ರಸ್ತೆ ಕಾಮಗಾರಿಗೆ ಶಾಸಕ ಚಾಲನೆ
Team Udayavani, Aug 30, 2018, 12:34 PM IST
ಕೆಂಗೇರಿ: ಯಶವಂತಪುರ ವಿದಾನಸಭಾ ಕ್ಷೇತ್ರದ ಕಗ್ಗಲಿಪುರ ಗ್ರಾಮ, ಶ್ರೀನಿಧಿ ಬಡಾವಣೆಯ ಸುತ್ತಮುತ್ತಲಿನ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಲು 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಈ ವೇಳೆ ಸಾರ್ವಜನಿಕರು, ಗ್ರಾಮದ ಕೆರೆಗೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳಿಂದ ಒಳಚರಂಡಿ ನೀರು ಸೇರುತ್ತಿದೆ. ಇದರಿಂದ ನೈರ್ಮಲ್ಯ ಸೃಷ್ಟಿಯಾಗುತ್ತಿದೆ. ಸಾಂಕ್ರಮಿಕ ರೋಗ ಭೀತಿ ತಲೆದೋರಿದೆ. ಈ ಸಮಸ್ಯೆಯನ್ನು ಪರಿಹರಿಸಲು ಮನವಿ ಮಾಡಿದರು. ಕಗ್ಗಲಿಪುರದ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ತಂದು ಶುದ್ಧ ಕುಡಿಯುವ ನೀರು, ಕಾಂಕ್ರೀಟ್ ರಸ್ತೆ, ಬೀದಿ ದೀಪ ಇನ್ನೂ ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಕಗ್ಗಲೀಪುರ ಕೆರೆಯನ್ನು ಅಭಿವೃದ್ಧಿಪಡಿಸಿ ಒಳಚರಂಡಿ ನೀರು ಬೇರೆ ಕಡೆಗೆ ಹರಿಯುವಂತೆ ಮಾಡಿ ಶಾಶ್ವತ ತಡೆಗೋಡೆ ನಿರ್ಮಿಸಿ ಪಾದಚಾರಿ ಮಾರ್ಗ, ಬಯಲು ವ್ಯಾಯಮ ಶಾಲೆ, ಮಕ್ಕಳ ಆಟದ ಮೈದಾನವನ್ನು ಮಾಡಲಾಗುವುದು. ಇದನ್ನು ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಪಂ ಅದ್ಯಕ್ಷೆ ಗಾಯತ್ರಿ ಜಯರಾಂ, ಸದಸ್ಯ ಪರ್ವೀಜ್ಪಾಷ, ಗ್ರಾಪಂ ಸದಸ್ಯ ಶ್ರೀನಿವಾಸ್, ಜಯರಾಂ ಗ್ರಾಪಂ ಸದಸ್ಯರು ಮುಖಂಡರು ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.