Misbehavior: ಡ್ರಗ್ಸ್ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ
Team Udayavani, May 27, 2024, 11:43 AM IST
ಬೆಂಗಳೂರು: ಡ್ರಗ್ಸ್ ಅಮಲಿನಲ್ಲಿ ಅಪ್ರಾಪ್ತೆ ಜತೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಸಾರ್ವಜನಿಕರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿ ಗೊಪ್ಪಿಸಿರುವ ಘಟನೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಡರಹಳ್ಳಿ ನಿವಾಸಿ ಯುವಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಠಾಣೆ ವ್ಯಾಪ್ತಿಯ ಕಾಲೇಜುವೊಂದರಲ್ಲಿ ಶನಿ ವಾರ ಸಂಜೆ ಕಾರ್ಯಕ್ರಮ ಆಯೋಜಿಸ ಲಾಗಿತ್ತು. ಈ ವೇಳೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಆಗ ಒಂದು ಗುಂಪಿನ ಯುವಕ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ. ಮತ್ತೂಂದು ಗುಂಪಿನ ಯುವಕ ಮಾಗಡಿ ಮುಖ್ಯರಸ್ತೆಯಲ್ಲಿರುವ ಆಸ್ಪತ್ರೆಗೆ ಹೋಗಿದ್ದಾನೆ. ಇನ್ನು ಆಸ್ಪತ್ರೆಗೆ ಹೋಗಿದ್ದ ಯುವಕ ಡ್ರಗ್ಸ್ ಅಮಲಿನಲ್ಲಿ ಅಪ್ರಾಪ್ತೆ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಅದರಿಂದ ಆಕ್ರೋಶಗೊಂಡ ಆಕೆಯ ಪೋಷಕರು ಹಾಗೂ ಸ್ಥಳೀಯರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ವಿಚಾರ ತಿಳಿದ ಹೊಯ್ಸಳ ಪೊಲೀಸರು ಕೂಡಲೇ ಆಸ್ಪತ್ರೆ ಬಳಿ ಹೋಗಿ, ಯುವಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಬಳಿಕ ಘಟನೆ ಬಗ್ಗೆ ಸಂಬಂಧ ಪಟ್ಟವರಿಗೆ ದೂರು ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ, ಯಾರು ದೂರು ನೀಡಿಲ್ಲ. ಹೀಗಾಗಿ ಆರೋಪಿ ಯಿಂದ ಮಾದಕ ವಸ್ತು ಸೇವನೆ ವಿಚಾರಕ್ಕೆ ಸಂಬಂಧಿ ಸಿದಂತೆ ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.