
ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿ ಡಿ. 31ರಂದು ಶನಿವಾರ ರಾತ್ರಿ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದಿದೆ ಎನ್ನಲಾಗಿರುವ ಲೈಂಗಿಕ ದೌರ್ಜನ್ಯ ಕುರಿತು ಸಿಸಿಬಿ ತನಿಖೆಗೆ ವಹಿಸಿ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತ ಪ್ರವೀಣ್ ಸೂದ್ ಅವರು, ಎಂ.ಜಿ. ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ತನಿಖೆಗೆ ವಹಿಸಲಾಗಿದೆ ಎಂದರು.
ಈವರೆಗೆ ಎಂ.ಜಿ. ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ಕಿರುಕುಳ ಕುರಿತು ನಿಖರವಾದ ಸಾಕ್ಷ್ಯಗಳು ಲಭ್ಯವಾಗಿಲ್ಲ. ಈ ಬಗ್ಗೆ ಹಲವು ಸಿಸಿಟೀವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗಿದೆ. ಅಲ್ಲದೆ ಯಾರೊಬ್ಬರು ಸಹ ಅಧಿಕೃತವಾಗಿ ದೂರು ನೀಡಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು.
ಎಫ್ಐಆರ್ ದಾಖಲಾಗಿಲ್ಲ: ಎಂ.ಜಿ. ರಸ್ತೆಯಲ್ಲಿ ಡಿಸೆಂಬರ್31ರಂದು ರಾತ್ರಿ ಘಟನೆ ಕುರಿತು ಪೊಲೀಸರಿಂದ ಸ್ವಯಂಪ್ರೇರಿತ ಎಫ್ಐಆರ್ ದಾಖಲಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪ ಬಂದಿದೆ. ಇನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆ ಹೇಳಿಕೆ ಬಹು ಮುಖ್ಯವಾಗಿದೆ. ಹೀಗಾಗಿ ಅವರ ಹೇಳಿಕೆ ಹೊರತಾಗಿ ಎಫ್ಐಆರ್ ದಾಖಲು ಮಾಡುವುದು ಕಾನೂನು ಪ್ರಕಾರ ಸಾಧುವಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಮ್ಮನಹಳ್ಳಿ ಘಟನೆ ಬಗ್ಗೆ ಮಂಗಳವಾರ ರಾತ್ರಿ ಟ್ವೀಟರ್‌ನಲ್ಲಿ ಆಯುಕ್ತರು ಟ್ವೀಟ್ ಮಾಡಿರಬಹುದು. ಆದರೆ ಎಂ.ಜಿ. ರಸ್ತೆಯ ಘಟನೆ ಬಗ್ಗೆ ವಿಚಾರಣೆ ನಡೆಯುತ್ತಿದೆ ಹೊರತು ಎಫ್ಐಆರ್ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿಲ್ಲ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
ಪೋಟೋದಿಂದ ವಿವಾದ: ಶನಿವಾರ ರಾತ್ರಿ ಸಂಭ್ರಮಾಚರಣೆ ವೇಳೆ ಪುಂಡಾಟಿಕೆ ನಡೆಸಿದ ಗುಂಪು ಚದುರಿಸಲು ಪೊಲೀಸರ ಲಘು ಲಾಠಿ ಪ್ರಹಾರ ನಡೆಸಿದ್ದರು. ಆ ವೇಳೆ ಜನರ ಗುಂಪಿನಿಂದ ಲಾಠಿ ಪ್ರಹಾರಕ್ಕೆ ಹೆದರಿ ಯುವತಿ, ಪೊಲೀಸರ ಕಡೆಗೆ ರಕ್ಷಣೆಗೆ ಓಡಿ ಬಂದಿದ್ದಾಳೆ. ಆಗ ತೆಗೆದ ಫೋಟೋ ಈಗ ಲೈಂಗಿಕ ಕಿರುಕುಳ ಆರೋಪಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಲಾಠಿ ಪ್ರಹಾರದಿಂದ ಆ ಯುವತಿ ಜತೆಯಲ್ಲಿದ್ದ ಸ್ನೇಹಿತರು ನಾಪತ್ತೆಯಾಗಿದ್ದರು. ಇದರಿಂದ ಆಕೆ ಆತಂಕಗೊಂಡು ಪೊಲೀಸರಲ್ಲಿ ಸಹಾಯ ಕೋರಿದ್ದಳು. ಕೆಲ ಹೊತ್ತಿನ ನಂತರ ಆಕೆಯ ಸ್ನೇಹಿತರು ಬಂದು, ಅವಳನ್ನು ಸಂತೈಸಿ ಕರೆದೊಯ್ದಿದ್ದಾರೆ. ಈ ಬಗ್ಗೆ ಸಿಸಿಟೀವಿ ಕ್ಯಾಮೆರಾ ದೃಶ್ಯಾವಳಿಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಯುವತಿ ಪೊಲೀಸರನ್ನು ತಬ್ಬಿಕೊಂಡಿರುವ ಫೋಟೋಗಳು ಹಾಗೂ ಗುಂಪಿನಿಂದ ಆಕೆ ಓಡಿ ಬರುತ್ತಿರುವ ಕೆಲ ಸೆಕೆಂಡಿನ ದೃಶ್ಯಾವಳಿಗಳನ್ನೇ ಆಧಾರವಾಗಿಟ್ಟುಕೊಂಡು ಲೈಂಗಿಕ ಕಿರುಕುಳ ಆರೋಪ ಮಾಡಲಾಗುತ್ತಿದೆ. ಈ ಆರೋಪ ಸಾಕ್ಷೀಕರಿಸುವ ಕುರುಹುಗಳು ಪತ್ತೆಯಾದರೆ ಮಾತ್ರವಷ್ಟೆ ಎಫ್ಐಆರ್ ದಾಖಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನಗರದ ಎಲ್ಲಾ ಸಿಸಿಟೀವಿ ಪರಿಶೀಲನೆಗೆ ಸೂಚನೆ
ಬೆಂಗಳೂರು: ಎಂ.ಜಿ. ರಸ್ತೆಯಲ್ಲಿ ವರ್ಷಾಚರಣೆ ವೇಳೆ ನಡೆದ ಗಲಾಟೆ ಹಾಗೂ ಕಮ್ಮನಹಳ್ಳಿಯಲ್ಲಿ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜಧಾನಿ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ದಿನದ ಬಗ್ಗೆ ಎಲ್ಲಾ ಸಿಸಿಟೀವಿ ದೃಶ್ಯಾವಳಿಗಳ ಪರಿಶೀಲನೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆಯುಕ್ತ ಪ್ರವೀಣ್ ಸೂದ್ ನಿರ್ದೇಶನ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು, ಖಾಸಗಿ ಹಾಗೂ ಸರ್ಕಾರಿ ಕಟ್ಟಡಗಳು, ಹೋಟೆಲ್ ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟೀವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸರು ತಪಾಸಣೆಗೊಳಪಡಿಸಿದ್ದು, ಡಿ. 31ರಂದು ರಾತ್ರಿ ನೂತನ ವರ್ಷದ ಸ್ವಾಗತ ಸಂಭ್ರಮದ ವೇಳೆ ನೆಡೆದಿರುವ ಘಟನಾವಳಿಗಳ ಕುರಿತು ಮಾಹಿತಿ ಸಂಗ್ರಹಿಸಿ ಆಯುಕ್ತರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಎಂ.ಜಿ. ರಸ್ತೆಯಲ್ಲಿ ಹೊಸ ಸಂವತ್ಸರದ ಸಂಭ್ರಮಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಘಟನೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೊಳಗಾಗಿರುವ ವೇಳೆಯಲ್ಲಿ ಅದೇ ದಿನ ಕಮ್ಮನಹಳ್ಳಿಯಲ್ಲಿ ಯುವತಿ ಮೇಲಿನ ಲೌಂಗಿಕ ದೌರ್ಜನ್ಯ ಎಸೆಗಿದ ಸಿಸಿಟೀವಿ ದೃಶ್ಯಾವಳಿ ಬಹಿರಂಗವಾಗಿದೆ.
ಈ 2 ಪ್ರಕರಣಗಳಿಂದ ರಾಜ್ಯ ಸರ್ಕಾರವು ತೀವ್ರ ಮುಜುಗಕ್ಕೀಡಾಗಿದ್ದು, ಪೊಲೀಸರ ವಿರುದ್ಧ ಜನಾಕ್ರೋಶಕ್ಕೂ ಕಾರಣವಾಗಿದೆ. ಇದರಿಂದಾಗಿ ಎಚ್ಚೆತ್ತ ಆಯುಕ್ತರು, ಡಿ.31 ರಂದು ಶನಿವಾರ ರಾತ್ರಿ ನಗರದ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ಸಂಭ್ರದ ಕುರಿತು ಸಿಸಿಟೀವಿ ದೃಶ್ಯಾವಳಿ ಪರಿಶೀಲಿಸುವಂತೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.
ಪರಂ ವಿರುದ್ಧ ದಿಲ್ಲಿ ಮಹಿಳಾ ಆಯೋಗ ದೂರು
ನವದೆಹಲಿ: ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ವಿವಾದಿತ ಹೇಳಿಕೆ ನೀಡಿದ್ದ ಕರ್ನಾಟಕದ ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ವಿರುದ್ಧ ದೆಹಲಿ ಮಹಿಳಾ ಆಯೋಗ ದೆಹಲಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.
ಬೆಂಗಳೂರು ಘಟನೆ ಬಗ್ಗೆ ಉಭಯ ರಾಜಕೀಯ ನಾಯಕರು ನೀಡಿರುವ ಹೇಳಿಕೆ ಸಂಪೂರ್ಣವಾಗಿ ಸ್ತ್ರೀಯರನ್ನು ದ್ವೇಷಿಸುವಂತಿದೆ ಮತ್ತು ಮಹಿಳೆಯರ ಮಾನದ ಮೇಲೆ ಹಾನಿ ಎಸಗುವಂತದ್ದಾಗಿದೆ. ಈ ಹೇಳಿಕೆ ಮೂಲಕ ಅವರು ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಹಿಂಸೆಯನ್ನು ಉತ್ತೇಜಿಸಿದ್ದಾರೆ.
ಹೀಗಾಗಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಿಸಬೇಕು ಎಂದು ದೆಹಲಿ ಪೊಲೀಸ್ ಆಯುಕ್ತ ಅಲೋಕ್ ವರ್ಮಾ ಅವರಿಗೆ ಬರೆದ ಪತ್ರದಲ್ಲಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಒತ್ತಾಯಿಸಿದ್ದಾರೆ. ಜೊತೆಗೆ ಈ ಬಗ್ಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆಯೂ ಪೊಲಿಸರಿಗೆ ಮಲಿವಾಲ್ ಸೂಚಿಸಿದ್ದಾರೆ.
ಶೀಘ್ರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ಉಗ್ರಪ್ಪ
ಬೆಂಗಳೂರು: ನೂತನ ವರ್ಷಾಚರಣೆ ಸಂದರ್ಭದಲ್ಲಿ ಮಹಾತ್ಮಗಾಂಧಿ ರಸ್ತೆ ಹಾಗೂ ಕಮ್ಮನಹಳ್ಳಿಯಲ್ಲಿ ಹೆಣ್ಣುಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮಿತಿ ವತಿಯಿಂದ ಎರಡೂ ಪ್ರಕರಣಗಳ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಇಂತಹ ಘಟನೆಗಳು ಅಕ್ಷಮ್ಯ ಅಪರಾಧ. ಮಾನವೀಯ ಸಮಾಜ ತಲೆತಗ್ಗಿಸುವಂತದ್ದು, ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ತಕ್ಷಣ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಸಮಿತಿ ಸಹ ಇದರ ಬಗ್ಗೆ ಗಂಭೀರವಾಗಿ ಗಮನಹರಿಸಲಿದೆ ಎಂದು ತಿಳಿಸಿದರು.
ಕಮ್ಮನಹಳ್ಳಿ ಪ್ರಕರಣದಲ್ಲಿ ಯುವತಿ- ಯುವಕರ ಜತೆ ಸಂಘರ್ಷಕ್ಕಿಳಿದು ಸ್ವಯಂ ರಕ್ಷಣೆ ಮಾಡಿಕೊಂಡಿದ್ದಾಳೆ. ಆಕೆಯ ಧೈರ್ಯ ಮೆಚ್ಚುವಂತದ್ದು. ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ರಾಜ್ಯವ್ಯಾಪಿಯಾಗಿವೆ. ಇದರ ಬಗ್ಗೆ ಗೃಹ ಹಾಗೂ ಪೊಲೀಸ್ ಇಲಾಖೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.