ಭದ್ರತೆಯೊಂದಿಗೆ ಶೋಧ, ಪ್ರಶ್ನೆಗಳ ಸುರಿಮಳೆ..
Team Udayavani, Aug 5, 2017, 7:00 AM IST
ಬೆಂಗಳೂರು: ಕಳೆದ ಮೂರು ದಿನಗಳಿಂದ ಮನೆಯೊಳಗೆ ಬಿಗಿಭದ್ರತೆಯಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವಂತೆಯೇ, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಹೈರಾಣಾಗಿದ್ದು, ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಗ್ಗೆಯಿಂದಲೇಸದಾಶಿವ ನಗರದ ಡಿಕೆಶಿಯವರ ಮನೆಯ ಹೊರ ಭಾಗದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಜಮಾಯಿಸಿ, ಡಿಕೆಶಿಯವರನ್ನು ನೋಡಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಇದ್ಯಾವುದಕ್ಕೂ ಮಣೆಹಾಕದ ಭದ್ರತಾ ಸಿಬ್ಬಂದಿ, ಉನ್ನತ ಅಧಿಕಾರಿಗಳ ಅನುಮತಿ ಇಲ್ಲದೆ ಯಾರೊಬ್ಬರಿಗೂ ಮನೆಯೊಳಗೆ ಪ್ರವೇಶ ನೀಡಿಲ್ಲ ಮತ್ತು ಮನೆಯಿಂದ ಯಾರನ್ನೂ ಹೊರಗೆ ಬಿಟ್ಟಿಲ್ಲ.
ಅಣ್ಣನ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರಾಗಿದೆ ಎಂಬ ಸುದ್ದಿ ತಿಳಿದ ತಕ್ಷಣವೇ ಸದಾಶಿವನಗರಕ್ಕೆ ಆಗಮಿಸಿದ್ದ
ಸಂಸದ ಡಿ.ಕೆ.ಸುರೇಶ್ ಅವರನ್ನು ಮನೆಯೊಳಗೆ ಬಿಡಲು ಭದ್ರತಾ ಸಿಬ್ಬಂದಿ ಆರಂಭದಲ್ಲಿ ನಿರಾಕರಿಸಿದರು.
ನಂತರ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೋಷಣೆ ಕೂಗುತ್ತಿದ್ದಂತೆ ಸ್ಥಳೀಯ ಪೊಲೀಸರು ಸಿಆರ್‌ಪಿಎಫ್ ಯೋಧರ ಮನವೊಲಿಸಿದರು. ಮನೆಯೊಳಗೆ ಪ್ರವೇಶಿಸಿದ ಡಿ.ಕೆ. ಸುರೇಶ್, ಅಣ್ಣನೊಂದಿಗೆ ಸ್ವಲ್ಪಹೊತ್ತು ಮಾತುಕತೆ ನಡೆಸಿ, ಮನೆಯವರಿಗೆ ವರಮಹಾಲಕ್ಷ್ಮಿಹಬ್ಬದ ಶುಭಾಶಯ ಕೋರಿ ವಾಪಸ್ ಆದರು.
ಸಾಲು ಸಾಲು ಪ್ರಶ್ನೆ: ಡಿಕೆಶಿಯವರ ಮನೆಯೊಳಗೆ ಬೀಡುಬಿಟ್ಟಿರುವ ಐಟಿ ಅಧಿಕಾರಿಗಳು ಒಂದೊಂದು ದಾಖಲೆ ಸಿಕ್ಕಾಗಲೂ ಡಿಕೆಶಿಯವನ್ನು ಪ್ರಶ್ನಿಸುತ್ತಿದ್ದರು. ಅಧಿಕಾರಿಗಳ ಸಾಲು ಸಾಲು ಪ್ರಶ್ನೆಗೆ ತಾಳ್ಮೆಯಿಂದಲೇ ಡಿಕೆಶಿ ಉತ್ತರಿಸುತ್ತಿದ್ದರು ಎನ್ನಲಾಗಿದೆ. ಡಿಕೆಶಿ ಸೇರಿ ಕುಟುಂಬ ಸದಸ್ಯರಿಗೆ ಮನೆಯಿಂದ ಹೊರಗೆ ಹೋಗಲು ಅಥವಾ ಸಂಬಂಧಿಗಳಿಗೆ ಮನೆಯೊಳಗೆ ಹೊಗಲು ಅವಕಾಶವೇ ನೀಡುತ್ತಿರಲಿಲ್ಲ.
ಐಟಿ ಇಲಾಖೆಯ ಹಿರಿಯ ಅಧಿಕಾರಿ ಬಿ.ಆರ್.ಬಾಲಕೃಷ್ಣ ಅವರು ಶೋಧ ಕಾರ್ಯದಿಂದ ದೊರತ ಎಲ್ಲಾ ದಾಖಲೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದಿದ್ದಾರೆ ಎನ್ನಲಾಗಿದೆ. ಆರೋಗ್ಯದಲ್ಲಿ ವ್ಯತ್ಯಾಸ: ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ಮನೆಯೊಳಗೆ ಇರುವುದರಿಂದ ಸ್ವಲ್ಪ ಮಟ್ಟಿನ ಇರುಸುಮುರಿಸಿಗೆ ಒಳಗಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ ಮತ್ತು ನಿದ್ದೆ ಮಾಡದೇ ಇರುವುದರಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಏರುಪೇರಾಗಿತ್ತು. ನಂತರ ವೈದ್ಯರನ್ನು ಕರೆಸಿ, ಆರೋಗ್ಯವನ್ನು ಪರಿಶೀಲಿಸಲಾಯಿತು. ಡಿಕೆಶಿ ಹಾಗೂ ಅವರ ಮನೆಯವರ ಮೊಬೈಲ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸ್ಥಿರ ದೂರವಾಣಿ ಕಡಿತಗೊಳಸಲಾಗಿತು.
ದಾಖಲೆ ಪರಿಶೀಲನೆ
ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ ಒಂದಾದ ಸದಾಶಿವ ನಗರದಲ್ಲಿರುವ ಡಿಕೆಶಿಯವರ ನಿವಾಸ ಕೆಂಕೇರಿಗೆ ಎರಡು ದಿನದ ಹಿಂದೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಆರಂಭವಾಗಿದ್ದ ದಾಳಿ, ಗುರುವಾರ ಪೂರ್ತಿ
ನಡೆದಿದ್ದು, ಅಧಿಕಾರಿಗಳು ಅಲ್ಲಿಯೇ ತಂಗಿದ್ದರು. ಶುಕ್ರವಾರ ಬೆಳಗ್ಗೆಯಿಂದಲೇ ಶೋಧಕಾರ್ಯ ಆರಂಭಿಸಿದ್ದರು. ಮನೆ ಹಾಗೂ ಮನೆಯ ಸಮೀಪವೇ ಇರುವ ಕಚೇರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಂಪೂರ್ಣವಾಗಿ ಶೋಧಿಸಿದ್ದಾರೆ.
ಕಾರ್ಯಕರ್ತರ ತಳಮಳ
ಬೆಳಗ್ಗೆಯಿಂದಲೇ ಡಿಕೆಶಿಯವರ ನಿವಾಸದೆಡೆಗೆ ಜಮಾಯಿಸಿದ್ದ ಕಾರ್ಯಕರ್ತರು ಅವರನ್ನು ನೋಡಲು ಮತ್ತು ಅವರೊಂದಿಗೆ ಮಾತನಾಡಲು ಅವಕಾಶ ನೀಡಬೇಕೆಂದು ಆಗ್ರಹಿಸುತ್ತಿದ್ದರು. ಕಾರ್ಯಕರ್ತರ ಎಲ್ಲ ಮನವಿಗೂ ಭದ್ರತಾ ಸಿಬ್ಬಂದಿ ನಿರಾಕರಿಸಿದ್ದರಿಂದ ಕಾರ್ಯಕರ್ತರು ಗಂಟೆಗಟ್ಟಲೇ ರಸ್ತೆ ಬದಿಯಲ್ಲೇ ನಿಂತಿದ್ದರು. ಅಧಿಕಾರಿಗಳ ಒಂದೊಂದು ವಾಹನ ಬರುತ್ತಿದ್ದಂತೆ ಹಾಗೂ ಮನೆಯೊಳಗಿಂದ ಕಾರುಗಳು ಹೊರಗೆ ಹೋಗುತ್ತಿದ್ದಂತೆ ಕಾರ್ಯಕರ್ತರಲ್ಲಿ ತಳಮಳ ಉಂಟಾಗುತಿತ್ತು. ಆಗಾಗಾ ಡಿಕೆಶಿಯವರ ಪರ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದರು.
ಕಾನೂನು ಘಟಕ
ಪದಾಧಿಕಾರಿಗಳ ಪ್ರತಿಭಟನೆ
ಡಿ.ಕೆ.ಶಿವಕುಮಾರ್ ಅವರ ಮೇಲಿನ ದಾಳಿ ರಾಜಕೀಯ ಪ್ರೇರಿತವಾಗಿದೆ. ಗುಜರಾತ್ ಶಾಸಕರಿಗೆ ರಾಜ್ಯದಲ್ಲಿ ಆತಿಥ್ಯ ನೀಡಿರುವುದಕ್ಕೆ ಕೇಂದ್ರ ಬಿಜೆಪಿ ನಾಯಕರು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಪದಾಧಿಕಾರಿಗಳು ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಸೇರಿ ಪದಾಧಿಕಾರಿಗಳು ಸದಾಶಿವ ನಗರದ ಡಿಕೆಶಿಯವರ ಮನೆಯ ಎದುರು ಬಂದು ಪ್ರತಿಭಟನೆ ನಡೆಸಿದರು.
ವರಮಹಾಲಕ್ಷ್ಮಿ ಹಬ್ಬ ಇರುವುದರಿಂದ ಅವರಿಗೆ ಹಬ್ಬದ ಸಂದೇಶ ತಿಳಿಸಲು ಅವಕಾಶ ಮಾಡಿಕೊಡಬೇಕು ಎಂದು ಘಟಕ ಮಹಿಳಾ
ಪದಾಧಿಕಾರಿಗಳು ಆಗ್ರಹಿಸಿದರು. ಭದ್ರತಾ ಸಿಬ್ಬಂದಿ ಇದಕ್ಕೆ ಅವಕಾಶ ಮಾಡಿಕೊಡದಿದ್ದಾಗ ಸ್ವಲ್ಪ ಹೊತ್ತು ಪೊಲೀಸರ ನಡುವೆ ಮಾತಿನ ಚಕಮುಕಿ ನಡೆಯಿತು. ಮನೆಯೊಳಗೆ ಬಿಡುವುದಿಲ್ಲ ಎಂಬುದು ಖಚಿತವಾದ ನಂತರ ಕೆಲಕಾಲ ಪ್ರತಿಭಟನೆ ನಡೆಸಿ, ಡಿಕೆಶಿ ಪರವಾಗಿ ಘೋಷಣೆ ಕೂಗಿ ಅಲ್ಲಿಂದ ವಾಪಸ್ ಆದರು. ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ್ ಮಾತನಾಡಿ, ಇದೊಂದು ರಾಜಕೀಯ ಪ್ರೇರಿತ ದಾಳಿ. ಸಿಆರ್‌ಪಿಎಫ್ ಯೋಧರ ಮೂಲಕ ಭದ್ರತೆ ನೀಡಿ, ಭಯ ಹುಟ್ಟಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದವರಿದರೆ, ಕಾನೂನು ಘಟಕದಿಂದ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ ಎಂಬ ಎಚ್ಚರಿಕೆ ನೀಡಿದರು.
ದಾಳಿ ಖಂಡಿಸಿ ಪಂಜಿನ ಮೆರವಣಿಗೆ
ಬೆಂಗಳೂರು: ಡಿ.ಕೆ.ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ರಾತ್ರಿ ಸದಾಶಿವನಗರ ನಿವಾಸದ ಮುಂಭಾಗ ಪಂಜಿನ ಪ್ರತಿಭಟನೆ ನಡೆಸಿದರು. ಏಕಾಏಕಿ ನೂರಾರು ಕಾರ್ಯಕರ್ತರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಶಿವಕುಮಾರ್ ಮನೆಯ ಪಕ್ಕದ ರಸ್ತೆಯಲ್ಲೇ ರಸ್ತೆ ವಿಭಜಕ ಹಾಕಿ ತಡೆದರು. ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ವಿರುದಟಛಿ ಘೋಷಣೆ ಕೂಗಿದರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಡಿಕೆಶಿ ಮನೆ ಮುಂದೆ ಮೂರು ದಿನಗಳಿಂದ ವಾಸ್ತವ್ಯ ಹೂಡಿದ್ದ ಹತ್ತಾರು ಮಂದಿ ಬೆಂಬಲಿಗರನ್ನು ಪೊಲೀಸರು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಬೆಂಬಲಿಗರು ಮತ್ತು ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.