ಸಚಿವ ಕೃಷ್ಣಪ್ಪ, ಪ್ರಿಯಕೃಷ್ಣ, ಸೋಮಣ್ಣಗೆ ನೋಟಿಸ್
Team Udayavani, Jun 30, 2017, 11:13 AM IST
ಬೆಂಗಳೂರು: ಮಾಗಡಿ ರಸ್ತೆಯ ಪೊಲೀಸ್ ಕಾಲೋನಿಯ ಪಾರ್ಕ್‌ನಲ್ಲಿರುವ ಶ್ರೀ ಸಾಯಿಬಾಬಾ ದೇವಾಲಯವನ್ನು ಮುಜರಾಯಿ ಇಲಾಖೆಯ ಅಧೀನಕ್ಕೆ ಪಡೆದುಕೊಂಡು ಆಡಳಿತಾಧಿಕಾರಿ ನೇಮಿಸಲು ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಅರ್ಜಿವಿಚಾರಣೆ ನಡೆಸಿದ ನ್ಯಾಯಾಲಯ ಪ್ರತಿವಾದಿಗಳಾದ ವಸತಿ ಸಚಿವ ಎಂ.ಟಿ ಕೃಷ್ಣಪ್ಪ, ಶಾಸಕ ಪ್ರಿಯಕೃಷ್ಣ, ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ನೋಟೀಸ್ ಜಾರಿಗೊಳಿಸಿದೆ. “ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಡಲಾಗಿರುವ 1 ಎಕರೆ ವಿಶಾಲ ಪ್ರದೇಶದ ಉದ್ಯಾನವನದಲ್ಲಿ ಸಾಯಿಬಾಬಾ ದೇವಾಲಯ ನಿರ್ಮಿಸಲಾಗಿದೆ.
ಇದರ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶ್ರೀ ಸಾಯಿಬಾಬಾ ಸಾರ್ವಜನಿಕ ಗಣಪತಿ ದೇವಾಲಯ ಟ್ರಸ್ಟ್, ದೇವಾಲಯಕ್ಕೆ ಬರುವ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ನಿರ್ವಹಣೆ ಮಾಡುತ್ತಿಲ್ಲ,’ ಎಂದು ಎಸ್. ರವಿಚಂದ್ರ ಸಲ್ಲಿಸಿರುವ ಪಿಐಎಲ್‌ನಲ್ಲಿ ಆರೋಪಿಸಿಸಲಾಗಿದೆ.
“ಭಕ್ತರ ದೇಣಿಗೆ ದುರ್ಬಳಕೆಯಾಗುತ್ತಿದೆ. ಈ ಸಂಬಂಧ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಚಿವ ಎಂ.ಟಿ ಕೃಷ್ಣಪ್ಪ, ಶಾಸಕ ಪ್ರಿಯಕೃಷ್ಣ, ಮಾಜಿ ಸಚಿವ ವಿ. ಸೋಮಣ್ಣ ದೇವಾಲಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು ಮುಜರಾಯಿ ಇಲಾಖೆ ವಶಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ,’ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.