ಡಿಕೆಶಿಗೆ ಅಧಿಕಾರ ಕೊಟ್ಟವರು ಯಾರು?
Team Udayavani, Mar 12, 2019, 12:30 AM IST
ಬೆಂಗಳೂರು: ಮೈತ್ರಿ ಪಕ್ಷಗಳಿಗೆ ತಲೆ ಬಿಸಿಯಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಗೊಂದಲ, ಈಗ ಕಾಂಗ್ರೆಸ್‌ನಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗಿದೆ. ಪಕ್ಷದ ಸೂಚನೆ ಇಲ್ಲದೇ ಜಿಲ್ಲಾ ಮುಖಂಡರ ಸಭೆ ಕರೆದಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಬಗ್ಗೆ ಮಂಡ್ಯ ಜಿಲ್ಲಾ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ.
ಅಲ್ಲದೇ, ಈ ಬೆಳವಣಿಗೆಯ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗಮನಕ್ಕೂ ತಂದಿದ್ದಾರೆ.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖೀಲ್‌ಗೌಡ ಸ್ಪರ್ಧೆ ಮಾಡಲು ನಿರ್ಧರಿಸಿರುವುದರಿಂದ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆಗೆ ಸಿದ್ದತೆ ನಡೆಸಿರುವುದು ಮೈತ್ರಿ ಪಕ್ಷಗಳ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದೇ ಕಾರಣಕ್ಕೆ ಮಂಡ್ಯದ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸುಮಲತಾ ಅಂಬರೀಶ್‌ಗೆ ಬೆಂಬಲಿಸದೇ. ನಿಖೀಲ್ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡುವಂತೆ ಸೂಚಿಸಲು ಭಾನುವಾರ ಡಿ.ಕೆ. ಶಿವಕುಮಾರ್ ಸಭೆ ಕರೆದಿದ್ದರು.
ಅವರು ಪಕ್ಷದ ಸೂಚನೆ ಇಲ್ಲದೇ ಸಭೆ ಕರೆದಿದ್ದು, ಮಂಡ್ಯದ ಸಮಸ್ಯೆ ಬಗೆಹರಿಸಲು ಪಕ್ಷದಿಂದ ಅವರಿಗೆ ಸೂಚನೆ ನೀಡಲಾಗಿತ್ತೇ?, ಜೆಡಿಎಸ್ ನಾಯಕರ ಸೂಚನೆಯಂತೆ ಸಭೆ ಕರೆಯಲು ಇವರೇನು ಜೆಡಿಎಸ್ ಏಜೆಂಟರೆ? ಎಂದು ಮಾಜಿ ಶಾಸಕರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಹೈಕಮಾಂಡ್ ಗಮನಕ್ಕೆ
ಪಕ್ಷದ ಗಮನಕ್ಕೆ ತಾರದೇ ಮಂಡ್ಯ ಜಿಲ್ಲಾ ಮುಖಂಡ ಸಭೆ ಕರೆದಿರುವ ಬಗ್ಗೆ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ್ ಮಂಡ್ಯ ಜಿಲ್ಲಾ ಮುಖಂಡರ ಸಭೆ ಕರೆದಿದ್ದು ಗೊತ್ತಿಲ್ಲ. ಮಂಡ್ಯದ ನಾಯಕರು ಸಭೆಗೆ ಹೋಗದಿರುವ ಬಗ್ಗೆಯೂ ಗೊತ್ತಿಲ್ಲ. ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವ ಕ್ಷೇತ್ರದಲ್ಲಿ ಇಂತಹರನ್ನೇ ಅಭ್ಯರ್ಥಿ ಮಾಡಿ ಎಂದು ನಾವು ಹೇಳಲು ಆಗುವುದಿಲ್ಲ ಎಂದಿದ್ದಾರೆ..
ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಇಲ್ಲ ಎಂದು ನಾನು ಮೊದಲೇ ಹೇಳಿದ್ದೇನೆ. ನಾನು ಹೇಗೆ ಅವರಿಗೆ ಪರೋಕ್ಷ ಬೆಂಬಲ ನೀಡುತ್ತೇನೆ ಎಂದು ಪ್ರಶ್ನಿಸಿದರು. ಜೆಡಿಎಸ್ ಕುಟುಂಬ ರಾಜಕಾರಣ ಮೈತ್ರಿ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.