ಸಿದ್ದರಾಮಯ್ಯ ವಿರುದ್ಧ ಶಾಸಕ ಜಿಟಿಡಿ ಹಕ್ಕುಚ್ಯುತಿ ಮಂಡನೆ
Team Udayavani, Feb 11, 2018, 6:50 AM IST
ಮೈಸೂರು: ಚುನಾಯಿತ ಪ್ರತಿನಿಧಿಯಲ್ಲದ ತಮ್ಮ ಮಗ ಡಾ.ಯತೀಂದ್ರ ಹಾಗೂ ಕಾಂಗ್ರೆಸ್ ಮುಖಂಡರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸರ್ಕಾರಿ ಅನುದಾನದ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ ಸಿ.ಶಿಖಾ ಅವರು ಕಾಂಗ್ರೆಸ್ ಮುಖಂಡ ಕೆ.ಮರಿಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಡುವ ಯಾವುದೇ ಗುದ್ದಲಿಪೂಜೆಗಳಿಗೆ ಮಾನ್ಯತೆ ಇಲ್ಲ ಎಂದು ಪತ್ರಿಕಾ ಪ್ರಕಟಣೆಯನ್ನೇ ನೀಡಿ ಕ್ಷೇತ್ರದಿಂದ ಹೊರಗಿಟ್ಟಿದ್ದರು. ಈಗ ಮುಖ್ಯಮಂತ್ರಿಯೇ ತಮ್ಮ ಮಗನನ್ನು ಕಳುಹಿಸಿ ಗುದ್ದಲಿಪೂಜೆ ಮಾಡಿಸುತ್ತಾರೆ. ಜನ ತಿರಸ್ಕಾರ ಮಾಡಿರುವ ಮಾಜಿ ಶಾಸಕ ಸತ್ಯನಾರಾಯಣ, ಜೈಲಿಗೆ ಹೋಗಿ ಬಂದ ಮರಿಗೌಡ ಕೂಡ ಅವರ ಜತೆಗಿರುತ್ತಾರೆ ಎಂದು ಟೀಕಿಸಿದರು.
ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರಾಗಿರುವ ಡಾ.ಯತೀಂದ್ರ, ವರುಣಾ ಕ್ಷೇತ್ರದಲ್ಲೂ ಗುದ್ದಲಿ ಪೂಜೆ, ಉದ್ಘಾಟನೆ ಮಾಡುವಂತಿಲ್ಲ. ಆದರೆ, ಕಾಂಗ್ರೆಸ್ ಮುಖಂಡರು ಮುಂಚಿತವಾಗಿ ಹಳ್ಳಿಗಳಿಗೆ ಹೋಗಿ ಜನರಿಗೆ ಹಣ ಕೊಟ್ಟು, ಸಿದ್ಧರಾಮಯ್ಯ ಅವರ ಮಗ ಬರುತ್ತಿದ್ದಾರೆ ಎಂದು ಹೇಳಿ ಹಾರ ತಂದುಕೊಟ್ಟು ಯತೀಂದ್ರಗೆ ಹಾಕಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಟೀಕೆ ಮಾಡುವ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಂವಿಧಾನವನ್ನೇ ಬುಡಮೇಲು ಮಾಡುತ್ತಿದ್ದಾರೆ. ಅಂಬೇಡ್ಕರ್ ಈಗ ಬದುಕಿದ್ದರೆ, ಸಿದ್ದರಾಮಯ್ಯ ಅವರ ಆಡಳಿತ ಕಂಡು ಹೃದಯಾಘಾತವಾಗುತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.