ಅಭಿವೃದ್ಧಿ ಕಾಮಗಾರಿಗೆ ಸಚಿವ ಸೋಮಣ್ಣ ಚಾಲನೆ

Team Udayavani, Oct 31, 2019, 3:08 AM IST

abhivrudi

ಬೆಂಗಳೂರು: ಸಚಿವ ಹಾಗೂ ಗೋವಿಂದರಾಜ ನಗರ ಶಾಸಕ ವಿ.ಸೋಮಣ್ಣ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳೊಂದಿಗೆ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕಾರ್ಯ ಪರಿಶೀಲನೆ ನಡೆಸಿ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬೆಳಗ್ಗೆ 8ಗಂಟೆಗೆ ಕ್ಷೇತ್ರ ಪ್ರದಕ್ಷಿಣೆ ಶುರು ಮಾಡಿದ ಸೋಮಣ್ಣ, ಗೋವಿಂದರಾಜ ನಗರದ ಮಾರೇನಹಳ್ಳಿ ಬಸ್‌ ನಿಲ್ದಾಣ, ವೈಯಾಲಿಕಾವಲ್‌ ಲೇಔಟ್‌ ಚೌಕಿ ಶಂಕು ಸ್ಥಾಪನೆ ನೆರವೇರಿಸಿದರು. ಪಂತರ ಪಾಳ್ಯದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಗುಂಪು ಮನೆ ಕಾಮಗಾರಿ ಪರೀಶೀಲನೆ ಸಮಯದಲ್ಲಿ ಸ್ಥಳಕ್ಕೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳನ್ನು ತಾರಟೆಗೆ ತೆಗೆದುಕೊಂಡರು.

ನಾಯಂಡಹಳ್ಳಿಯ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವ, ಪ್ರಾರ್ಥನಾ ಮಂದಿರದ ಸುತ್ತ ತುಂಬಿದ್ದ ಕಸ ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಕೂಡಲೆ ಅಲ್ಲಿನ ಕಸ ತೆರವುಗೊಳಿಸುವಂತೆ ಸೂಚನೆ ನೀಡಿದರು. ಕಳೆದ ಮೂರು ತಿಂಗಳುಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಬೆಸ್ಕಾಂ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಬಳಿಕ ನಾಗರಬಾವಿಯ ಟೀಚರ್ಸ್‌ ಕಾಲೋನಿಗೆ ಭೇಟಿ ನೀಡಿ ಹೊಸದಾಗಿ ನಿರ್ಮಾಣವಾಗುತ್ತಿರೋ ಉದ್ಯಾನವನ ಮತ್ತು ಸಾರ್ವಜನಿಕ ಗ್ರಂಥಾಲಯ ಕಾವೇರಿಪುರ ವಾರ್ಡ್‌ ಆಫಿಸ್‌, ಗೋವಿಂದರಾಜನಗರ ವಾರ್ಡ್‌ನ ಮೂರು ಅಂತಸ್ತಿನ ಹೆರಿಗೆ ಆಸ್ಪತ್ರೆ ಮತ್ತು ಸರಸ್ವತಿ ನಗರದ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿ ಕಾಮಗಾರಿ ತ್ವರಿತಗೊಳಿಸುವಂತೆ ಹೇಳಿದರು. ಸ್ಥಳೀಯ ಪಾಲಿಕೆ ಸದಸ್ಯರು ಮತ್ತು ಸಂಬಂಧಪಟ್ಟ ವಾರ್ಡ್‌ನ ಬಿಬಿಎಂಪಿ ಅಧಿಕಾರಿಗಳು ಸಚಿವರ ಜತೆ ಕ್ಷೇತ್ರ ಪ್ರದಕ್ಷಿಣೆ ಮಾಡಿದರು.

ಇನ್ಸ್‌ಪೆಕ್ಟರ್‌ಗೆ ಏಕವಚನದಲ್ಲೇ ಕ್ಲಾಸ್‌: ನಿನ್‌ ಜೀವನದಲ್ಲಿ ಒಂದು ಒಳ್ಳೆ ಕೆಲಸ ಮಾಡಿಲ್ಲ. ಮೂರೂವರೆ ವರ್ಷ ಚೆನ್ನಾಗಿ ತಿಂದ್ಕೊಂಡು ಆರಾಮಾಗಿ ಕಾಲ ಕಳೆಯುತಿದ್ದೀಯ. ಇನ್ನಾದ್ರು ಕೆಲಸ ಮಾಡು. ಇಲ್ಲಿ ರಾತ್ರಿ ವೇಳೆ ರೌಡಿಗಳ, ಕಳ್ಳರ ಕಾಟ ಹೆಚ್ಚಾಗಿದೆ ಅಂತ ಜನ ದೂರು ಹೇಳ್ತಿದ್ದಾರೆ. ಒಂದು ಸಾರಿಯಾದ್ರೂ ಇಲ್ಲಿಗೆ ಬಂದು ನೋಡಿದ್ದೀಯಾ..? ರೌಡಿಗಳು ಮಚ್ಚು ಹಿಡ್ಕೊಂಡು ಓಡಾಡ್ತಾರಂತೆ.

ನೀನ್‌ ಏನ್‌ ಕೆಲಸ ಮಾಡ್ತಿದ್ದೀಯ ಎಂದು ಸಚಿವ ಸೋಮಣ್ಣ, ಗೋವಿಂದರಾಜನಗರ ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ್‌ಗೆ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ಈ ವೇಳೆ ನಾಯಂಡಹಳ್ಳಿಯ ಗುರುಸಾರ್ವಭೌಮನಗರದಲ್ಲಿ ಪೊಲೀಸ್‌ ಔಟ್‌ ಪೋಸ್ಟ್‌ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ನಡೆಸಲಾಯಿತು. ಶೀಘ್ರವಾಗಿ ಇಲ್ಲಿ ಪೊಲೀಸ್‌ ಔಟ್‌ ಪೋಸ್ಟ್‌ ನಿರ್ಮಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.