ಸ್ಟೋಟಕ ವಸ್ತುಗಳ ಪರವಾನಿಗೆ ಪಡೆಯಲು ಸಮಯಾವಕಾಶ ಕೋರಿ ಸಚಿವ ನಿರಾಣಿಗೆ ಮನವಿ
ಸರ್ಕಾರಿ ಜಮೀನಿನಲ್ಲಿ ಸ್ಥಾಪಿಸಲಾಗಿರುವ ಕ್ರಷರ್ ಘಟಕಗಳನ್ನು ವರ್ಗಾವಣೆ ಮಾಡಲು ಕೋರಿಕೆ
Team Udayavani, Mar 3, 2021, 9:29 PM IST
ಬೆಂಗಳೂರು: ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆಗೆ ಸ್ಟೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶ ಇನ್ನಷ್ಟು ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಇಂದು ( ಮಾರ್ಚ್ 3) ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರಿಗೆ ಮನಸಿ ಸಲ್ಲಿಸಿತು.
ವಿಕಾಸಸೌಧದಲ್ಲಿ ಸಚಿವರನ್ನು ಭೇಟಿಯಾಗಿ ತುರ್ತಾಗಿ ಕೆಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು. ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಗುಡುಬಂಡೆ ತಾಲೂಕಿನಲ್ಲಿ ಇತ್ತೀಚೆಗೆ ಸಂಭವಿಸಿದ ಘಟನೆಯ ಹಿನ್ನೆಲೆ ಕಾನೂನುಬಾಹಿರವಾಗಿ ಸಂಗ್ರಹಿಸಿಕೊಂಡಿರುವ ಸ್ಟೋಟಕ ವಸ್ತುಗಳನ್ನು ತಕ್ಷಣವೇ ಹಿಂತಿರುಗಿಸುವಂತೆ ಸಚಿವ ನಿರಾಣಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ನಿಯೋಗವು ಸಚಿವರನ್ನು ಭೇಟಿಯಾಗಿ ಸ್ವಲ್ಪ ಕಾಲಾವಕಾಶ ನೀಡುವಂತೆ ಮನವರಿಕೆ ಮಾಡಿಕೊಟ್ಟಿದೆ.
ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಚರ್ಚೆಸಿ ಸರ್ಕಾರಿ ಜಮೀನಿನಲ್ಲಿ ಸ್ಥಾಪಿಸಲಾಗಿರುವ ಕ್ರಷರ್ ಘಟಕಗಳನ್ನು ಸರ್ಕಾರಿ ಆದೇಶದ ಅನ್ವಯ ಜಮೀನಿನ ಮಾಲೀಕತ್ವವನ್ನು ವರ್ಗಾವಣೆ ಮಾಡುವಂತೆ ನಿಯೋಗವು ಕೋರಿತು.
ರಾಜ್ಯಾದ್ಯಂತ ರಾಯಲ್ಟಿ ಮತ್ತು ಹೆಚ್ಚುವರಿ ವಾರ್ಷಿಕ ಪ್ರೀಮಿಯಂ ಪಾವತಿ (ಎಎಪಿಪಿ) ರದ್ದತಿಗೆ ಸಂಬಂಧಿಸಿದಂತೆ ಅಂತಿಮ ಬಳಕೆದಾರರು ಖನಿಜ ರವಾನೆ ಪರವಾನಗಿ (ಎಂಡಿಪಿ) ಪಡೆಯುವುದು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದರು. ದಂಡವಾಗಿ ಸಂಗ್ರಹಿಸಿದ ಐದು ಪಟ್ಟು ರಾಜಧನವನ್ನು ರದ್ದುಗೊಳಿಸುವಂತೆ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರು ಸಚಿವರಿಗೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ವಿಧಿಸಿರುವ ಪರಿಸರ ಸೆಸ್ (ಹಸಿರು ಸೆಸ್) ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಂದೆ ಉಳಿಸದ / ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಧಿಸಿರುವ ಅತ್ಯಧಿಕ ಪರಿಸರ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟರು.
ಮನವಿ ಸ್ವೀಕರಿಸಿದ ಸಚಿವರು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದು, ಕಾನೂನಿನ ವ್ಯಾಪ್ತಿಯಲ್ಲಿ ಈಡೇರಿಸಬಹುದಾದ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸುವ ಭರವಸೆ ನೀಡಿದರು.
ನಿಯೋಗದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ಗೌರವಾಧ್ಯಕ್ಷ ದತ್ತಾತ್ರಿ.ಎಸ್., ಅಧ್ಯಕ್ಷ ಸಂಜೀವ ಹಟ್ಟಿಹೊಳಿ, ಉಪಾಧ್ಯಕ್ಷರಾದ ಡಿ.ಸಿದ್ದರಾಜು, ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.