ಕಡಿತವಾಗಿದ್ದ ಹಾಲಿನ ಹಣ ರೈತರಿಗೆ ವಾಪಸ್
Team Udayavani, Mar 16, 2022, 1:32 PM IST
ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ಈ ಹಿಂದೆ ಕಡಿತಗೊಂಡಿದ್ದ ಪ್ರತಿ ಲೀಟರ್‌ಗೆ 3 ರೂ. ದರದ ಪೈಕಿ 2 ರಿಂದ 2.50 ರೂ. ಮರಳಿ ನೀಡಲು ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಮುಂದಾಗಿದೆ.
ಏಪ್ರಿಲ್ ಮೊದಲ ವಾರದಿಂದಲೇ ಈ ದರ ಜಾರಿಗೆ ಬರುವ ನಿರೀಕ್ಷೆಯಿದ್ದು, ಇದರಿಂದಾಗಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ವ್ಯಾಪ್ತಿಯ ಸುಮಾರು 1.50 ಲಕ್ಷ ರೈತರಿಗೆ ಅನುಕೂಲ ವಾಗಲಿದೆ. ಬಮೂಲ್ ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 27.50 ಪೈಸೆ ನೀಡಿ ರೈತರಿಂದ ಹಾಲು ಖರೀದಿ ಮಾಡುತ್ತಿತ್ತು. ಆದರೆ, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಹಾಲು ಮಾರಾಟ ದಲ್ಲಿ ಇಳಿಕೆ ಕಂಡು ಬಂತು. ಇದರಿಂದ ಬಮೂಲ್‌ನ ಹಾಲು ಮಾರಾಟದಲ್ಲಿ ದಿಢೀರ್ ಕುಸಿತವಾಗಿತ್ತು.
ಹೀಗಾಗಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟ ರೈತರಿಂದ ಖರೀದಿಸುವ ಹಾಲಿನ ದರವನ್ನು 3 ರೂ. ಇಳಿಸಿತ್ತು. ಇದೀಗ ಮಾರಾಟದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ರೈತರಿಗೆ ಅನು ಕೂಲವಾಗಲಿ ಎಂಬ ಉದ್ದೇಶದಿಂದ ಹಾಲಿನ ಖರೀದಿ ದರ ಹೆಚ್ಚಳಕ್ಕೆ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಏಪ್ರಿಲ್‌ನಿಂದ ರೈತರು ಖರೀದಿ ಸುವ ಹಾಲಿನ ಮೇಲೆ 2 ರಿಂದ 2.50 ದರ ನೀಡುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಕೋವಿಡ್ ಹೆಚ್ಚಳ ಮತ್ತು ಅಧಿಕ ಹಾಲು ಉತ್ಪಾದನೆ ಹಿನ್ನೆಲೆಯಲ್ಲಿ ರೈತರಿಗೆ ನೀಡುವ ದರ ಕಡಿತ ಮಾಡಲಾಗಿತ್ತು. ಈಗ ಅದನ್ನು ರೈತರಿಗೆ ನೀಡುವ ಮೂಲಕ ಸರಿದೂಗಿಸುವ ಕೆಲಸ ನಡೆದಿದೆ. ಒಂದೆರಡು ದಿನಗಳಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಸಭೆ ನಡೆಯಲಿದೆ.
ಆ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಬಮೂಲ್ ಈ ನಿರ್ಧಾರಕ್ಕೆ ಬಂದಿದೆ. ಕೋವಿಡ್ ವೇಳೆ ರೈತರು ಕೂಡ ಬೆಲೆ ಇಳಿಕೆ ವಿಚಾರದಲ್ಲಿ ಸಹಕಾರ ನೀಡಿದ್ದಾರೆ. ಅದನ್ನು ಕೂಡ ಒಕ್ಕೂಟ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಶೇ.50ರಷ್ಟು ಮಹಿಳಾ ಹಾಲು ಉತ್ಪಾದಕರು : ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಸೇರಲಿದೆ. ಸುಮಾರು 5 ಲಕ್ಷ ಹಾಲು ಮಾರಾಟಗಾರರು ಒಕ್ಕೂಟ ವ್ಯಾಪ್ತಿಯಲ್ಲಿದ್ದಾರೆ. ಆದರೆ, ಸಕ್ರಿಯವಾಗಿ ಇರುವ ಹಾಲು ಮಾರಾಟಗಾರರ ಸಂಖ್ಯೆ 1.5 ಲಕ್ಷವಾಗಿದೆ. ಇದರಲ್ಲಿ ಶೇ.50ರಷ್ಟು ಮಹಿಳೆಯರು ಒಕ್ಕೂಟಕ್ಕೆ ಹಾಲು ಹಾಕುತ್ತಿದ್ದಾರೆ ಎಂದು ಬಮೂಲ್ ಅಧಿಕಾರಿಗಳು ಹೇಳುತ್ತಾರೆ. ರಾಮನಗರ ವ್ಯಾಪ್ತಿಯಲ್ಲಿ ಸುಮಾರು 80 ಲಕ್ಷ ರೈತರು ಹಾಲು ಮಾರಾಟ ಮಾಡುತ್ತಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತ ವ್ಯಾಪ್ತಿಯಲ್ಲಿ 70 ಸಾವಿರ ರೈತರು ಹಾಲು ಮಾರಾಟ ಮಾಡುತ್ತಿದ್ದಾರೆ. ಈ ಹಿಂದೆ ಒಕ್ಕೂಟ ಪ್ರತಿ ದಿನ 19 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈಗ ಸುಮಾರು 15 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾಲಿನ ದರ 5 ರೂ. ಏರಿಕೆ : ಮಾಡುವಂತೆ ಸರ್ಕಾರಕ್ಕೆ ಒಕ್ಕೂಟದ ವತಿಯಿಂದ ಮನವಿ ಮಾಡಲಾಗಿದೆ. 3 ರೂ. ಏರಿಕೆ ಮಾಡುವ ಬಗ್ಗೆ ಸರ್ಕಾರ ಆಶ್ವಾಸನೆ ನೀಡಿದೆ. ಸರ್ಕಾರದ ಘೋಷಣೆಗೆ ಒಕ್ಕೂಟ ಎದುರು ನೋಡುತ್ತಿದೆ. 3 ರೂ.ಏರಿಕೆ ಮಾಡಿದರೆ ಆ ದರವನ್ನು ರೈತರಿಗೆ ಸಂಪೂರ್ಣವಾಗಿ ನೀಡಲಾಗುವುದು. –ನರಸಿಂಹಮೂರ್ತಿ, ಬಮೂಲ್ ಅಧ್ಯಕ್ಷ
–ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.