ಸಿನಿಮಾ, ರಾಜಕೀಯದಲ್ಲಿ ಜನಪ್ರಿಯರಾಗಿದ್ದ ಎಂಜಿಆರ್
Team Udayavani, Jul 9, 2018, 12:12 PM IST
ಬೆಂಗಳೂರು: ಸಿನಿಮಾ ಮಾತ್ರವಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಜನಪ್ರಿಯರಾಗಿದ್ದ ಎಂಜಿಆರ್ ಅವರು ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ದಕ್ಷಿಣ ಭಾರತದ ಮೇರು ಪ್ರತಿಭೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಣ್ಣಿಸಿದರು.
ಎಂಜಿಆರ್ ಜನ್ಮದಿನದ ಪ್ರಯುಕ್ತ ನಗರದ ಪುರಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅಣ್ಣಾ ಡಿಎಂಕೆ ಕರ್ನಾಟಕ ಕಾರ್ಯದರ್ಶಿ ಕೆ.ಆರ್.ಕೃಷ್ಣರಾಜು ಅವರ “ಭಾರತರತ್ನ ಡಾ.ಎಂ.ಜಿ.ಆರ್’ ಹಾಗೂ “ಅಮ್ಮನ ಸಾಧನೆಯ ಕ್ರಾಂತಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅದ್ಭುತ ನಟರಾಗಿದ್ದ ಎಂ.ಜಿ.ಆರ್ ಅವರು ರಾಜಕೀಯ ಕ್ಷೇತ್ರದಲ್ಲೂ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಜನ ಮೆಚ್ಚುಗೆಯ ಕೆಲಸ ಮಾಡಿ ಇಂದಿಗೂ ಜನ ಮಾನಸದಲ್ಲಿ ನೆಲೆಸಿದ್ದಾರೆ. ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ನೀರಾವರಿ ಸಚಿವನಾಗಿದ್ದಾಗ ಕಾವೇರಿ ವಿಚಾರ ಕುರಿತಂತೆ ಎರಡು ಬಾರಿ ಎಂ.ಜಿ.ಆರ್ ಅವರನ್ನು ನಾನು ಭೇಟಿಯಾಗಿದ್ದೆ ಎಂದು ಹೇಳಿದರು.
ಅಣ್ಣಾಡಿಎಂಕೆ ಪಕ್ಷದ ಕರ್ನಾಟಕ ಘಟಕದ ಕಾರ್ಯದರ್ಶಿ ಕೆ.ಆರ್.ಕೃಷ್ಣರಾಜು, ಎಂಜಿಆರ್ ಅವರು 1980ರ ದಶಕದಲ್ಲಿ ಮೂರು ಬಾರಿ ಕಲಾಸಿಪಾಳ್ಯಕ್ಕೆ ಭೇಟಿ ನೀಡಿದ್ದರು. ಪುರಭವನ ಮುಂಭಾಗ ಭಾಷಣ ಕೂಡ ಮಾಡಿದ್ದರು. ಅದರ ಸ್ಮರಣಾರ್ಥ ಕಲಾಸಿಪಾಳ್ಯಕ್ಕೆ ಎಂಜಿಆರ್ ನಗರ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದರು. ಹಿರಿಯ ನಟಿ ಸಾಹುಕಾರ್ ಜಾನಕಿ, ನಿರ್ಮಾಪಕ ಎಚ್.ಡಿ.ಗಂಗರಾಜು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.