ಲಕ್ಷಾಂತರ ಬಡವರಿಗೆ ಸೂರಿನ ಭಾಗ್ಯ


Team Udayavani, May 11, 2018, 12:08 PM IST

lakshantara.jpg

ಬೆಂಗಳೂರು: ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಗುರುವಾರ ವಿಜಯನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ವಸತಿ ಸಚಿವ ಎಂ.ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ ಅವರು ಇಡೀ ದಿನ ಬಿರುಸಿನ ಪ್ರಚಾರ ನಡೆಸಿದರು.

ಕಾಂಗ್ರೆಸ್‌ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ನಾಯಕರ ಜತೆಗೂಡಿ ಎಂ.ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಅವರು ರೋಡ್‌ಶೋ ಹಾಗೂ ಪಾದಯಾತ್ರೆ ನಡೆಸಿ ಎರಡೂ ಕ್ಷೇತ್ರಗಳಲ್ಲಿ ಮತ ನೀಡುವಂತೆ ಮನವಿ ಮಾಡಿದರು.

ವಿಜಯನಗರದ  ಕೆಂಪಾಪುರ ಅಗ್ರಹಾರ, ವಿಜಯನಗರ, ಹೊಸಹಳ್ಳಿ, ಅತ್ತಿಗುಪ್ಪೆ, ಹಂಪಿನಗರ, ಬಾಪೂಜಿನಗರ, ಗಾಳಿ  ಆಂಜನೇಯ ದೇವಾಲಯ, ದೀಪಾಂಜಲಿ ನಗರ ವಾರ್ಡ್‌ ಹಾಗೂ ಗೋವಿಂದರಾಜನಗರದ ಕಾವೇರಿಪುರ, ಗೋವಿಂದರಾಜನಗರ, ಅಗ್ರಹಾರ ದಾಸರಹಳ್ಳಿ,

ಡಾ.ರಾಜ್‌ಕುಮಾರ್‌ ವಾರ್ಡ್‌, ಮಾರೇನಹಳ್ಳಿ, ಮಾರುತಿಮಂದಿರ, ಮೂಡಲಪಾಳ್ಯ, ನಾಗರಭಾವಿ , ನಾಯಂಡಹಳ್ಳಿ ವಾರ್ಡ್‌ಗಳಲ್ಲಿ ಕೊನೇ ಹಂತದ ಪ್ರಚಾರ ನಡೆಸಿದ ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ, ಎರಡೂ ಕ್ಷೇತ್ರಗಳ ಜನತೆ ಅಪಪ್ರಚಾರಕ್ಕೆ ಕಿವಿಕೊಡದೆ ಕಾಂಗ್ರೆಸ್‌ ಪರ ಮತ ನೀಡಬೇಕು ಎಂದು ಮನವಿ ಮಾಡಿದರು.

ಜನಪರ ಕೆಲಸ: ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಪ್ಪ, ವಿಜಯನಗರದಲ್ಲಿ ಮುಖ್ಯಮಂತ್ರಿಯವರ 1 ಲಕ್ಷ ಮನೆ ನಿರ್ಮಾಣ ಯೋಜನೆಯಡಿ 4800 ಹಾಗೂ ಗೋವಿಂದರಾಜನಗರದಲ್ಲಿ 2333 ಫ‌ಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.

ಗೋವಿಂದರಾಜನಗರದಲ್ಲಿ 2156 ಒಂಟಿ ಮನೆ ನಿರ್ಮಿಸಿಕೊಡಲಾಗಿದೆ. ವಿಜಯನಗರದಲ್ಲಿ 2750 ಕಚ್ಚಾ ಮನೆಗಳನ್ನು ತಲಾ 5 ಲಕ್ಷ ರೂ. ವೆಚ್ಚದಲ್ಲಿ ಪಕ್ಕಾ ಮನೆ ನಿರ್ಮಿಸಿಕೊಡಲಾಗಿದೆ. ಎರಡೂ ಕ್ಷೇತ್ರಗಳ ಎಲ್ಲ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಬಡವರಿಗೆ ಭಾಗ್ಯಗಳು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ,ಇಂದಿರಾ ಕ್ಯಾಂಟೀನ್‌ನಂತರ ಅತ್ಯುತ್ತಮ ಯೋಜನೆಗಳು ದೇಶದಲ್ಲೇ ಎಲ್ಲೂ ಇಲ್ಲ. ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆ ನಿರ್ಮಿಸಿ ನುಡಿದಂತೆ ನಡೆದಿದ್ದೇವೆ. ಒಂದು ವರ್ಷದಲ್ಲಿ ಬಸವ ವಸತಿ, ಅಂಬೇಡ್ಕರ್‌ ವಸತಿ, ದೇವರಾಜ ಅರಸು ವಸತಿ ಯೋಜನೆಯಡಿ ಆರು ಲಕ್ಷ ಮನೆ ನಿರ್ಮಿಸಿದ್ದೇವೆ.

ಐದು ವರ್ಷಗಳಲ್ಲಿ 15 ಲಕ್ಷ ಮನೆ ನಿರ್ಮಿಸಿ, ರಾಜೀವ್‌ಗಾಂಧಿ ಹೌಸಿಂಗ್‌ ನಿಗಮದ ವತಿಯಿಂದ 40 ಸಾವಿರ ನಿವೇಶನ ಬಡವರಿಗೆ ಹಂಚಿಸಿದ್ದೇವೆ. ಕೊಳಗೇರಿ ವಾಸಿಗಳು ಆಶ್ರಯ ಹಾಗೂ ವಾಂಬೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ಮಾಡಿದ್ದ 2478 ಕೋಟಿ ರೂ. ಮನ್ನಾ ಮಾಡಲಾಗಿದೆ. ಜನಪರ ಕಾರ್ಯಗಳಿಗೆ ಮತ್ತೂಮ್ಮೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಸಾಧನೆ ಶ್ರೀರಕ್ಷೆ: ಪ್ರಿಯಕೃಷ್ಣ ಮಾತನಾಡಿ , ಕಳೆದ ಒಂಬತ್ತು ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. 15 ಕೋಟಿ ರೂ. ವೆಚ್ಚದಲ್ಲಿ ಗೋವಿಂದರಾಜನಗರ ಹಮತ -1 ಮತ್ತು ಹಂತ-2, ಕನಕನಗರ, ಅಗ್ರಹಾರ ದಾಸರಹಳ್ಳಿ, ಗಂಗೊಂಡನಹಳ್ಳಿ ಹಾಗೂ ಪಂತರಪಾಳ್ಯದ ಕೊಳಗೇರಿ ನಿವಾಸಿಗಳಿಗೆ ಮೂಲಸೌಕರ್ಯಗಳಾದ ಕುಡಿಯುವ ನೀರು,

ರಸ್ತೆ, ಒಳಚರಂಡಿ, ಸಮುದಾಯದ ಭವನ ನಿರ್ಮಾನ ಕಾರ್ಯ ಪ್ರಗತಿಯಲ್ಲಿದೆ. ಹಕ್ಕುಪತ್ರ/ನೋಂದಣಿ ಪತ್ರ ವಿತರಣೆ ಮಾಡಲಾಗಿದ್ದು 40 ವರ್ಷದಿಂದ ನೆನಗುದಿಗೆ ಬಿದ್ದಿದ್ದ ಪಂಚಶೀಲ ನಗರ ನಿವಾಸಿಗಳಿಗೆ ಬಿಬಿಎಂಪಿ ವತಿಯಿಂದ ಖಾತಾ ಮಾಡಿಕೊಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, 4 ಕೋಟಿ ರೂ. ವೆಚ್ಚದಲ್ಲಿ 400 ಕಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪೊಲೀಸ್‌ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಲಾಗಿದೆ. ಅಪರಾಧ ಪ್ರಕರಣ ನಿಯಂತ್ರಣ, ಸರಗಳ್ಳತನ ನಿಗ್ರಹಕ್ಕೆ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.