ನಾಗರಿಕರಿಗೆ ಸ್ಪಂದಿಸದಿದ್ರೆ ಕ್ರಮ: ಮೇಯರ್ ಎಚ್ಚರಿಕೆ
Team Udayavani, Oct 7, 2017, 12:07 PM IST
ಬೆಂಗಳೂರು: ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಮೇಯರ್ ಸಂಪತ್ರಾಜ್ ಎಚ್ಚರಿಕೆ ನೀಡಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರದೊಂದಿಗೆ ಮಾತನಾಡಿ, ನಗರದಲ್ಲಿ ನಿಂರತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವು ಬಡಾವಣೆಗಳು ಜಲಾವೃತಗೊಳ್ಳುತ್ತಿವೆ.
ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.
ನಗರದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಆದ್ಯತೆಯ ಮೇಲೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಳೆಯಿಂದಾಗಿ ಗುಂಡಿ ಮುಚ್ಚುವ ಕೆಲಸಕ್ಕೆ ಅಡ್ಡಿಯಾಗಿದೆ. ಮಳೆಯಿಂದ ಗುಂಡಿಗಳ ಸಂಖ್ಯೆ ಹೆಚ್ಚಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಭಾರಿ ಪ್ರಮಾಣದ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದೆ ಎಂದು ತಿಳಿಸಿದರು.
ಸಮನ್ವಯತೆ ಮುಖ್ಯ: ಶುಕ್ರವಾರ ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಸಹ ತಮ್ಮ ಕಚೇರಿಯಲ್ಲಿ ಶುಕ್ರವಾರದಂದೇ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ, ಪಾಲಿಕೆಯಲ್ಲಿ ಕಾಂಗ್ರೆಸ್ನೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲಾಗುವುದು. ನಗರದ ಅಭಿವೃದ್ಧಿಗೆ ಆದ್ಯತೆ ನೀಡಿ, ತ್ಯಾಜ್ಯ ಸಮಸ್ಯೆ ಹಾಗೂ ರಸ್ತೆಗುಂಡಿ ನಿವಾರಣೆ ಶ್ರಮಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.