ಶಾಸಕರೇ ಲ್ಯಾಂಡ್‌ ಮಾಫಿಯಾ ಕಿಂಗ್‌ಪಿನ್‌!


Team Udayavani, Dec 18, 2017, 12:52 PM IST

sadananada-gowda.jpg

ಬೆಂಗಳೂರು: ಕೆ.ಆರ್‌. ಪುರ ಶಾಸಕರು ಲ್ಯಾಂಡ್‌ ಮಾಫಿಯಾದ ಕಿಂಗ್‌ಪಿನ್‌ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ 81 ಕೊಲೆಗಳು ನಡೆದಿವೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಗಂಭೀರ ಆರೋಪ ಮಾಡಿದ್ದಾರೆ. 

ರಾಜ್ಯ ಬಿಜೆಪಿ ವತಿಯಿಂದ ಭಾನುವಾರ ಹಳೆ ವಿಮಾನ ನಿಲ್ದಾಣ ರಸ್ತೆಯ ಮುರಗೇಶಪಾಳ್ಯದ ಸರ್‌ ಎಂ. ವಿಶ್ವೇಶ್ವರಯ್ಯ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಪೂರ್ವ ಭಾಗದ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಶಾಸಕ ಭೈರತಿ ಬಸವರಾಜು ಹೆಸರು ಪ್ರಸ್ತಾಪಿಸಿದೇ ಅವರ ವಿರುದ್ಧ ಆರೋಪ ಮಾಡಿದರು. 

ಈ ಕ್ಷೇತ್ರದಲ್ಲಿ ನಡೆದ ಭೂ ಅಕ್ರಮಗಳ ಬಗ್ಗೆ ಬಿಜೆಪಿಯ ಮಾಜಿ ಶಾಸಕ ನಂದೀಶ್‌ ರೆಡ್ಡಿ ಸಾಕಷ್ಟು ಹೋರಾಟ ನಡೆಸುತ್ತಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಪಡೆದುಕೊಂಡಾಗ ಮೂರು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ 81 ಕೊಲೆಗಳು ನಡೆದಿವೆ ಎಂದು ಮಾಹಿತಿ ಸಿಕ್ಕಿದೆ. ಇವೆಲ್ಲ ಶಾಸಕರ ನೇತೃತ್ವದಲ್ಲಿ ನಡೆದ ಕೊಲೆಗಳು ಎಂದು ಸದಾನಂದಗೌಡ ಹೇಳಿದರು. 

ಕೆ.ಆರ್‌.ಪುರ ಕ್ಷೇತ್ರ ನನ್ನ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಕೇಂದ್ರ ಸರ್ಕಾರದ ಅನುದಾನದಲ್ಲಿ ನಾನು ಬಸ್‌ ನಿಲ್ದಾಣ ಕಟ್ಟಿಸಿದರೆ, ಅದಕ್ಕೆ ತಮ್ಮ ಫೋಟೋ ಹಾಕಬೇಕು ಎಂದು ಶಾಸಕರು ಹೇಳುತ್ತಾರೆ. ಈ ಕೀಳುಮಟ್ಟದ ಶಾಸಕ ಬೇಕೇ ಅನ್ನುವುದನ್ನು ಕ್ಷೇತ್ರದ ಜನರೇ ನಿರ್ಧರಿಸಬೇಕು. ಬೆಂಗಳೂರಿಗೆ ಕಳೆದ 70 ವರ್ಷಗಳಲ್ಲಿ ಇಂತಹ ದುಸ್ಥಿತಿ ಯಾವತ್ತೂ ಬಂದಿರಲಿಲ್ಲ.

ಇದಕ್ಕೆ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಬೇಕು. ರಸ್ತೆ, ಚರಂಡಿ ಕೆಲಸ ಸರಿ ಆಗಿದೇಯಾ ಎಂದು ಜಾರ್ಜ್‌ ಹೇಳಬೇಕು. ಲೆಕ್ಕ ಸಿಗದಷ್ಟು ರಸ್ತೆ ಗುಂಡಿಗಳಿವೆ. ಇದು ಕಾಂಗ್ರೆಸ್‌ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಸದಾನಂದಗೌಡ ಹರಿಹಾಯ್ದರು. ಸಿದ್ದರಾಮಯ್ಯನವರನ್ನು ಕಿತ್ತುಹಾಕಲು ಮತ್ತು ಯಡಿಯೂರಪ್ಪನವರ ಕೈ ಬಲಪಡಿಸಲು ಬೆಂಗಳೂರಿನ ಜನ ಈಗಾಗಲೇ ತೀರ್ಮಾನಿಸಿದ್ದಾರೆ.

ಜನರ ತೆರಿಗೆ ಹಣ 56 ಕೋಟಿ ರೂ. ವೆಚ್ಚದಲ್ಲಿ ಸಿದ್ದರಾಮಯ್ಯ ಸಾಧನಾ ಸಮಾವೇಶಗಳ ಹೆಸರಲ್ಲಿ ಸಂಭ್ರಮ ಆಚರಿಸುತ್ತಿದ್ದಾರೆ. ಆದರೆ, ಈ ಸಂಭ್ರಮ ಕಾಂಗ್ರೆಸ್‌ ಪಕ್ಷದ ಏಜೆಂಟ್‌, ಗುತ್ತಿಗೆದಾರರಿಗೆ ಮಾತ್ರ. ಜನ ಸಾಮಾನ್ಯರಿಗೆ ಅಲ್ಲ. ಕರ್ನಾಟಕದಿಂದ ಕಾಂಗ್ರೆಸ್‌ ಪಕ್ಷವನ್ನು ಧೂಳಿಪಟ ಮಾಡಿ ದೇಶದ ಇಡೀ ಭೂಪಟದಲ್ಲಿ ಕಾಂಗ್ರೆಸ್‌ ಕಣ್ಮರೆ ಆಗುವಂತೆ ಮಾಡಬೇಕು. ಇದಕ್ಕಾಗಿ ಸಿದ್ದರಾಮಯ್ಯನವರನ್ನು ಕೆಳಗಿಳಿಸಿ, ಜನಪರ ಕಾಳಜಿ ಇರುವ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಬೇಕಾಗಿದೆ ಎಂದರು.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.