ಸಚಿವರು ರಾಜಕೀಯ ಮಾತನಾಡುವಂತಿಲ್ಲ:ವೇಣುಗೋಪಾಲ್
Team Udayavani, Jul 2, 2018, 6:05 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವರು ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ರಾಜಕೀಯ ವಿಷಯಗಳ ಬಗ್ಗೆ ಯಾವುದೇ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.
ಸಮನ್ವಯ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಿಗೆ ಸರ್ಕಾರದ ಮಾಹಿತಿ ನೀಡಲು ಎರಡೂ ಪಕ್ಷಗಳಿಂದ ತಲಾ ಒಬ್ಬರು ವಕ್ತಾರರನ್ನು ನೇಮಿಸಲಾಗುವುದು. ಹೀಗಾಗಿ ಯಾವುದೇ ಸಚಿವರು ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿರುವುದಾಗಿ ತಿಳಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ರೈತರ ಸಾಲ ಮನ್ನಾ ಮಾಡಲು ಕಾಂಗ್ರೆಸ್ ವಿರೋಧಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದೆಲ್ಲ ಸತ್ಯಕ್ಕೆ ದೂರವಾದದ್ದು, ಸಾಲ ಮನ್ನಾ ಮಾಡುವ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೇ ಸಹಮತ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರದಲ್ಲಿ ಸಾಲ ಮನ್ನಾ ಎರಡೂ ಪಕ್ಷಗಳ ಸಾಮಾನ್ಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಒಬ್ಬರೇ ಮುಖ್ಯಸಚೇತಕ: ಸಮ್ಮಿಶ್ರ ಸರ್ಕಾರವಾಗಿದ್ದರೂ ಸರ್ಕಾರದ ಪರವಾಗಿ ಒಬ್ಬರೇ ಮುಖ್ಯ ಸಚೇತಕರಾಗಿ ಆಯ್ಕೆಯಾಗಲಿದ್ದಾರೆ. ಈ ಬಾರಿ ವಿಧಾನಸಭೆ ಕಲಾಪ ಕಡಿಮೆ ಅವಧಿಯದ್ದಾಗಿರುವುದರಿಂದ ಜಂಟಿ ಶಾಸಕಾಂಗ ಸಭೆ ಕರೆಯಲು ಸಾಧ್ಯವಾಗಿಲ್ಲ. ಅಗತ್ಯ ಬಿದ್ದರೆ ಎರಡೂ ಪಕ್ಷಗಳ ಜಂಟಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರೆಯಲಾಗುವುದು ಎಂದು ಹೇಳಿದರು.
ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿರುವ ಅಸಮಾಧಾನಕ್ಕೆ ತೆರೆ ಎಳೆಯಬೇಕು ಎಂಬ ನಿರೀಕ್ಷೆ ಹುಸಿಯಾಗಿದೆ. ಅಧಿವೇಶನ ಮುಗಿದ ಬಳಿಕವೇ ಸಂಪುಟ ವಿಸ್ತರಣೆಗೆ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೋಮವಾರದಿಂದಲೇ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ ಮುಂತಾದ ಪ್ರಕ್ರಿಯೆಗಳು ನಡೆಯಲಿರುವುದರಿಂದ ಸಂಪುಟ ವಿಸ್ತರಣೆ ಮಾಡುವುದು ಕಷ್ಟಸಾಧ್ಯ. ಹೀಗಾಗಿ ಅಧಿವೇಶನ ಮುಗಿದ ಬಳಿಕ ಈ ಕೆಲಸಕ್ಕೆ ಕೈಹಾಲು ಸಭೆ ಒಪ್ಪಿಗೆ ಸೂಚಿಸಿದೆ.
ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕೆ.ಸಿ.ವೋಣುಗೋಪಾಲ್, ಬಜೆಟ್ ಅಧಿವೇಶನ ಆರಂಭವಾಗುತ್ತಿರುವುದರಿಂದ ಅಧಿವೇಶನ ಮುಗಿದ ನಂತರವೇ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಖಾಲಿ ಇರುವ ಏಳು ಸ್ಥಾನಗಳನ್ನು ಅಧಿವೇಶನದ ನಂತರ ಭರ್ತಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.