ಎಂಎಲ್ಸಿ ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ


Team Udayavani, Nov 16, 2017, 10:40 AM IST

BJP_symbol.jpg

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ 2018ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ನೈರುತ್ಯ ಪದವೀಧರ ಕ್ಷೇತ್ರಕ್ಕೆ ರಾಜ್ಯಸಭೆ ಮಾಜಿ ಸದಸ್ಯ ಆಯನೂರು ಮಂಜುನಾಥ್‌,ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ,ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಕೆ.ಬಿ.ಶ್ರೀನಿವಾಸ್‌ ಅವರನ್ನು ಅಭ್ಯರ್ಥಿಗಳೆಂದು ಘೋಷಿಸಲಾಗಿದೆ.

ಅದೇ ರೀತಿ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್‌, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿ.ನಿರಂಜನಮೂರ್ತಿ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಾ.ಹಾಲನೂರು ಎಸ್‌.ಲೇಪಾಕ್ಷಿ ಅವರು ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.

ವಿಧಾನ ಪರಿಷತ್‌ ನೈರುತ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಮೇಲ್ಮನೆ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಮರನಾಥ ಪಾಟೀಲ್‌, ನೈರುತ್ಯ ಶಿಕ್ಷಕರ ಕ್ಷೇತ್ರದ ಗಣೇಶ್‌ ಕಾರ್ಣಿಕ್‌ (ಎಲ್ಲರೂ ಬಿಜೆಪಿ) ಹಾಗೂ
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ನ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್‌
ನ ರಮೇಶ್‌ಬಾಬು ಅವರ ಅವಧಿ 2018ರ ಜೂನ್‌ಗೆ ಅಂತ್ಯಗೊಳ್ಳುತ್ತಿರುವುದರಿಂದ ಈ ಸ್ಥಾನಗಳಿಗೆ ಚುನಾವಣೆ
ನಡೆಯಲಿದೆ.

ನೈರುತ್ಯ ಪದವೀಧರ ಕ್ಷೇತ್ರದಿಂದ ಹಾಲಿ ಸದಸ್ಯರಾಗಿರುವ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಮತ್ತು ಬೆಂಗಳೂರು
ಪದವೀಧರ ಕ್ಷೇತ್ರದ ಹಾಲಿ ಸದಸ್ಯ ರಾಮಚಂದ್ರಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಹೀಗಾಗಿ ಆ ಎರಡೂ ಕ್ಷೇತ್ರಗಳಿಗೆ ಬೇರೆಯವರನ್ನು ಪರಿಗಣಿಸಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ
ಗಣೇಶ್‌ ಕಾರ್ಣಿಕ್‌ ಅವರಿಗೆ ಮತ್ತೆ ಅವಕಾಶ ನೀಡಿದರೆ, ಈಶಾನ್ಯ

ಪದವೀಧರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಅಮರನಾಥ ಪಾಟೀಲ್‌ ಅವರನ್ನು ಕೈಬಿಟ್ಟು ಕೆ.ಬಿ.ಶ್ರೀನಿವಾಸ್‌ ಅವರನ್ನು ಆಯ್ಕೆ
ಮಾಡಲಾಗಿದೆ.

ನೈರುತ್ಯ ಪದವೀಧರ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್‌ ಕೊಡಿಸಲು ಶಂಕರಮೂರ್ತಿ ಸಾಕಷ್ಟು ಪ್ರಯತ್ನ ಮಾಡಿದ್ದರೂ ಅದು ಫ‌ಲ ಕಾಣಲಿಲ್ಲ. ಇನ್ನೊಂದೆಡೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿ ಎ.ಎಚ್‌.ಆನಂದ್‌ ಅವರನ್ನು ಕಡೆಗಣಿಸಿ ಹೊಸದಾಗಿ ಪಕ್ಷ ಸೇರಿರುವ ಅ.ದೇವೇಗೌಡರಿಗೆ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿ ಚೇತನ್‌ಗೌಡ ಅವರನ್ನು ಬಿಟ್ಟು ಡಾ.ಹಾಲನೂರು ಎಸ್‌.ಲೇಪಾಕ್ಷಿ ಅವರನ್ನು ಪರಿಗಣಿಸಲಾಗಿದೆ.

ಟಾಪ್ ನ್ಯೂಸ್

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.