ಎನ್‌ಆರ್‌ಡಿಡಬ್ಲ್ಯುಪಿಗೆ ಕೇಂದ್ರ ನಿರ್ಬಂಧ: ಎಚ್ಕೆಪಿ

Team Udayavani, Jun 8, 2017, 12:45 PM IST

170607kpn83.jpg

ವಿಧಾನಸಭೆ: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದ್ದರಿಂದ  ರಾಜ್ಯದಲ್ಲಿ ಬಹುಗ್ರಾಮ ಕುಡಿಯುವ ನೀರಿನ  ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಜೆಡಿಎಸ್‌ ಸದಸ್ಯ ಕೆ.ಎಂ.ತಿಮ್ಮರಾಯಪ್ಪ ಅವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದುವರೆಗೆ ಎನ್‌ಆರ್‌ಡಿಡಬ್ಲ್ಯುಪಿ ಅನುದಾನ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದರಿಂದ ಹೊಸ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರವು 2017-18ನೇ ಸಾಲಿಗೆ ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ 290.85 ಕೋಟಿ ರೂ. ನಿಗದಿಪಡಿಸಿದ್ದು, ಈ ಮೊತ್ತವನ್ನು ಮುಂದುವರೆದ ಕಾಮಗಾರಿಗಳಿಗೆ ಮಾತ್ರ ಬಳಸಲು ನಿರ್ದೇಶನ ನೀಡಿದೆ ಎಂದು ಅವರು ವಿವರಿಸಿದರು.

ಪಾವಗಡ ತಾಲೂಕಿನ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತವಾದ ಯೋಜನೆ ಮತ್ತು ತಾಂತ್ರಿಕ ಅನುಮೋದನೆಗಳನ್ನು ಈಗಾಗಲೇ ನೀಡಲಾಗಿದೆ. ಆದರೆ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳಲು ಅಡೆತಡೆಗಳು ಉಂಟಾಗಿವೆ ಎಂದು ತಿಳಿಸಿದರು. ಈ ಅಡೆತಡೆಗಳನ್ನು ನಿವಾರಿಸಲು ರಾಜ್ಯ ಸರ್ಕಾರದಿಂದ ಸೂಕ್ತವಾದ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು  ಡಿಸೈನ್‌, ಬ್ಯುಲ್ಟ್, ಆಪರೇಟ್‌ ಅÂಂಡ್‌ ಟ್ರಾನ್ಸ್‌ಫ‌ರ್‌ (ಡಿಬಿಓಟಿ) ಆಧಾರದಲ್ಲಿ ಪಾವಗಡ ತಾಲೂಕಿನ ಪಾವಗಡ ಪಟ್ಟಣ ಮತ್ತು ಗ್ರಾಮಗಳು, ಚಿತ್ರದುರ್ಗ ಜಿÇÉೆ ಮೊಳಕಲ್ಮೂರು ತಾಲೂಕಿನ ಮೊಳಕಾಲ್ಮೂರು ಪಟ್ಟಣ ಮತ್ತು ಗ್ರಾಮಗಳು, ಚಳ್ಳಕೆರೆ ತಾಲೂಕಿನ ಗ್ರಾಮಗಳು ಹಾಗೂ ಬಳ್ಳಾರಿ ಜಿÇÉೆಯ ಕೂಡ್ಲಗಿ ತಾಲೂಕಿನ ಉಜ್ಜನಿ ಮತ್ತು 216 ಗ್ರಾಮಗಳು, ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮಗಳಲ್ಲಿ ಕೈಗೆತ್ತಿಕೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆ, ಯೋಜನಾ ಇಲಾಖೆ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಮತಿ ಪಡೆಯಲು ಕ್ರಮವಹಿಸಲಾಗುತ್ತಿದೆ ಎಂದು ವಿವರಿಸಿದರು.
ಪಾವಗಡದ ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಡಿ ಶೇ. 50ರಷ್ಟು ಆರ್ಥಿಕ ನೆರವು ನೀಡಲು ಒಪ್ಪಿಗೆ ನೀಡಿದೆ. ಆದ್ದರಿಂದ ಶೀಘ್ರವೇ ಯೋಜನೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

17000 ಕೋಟಿಯ ಕಾಮಗಾರಿ ಬಾಕಿ
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ರಾಜ್ಯಕ್ಕೆ ಮಂಜೂರಾದ ಯೋಜನೆಯಡಿ 17 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಬಾಕಿ ಇವೆ. ಹೀಗಾಗಿ ಈ ಕಾಮಗಾರಿ ಮುಗಿಯುವವರೆಗೆ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ಹೇಳಿದೆ ಎಂದು ಬಿಜೆಪಿ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆ ವೇಳೆ ಬಿಜೆಪಿಯ ಗೋವಿಂದ ಕಾರಜೋಳ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕುರಿತಂತೆ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, ಎನ್‌ಆರ್‌ಡಿಡಬ್ಲ್ಯುಪಿ ಅಡಿ ಹೊಸ ಯೋಜನೆ ಕೈಗೆತ್ತಿಕೊಳ್ಳದಂತೆ ಕೇಂದ್ರ ಸೂಚನೆ ನೀಡಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. ಆದರೆ, ಅದಕ್ಕೆ ಕಾರಣ ಹೇಳದೆ ವಿನಾ ಕಾರಣ ಆರೋಪದ ರೀತಿ ಮಾತನಾಡಿದ್ದಾರೆ ಎಂದರು.

ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ ಶೇ. 60ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ ಶೇ. 40ನ್ನು ರಾಜ್ಯ ಸರ್ಕಾರ ಭರಿಸಬೇಕು. ಅದರಂತೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಆದರೆ, ರಾಜ್ಯದಲ್ಲಿ ಈ ಯೋಜನೆಯಡಿ 17 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳು ಬಾಕಿ ಇವೆ. ಇದನ್ನು ಮೊದಲು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಸ್ಪಷ್ಟಪಡಿಸಿದರು.

ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಲ್ಲಿ ಶೇ.60 ಕೇಂದ್ರ ಸರ್ಕಾರ ಹಾಗೂ ಶೇ.40 ರಾಜ್ಯ ಸರ್ಕಾರಗಳ ಪಾಲಿದೆ. ಆದರೆ, ರಾಜ್ಯದಲ್ಲಿ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
– ಬಸವರಾಜ ಬೊಮ್ಮಾಯಿ, ಮಾಜಿ ಸಚಿವ 

ಕೇಂದ್ರ ಸರ್ಕಾರವು 2017-18ನೇ ಸಾಲಿಗೆ ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ 290.85 ಕೋಟಿ ರೂ. ನಿಗದಿಪಡಿಸಿದ್ದು, ಈ ಮೊತ್ತವನ್ನು ಮುಂದುವರಿದ ಕಾಮಗಾರಿಗಳಿಗೆ ಮಾತ್ರ ಬಳಸಲು ನಿರ್ದೇಶನ ನೀಡಿದೆ.
– ಎಚ್‌.ಕೆ.ಪಾಟೀಲ್‌,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.