ಸಚಿವೆ ಜಯಮಾಲಾ ಭರವಸೆ: ಪ್ರತಿಭಟನೆ ವಾಪಸ್
Team Udayavani, May 31, 2019, 3:06 AM IST
ಬೆಂಗಳೂರು: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನು ವಿರೋಧಿಸಿ ಮತ್ತು ಎಲ್‌ಕೆಜಿ, ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಸಚಿವೆ ಡಾ.ಜಯಮಾಲಾ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, “ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ 45 ಸಾವಿರ ಕೋಟಿ ರೂ. ಕೃಷಿ ಸಾಲ ಮಾಡಿದ್ದಾರೆ. ಇಂತಹ ಸಂದರ್ಭದಲ್ಲೂ ಅಂಗನವಾಡಿ ಕಾರ್ಯಕರ್ತೆಯರನ್ನು ಕಡೆಗಣಿಸಿಲ್ಲ. 500ರೂ. ಸಹಾಯಧನ ಹೆಚ್ಚಳ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುತ್ತಾರೆ’ ಎಂದು ಭರವಸೆ ನೀಡಿದರು.
“ಅಂಗನವಾಡಿ ಶಿಕ್ಷಕಿಯರನ್ನು ಅಂಗನವಾಡಿ ಕಾರ್ಯಕ್ರಮಗಳಿಗೆ ಹೊರತುಪಡಿಸಿ ಬೇರೆ ಕೆಲಸಗಳಿಗೆ ಬಳಸಿಕೊಳ್ಳದಂತೆ ಸೂಚನೆ ನೀಡಲಾಗುವುದು. ಅಂಗನವಾಡಿಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಹತೆಗೆ ಅನುಗುಣವಾಗಿ ಪೂರ್ವ ಪ್ರಾಥಮಿಕ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಶಿಕ್ಷಕಿಯರನ್ನಾಗಿ ನೇಮಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಗಳನ್ನು ಹಂತ ಹಂತವಾಗಿ ಈಡೇರಿಸಲಾಗು ವುದು. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲು ಸಭೆ ನಡೆಸುವುದಾಗಿ ಸಚಿವೆ ಜಯಮಾಲಾ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆದಿದ್ದೇವೆ. ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.