ಬೆಳೆಹಾನಿ ಮಾಹಿತಿಗೆ ಮೊಬೈಲ್ ಆ್ಯಪ್
Team Udayavani, Jan 17, 2018, 12:06 PM IST
ಬೆಂಗಳೂರು: ಪ್ರಕೃತಿ ವಿಕೋಪ ಸೇರಿ ವಿವಿಧ ಕಾರಣಗಳಿಂದ ಬೆಳೆ ನಷ್ಟವಾದ ರೈತರಿಗೆ ಸಕಾಲದಲ್ಲಿ ಪರಿಹಾರ ವಿತರಿಸಲು ಸಹಕಾರಿಯಾಗುವ ಮೊಬೈಲ್ ಆ್ಯಪ್‌ನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದಿಂದ ಸಿದ್ಧಪಡಿಸಲಾಗಿದೆ.
ಈ ನೂತನ ತಂತ್ರಾಂಶದ ಮೂಲಕ ರೈತರು ತಮ್ಮ ಬೆಳೆ ಹಾನಿ ಬಗ್ಗೆ ಸರ್ಕಾರಕ್ಕೆ ಖುದ್ದಾಗಿ ವರದಿ ಸಲ್ಲಿಸ ಬಹುದಾಗಿದೆ. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದೆ ಎಂದು ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.
ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ 1070ಗೆ ತುರ್ತು ಸಮಯದಲ್ಲಿ ಕರೆ ಮಾಡಬಹುದಾಗಿದೆ. ಜನರು ವಿಪತ್ತು ನಿರ್ವಹಣೆಯ ಬಗ್ಗೆ ತಿಳಿದುಕೊಳ್ಳಲು ರಾಜ್ಯ ವಿಪತ್ತು ನಿಯಂತ್ರಣಾ ಕೊಠಡಿಗೆ ಸಂಪರ್ಕಿಸಬಹುದು. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ.
ವಿಪತ್ತು ನಿರ್ವಹಣಾ ಕೇಂದ್ರದಿಂದ ರಾಜ್ಯದ ಜನರು ಪ್ರಪಂಚದ ಯಾವುದೇ ಮೂಲೆಯಲ್ಲಿ ವಿಪತ್ತಿಗೆ ಸಿಲುಕಿರುವ ಬಗ್ಗೆ ಅವರ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ರಾಜ್ಯ ವಿಪತ್ತು ನಿಯಂತ್ರಣಾ ಕೊಠಡಿಗೆ ಕರೆ ಮಾಡಿ ಅವರ ಸಂಪೂರ್ಣ ಮಾಹಿತಿ ನೀಡಬೇಕು. ಆಗಾ ವಿಪತ್ತು ನಿಯಂತ್ರಣಾ ಕೊಠಡಿಯ ಅಧಿಕಾರಿಗಳು ಸಂಬಂಧಪಟ್ಟ ಸರ್ಕಾರದ ಜತೆ ಸಂಪರ್ಕಿಸಿ ರಕ್ಷಣಾ ಕಾರ್ಯ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.