ಶಾಸಕರು ಪಕ್ಷ ತೊರೆವ ಆತಂಕ, ಮನವೊಲಿಕೆ ಯತ್ನ

Team Udayavani, Apr 2, 2018, 7:00 AM IST

Congress-700.jpg

ಬೆಂಗಳೂರು: ಅಫ‌ಜಲ್‌ಪುರ ಶಾಸಕ ಮಾಲಿಕಯ್ಯ ಗುತ್ತೆದಾರ ಕಾಂಗ್ರೆಸ್‌ ತೊರೆದ ಬೆನ್ನಲ್ಲೇ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಮತ್ತಷ್ಟು ಶಾಸಕರು ಪಕ್ಷ ತೊರೆಯುವ ಸಾಧ್ಯತೆಗಳನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅತೃಪ್ತರ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದವರು, ಸಚಿವ ಸ್ಥಾನ ಕಳೆದುಕೊಂಡವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದರಿಂದ ಬಿಜೆಪಿ ನಾಯಕರು ಅಂತಹ ನಾಯಕರನ್ನು ಬಿಜೆಪಿ ಸೆಳೆಯಲು ಪ್ರಯತ್ನ ನಡೆಸಿದೆ.

ಹೀಗಾಗಿ ಕೊನೆ ಗಳಿಗೆಯಲ್ಲಿ ವಲಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನಿಸಿಕೊಂಡವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ದೂರವಾಣಿ ಮೂಲಕ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಶೇಷವಾಗಿ  ಯಾದಗಿರಿ ಶಾಸಕ ಮಾಜಿ ಸಚಿವ ಎ.ಬಿ. ಮಾಲಕರೆಡ್ಡಿ ಮಲ್ಲಿಕಾರ್ಜುನ ಖರ್ಗೆ ಮೇಲಿನ ಮುನಿಸಿನಿಂದ ಕಾಂಗ್ರೆಸ್‌ನಿಂದ ದೂರ ಉಳಿಯುವುದಾಗಿ ಹೇಳಿದ್ದರು. ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ನಿರಂತರ ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಕರೆಡ್ಡಿ ಅವರನ್ನು ಪಕ್ಷದಲ್ಲಿಯೇ ಉಳಿಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಅದೇ ರೀತಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್‌ ಕೂಡ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್‌ ಇರುವವರೆಗೂ ತಮಗೆ ಕಾಂಗ್ರೆಸ್‌ನಲ್ಲಿ ಅಧಿಕಾರ ಸಿಗುವುದಿಲ್ಲ ಎಂದು ಭಾವಿಸಿರುವ ಅವರು, ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವುದರಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಬಾರಿ ಸಚಿವ ಸ್ಥಾನ ನೀಡುವ ಭರವಸೆ ನೀಡಿ, ಅವರನ್ನೂ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಗುರುಮಿಟ್ಕಲ್‌ ಶಾಸಕ ಹಾಗೂ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್‌  ಅವರನ್ನೂ ಪಕ್ಷಕ್ಕೆ ಸೆಳೆಯಲು  ಬಿಜೆಪಿ ನಾಯಕರು ಕಸರತ್ತು ನಡೆಸಿದ್ದಾರೆ  ಎಂಬ ಮಾತುಗಳು ಕೇಳಿ ಬಂದಿದ್ದು, ಗುರುಮಿಟ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಿಪಾಲ್‌ ರೆಡ್ಡಿ  ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ  ಅವರನ್ನು ಭೇಟಿಯಾಗಿ ಚಿಂಚನಸೂರ್‌ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.