ಕೋವಿಡ್ ಪಾಸಿಟಿವ್ ಆದ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕಿಲ್ಲ : ಸಚಿವ ಡಾ.ಕೆ.ಸುಧಾಕರ್
ಕೋವಿಡ್ ಲಸಿಕೆಗೆ 400 ಕೋಟಿ ರೂ.ಗೆ ಅನುಮೋದನೆ
Team Udayavani, Apr 26, 2021, 9:04 PM IST
ಬೆಂಗಳೂರು : ಕೋವಿಡ್ ಸೋಂಕಿಗೊಳಗಾದವರೆಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ. ಕಡಿಮೆ ಲಕ್ಷಣ ಇರುವವರು ಮನೆಯಲ್ಲೇ ಆರೈಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮನೆ ಆರೈಕೆಯಲ್ಲಿರುವವರಿಗೆ ಪ್ರತಿ ದಿನ ಕಾಲ್ ಸೆಂಟರ್ ನಿಂದ ಕರೆ ಮಾಡಿ ಮಾರ್ಗದರ್ಶನ ನೀಡಲಾಗುತ್ತದೆ. ಜೊತೆಗೆ ಔಷಧಿ ಕಿಟ್ ನೀಡಲಾಗುತ್ತದೆ. ಯು.ಕೆ.ಯಲ್ಲಿ ರೋಗಿಗಳನ್ನು ಮನೆಯಲ್ಲೇ ಇರಿಸಿ ಆಸ್ಪತ್ರೆ ಮೇಲೆ ಒತ್ತಡವಿಲ್ಲದಂತೆ ಮಾಡಿ ಸಾವಿನ ಪ್ರಮಾಣ ಕಡಿಮೆ ಮಾಡಲಾಗಿದೆ. ಇದೇ ರೀತಿ ರಾಜ್ಯದಲ್ಲೂ ಮಾಡಲಾಗುವುದು. ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಎಲ್ಲರಿಗೂ ಕರೆ ಮಾಡಲು ಸಿಬ್ಬಂದಿ ಬೇಕಾಗುತ್ತದೆ. ಇದಕ್ಕಾಗಿ ಸಿಐಐ ಸಹಯೋಗ ಪಡೆಯಲಾಗಿದೆ ಎಂದರು.
ಕೋವಿಡ್ ಸಂಬಂಧಿತ ಕೆಲ ಔಷಧಿಗಳಿಗೆ 81.32 ಕೋಟಿ ರೂ., ಲಸಿಕೆಗೆ 400 ಕೋಟಿ ರೂ., ರೆಮಿಡಿಸಿವಿರ್ ಗೆ 28 ಕೋಟಿ ರೂ. ಮಂಜೂರು ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆತಿದೆ. ವಿಕ್ಟೋರಿಯಾ, ಬೌರಿಂಗ್ ನಲ್ಲಿ 250 ಹಾಸಿಗೆಗಳಿಗೆ ವೆಂಟಿಲೇಟರ್ ಅಳವಡಿಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ 3 ಸಾವಿರ ಹಾಸಿಗೆಯ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ. ಪೋರ್ಟೇಬಲ್ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿವೆ. ಕೆಲ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆ ಮುಗಿದ ಕೂಡಲೇ ಉಳಿದ ಹಾಸಿಗೆ ದೊರೆಯಲಿದೆ. ಯಾವುದೇ ಸರಳ ರೀತಿಯ ಚಿಕಿತ್ಸೆ ಯಾವುದೇ ವೈದ್ಯ ಪದ್ಧತಿಯಲ್ಲಿದ್ದರೂ ಅದನ್ನು ಉತ್ತೇಜಿಸಲಾಗುವುದು. ಆಯುಷ್ ನಲ್ಲಿ ಔಷಧಿ, ಚಿಕಿತ್ಸೆ ಇದ್ದರೂ ಬೆಂಬಲಿಸಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ
ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆಗಳ ಪ್ರಮುಖರೊಂದಿಗೆ ಸಚಿವರು ಸಭೆ ನಡೆಸಿದರು. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಕಳೆದ ವರ್ಷಕ್ಕಿಂತ ಕಡಿಮೆ ಹಾಸಿಗೆಗಳನ್ನು ಮೀಸಲಿಟ್ಟಿವೆ. ಈಗ ಕೋವಿಡ್ ಪಾಸಿಟಿವ್ ಆದವರೆಲ್ಲ ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಆದ್ದರಿಂದ ನಾನ್ ಕೋವಿಡ್ ಬಿಟ್ಟು ಕೋವಿಡ್ ಗೆ ಒತ್ತು ನೀಡುವುದು ಅನಿವಾರ್ಯ ಎಂದರು.
ಖಾಸಗಿ ಆಸ್ಪತ್ರೆಗಳು 75% ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಬೇಕು. ಈ ಪೂರ್ತಿ ಹಾಸಿಗೆಗಳು ಸರ್ಕಾರಕ್ಕೆ ಸಲ್ಲಬೇಕು. ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ನಿಂದ ಇದಕ್ಕೆ ಪಾವತಿ ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.
ಸಚಿವರು ಹೇಳಿದ ಇತರೆ ಅಂಶಗಳು
ಅಗತ್ಯ ಸೇವೆಗಳಿಗೆ ಯಾವುದೇ ಅಡ್ಡಿ ಮಾಡುವುದಿಲ್ಲ. ಆಸ್ಪತ್ರೆಗೆ ಹೋಗಲು, ಲಸಿಕೆ ಪಡೆಯಲು ಹೋಗುವವರಿಗೆ ಯಾರೂ ಅಡ್ಡಿ ಮಾಡುವುದಿಲ್ಲ. 14 ದಿನ ಕಡ್ಡಾಯವಾಗಿ ದೂರ ಇದ್ದು, ಕೋವಿಡ್ ಚೈನ್ ಅನ್ನು ಮುರಿಯಬೇಕು. ಪಾಸಿಟಿವ್ ಆದ ಕೂಡಲೇ ಮನೆಯವರೊಂದಿಗೂ ಬೆರೆಯಬಾರದು. ಮೇ 1 ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದು. ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.