ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಸಂಚಾರಿ ಕ್ಲಿನಿಕ್ ಗೆ ಚಾಲನೆ ನೀಡಿದ ಶಿವರಾಮ್ ಹೆಬ್ಬಾರ್
Team Udayavani, Jul 1, 2022, 12:33 PM IST
ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರ ಜೀವನ ಸುಧಾರಣೆಗೆ ಅನುವಾಗುವಂತೆ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಈ ಸಾಲಿನ ಮುಂಗಡ ಪತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿರುವ ಯೋಜನೆಗಳ ತ್ವರಿತ ಜಾರಿಗೆ ಕಾರ್ಮಿಕ ಇಲಾಖೆ ಮುಂದಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ರಾಜ್ಯದ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಉತ್ತಮ ಆರೋಗ್ಯ ಸೇವೆ ನೀಡುವ ಜತೆಗೆ ಅವರಿದ್ದಲ್ಲಿಗೇ ಚಿಕಿತ್ಸಾಲಯವನ್ನು ಕೊಂಡೊಯ್ಯುವ ಮಹತ್ವಾಕಾಂಕ್ಷಿ ಯೋಜನೆಯಡಿ “ಶ್ರಮಿಕ ಸಂಜೀವಿನಿ- ಸಂಚಾರಿ ಚಿಕಿತ್ಸಾ” ಕೇಂದ್ರಗಳಿಗೆ ಚಾಲನೆ ನೀಡಿದರು.
2020-21ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದಾದ್ಯಂತ 10 ಮತ್ತು 21-22ನೇ ಸಾಲಿನಲ್ಲಿ 32 ಸಂಚಾರಿ ಕ್ಲಿನಿಕ್‌ಗಳನ್ನು ಆರಂಭಿಸುವ ಘೋಷಣೆ ಮಾಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಇಲಾಖೆ ಬದ್ಧವಾಗಿದ್ದು, ಇದಕ್ಕೆ ಪ್ರತಿಯಾಗಿ ಸಂಚಾರಿ ಚಿಕಿತ್ಸಾಲಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ದಿನ ನಿತ್ಯ ದುಡಿತದಲ್ಲಿ ಇರುವ ಕಾರಣದಿಂದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಹೀಗೆ ಅನಾರೋಗ್ಯವಾದಾಗ ವೈದ್ಯರ ಬಳಿ ತೆರಳಲು ಸಮಯ ಮತ್ತು ಹಣವಿಲ್ಲದೆ ತೊಂದರೆಗೆ ಇಳಗಾಗಬಾರದು ಎಂಬ ಸದುದ್ದೇಶದಿಂದ ಈ ಯೋಜನೆ ಮೂಲಕ ಅವರಿದ್ದೆಡೆಗೇ ಕ್ಲಿನಿಕ್ ಕೊಂಡೊಯ್ಯುವ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ ಕಾರ್ಮಿಕ ಸಮಯ ಮತ್ತು ಹಣ ಎರಡೂ ಉಳಿತಾಯವಾಗುವುದರ ಜತೆಗೆ ಅವರ ಆರೋಗ್ಯದ ಕಾಳಜಿಯಿಂದ ಸಮಾಜಕ್ಕೂ ಒಳಿತಾಗಲಿದೆ ಎಂದು ಹೆಬ್ಬಾರ್ ಅವರು ಯೋಜನೆ ಬಗ್ಗೆ ವಿವರಣೆ ನೀಡಿದರು.
ಶ್ರಮಿಕರ ಕುಟುಂಬಕ್ಕೂ ಆರೋಗ್ಯ ಸೇವೆ: ಶ್ರಮಿಕ ವರ್ಗ ಮಾತ್ರವಲ್ಲದೆ ಅವರ ಕುಟುಂಬ ವರ್ಗದ ಆರೋಗ್ಯ ಸೇವೆಗಾಗಿ ಜಾರಿ ಆಗಲಿರುವ ಈ ಮೊಬೈಲ್ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್, ಬೆಡ್, ಆಕ್ಷಿಜನ್ ಪರಿಕರಗಳು, ಜೀವನಾವಶ್ಯಕ ಔಷಧಗಳು, ಜಿ.ಪಿ.ಆಪರೇಟಸ್, ಇಸಿಜಿ ಸೌಲಭ್ಯ, ರೆಫ್ರಿಜರೇಟರ್, ಕೋವಿಡ್ ಪರೀಕ್ಷಾ ಸಲಕರಣೆಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳು, ಅವಶ್ಯಕ ವೈದ್ಯಕೀಯ ಪರಿಕರಗಳು, ಸಿಬ್ಬಂದಿಗೆ ಅಸನ ವ್ಯವಸ್ಥೆ, ಸೇವಾ ಕೇಂದ್ರಗಳ ಆರಂಭಕ್ಕೆ ಅಗತ್ಯ ಸಲಕರಣೆಗಳನ್ನು ‘ಶ್ರಮಿಕ್ ಸಂಜೀವಿನಿ’ ಹೊಂದಿದೆ ಮತ್ತು ಚಿಕಿತ್ಸೆಗೆ ಬರುವ ಪ್ರತಿ ಕಾರ್ಮಿಕನಿಗೆ ಕ್ರಮ ಸಂಖ್ಯೆ ನೀಡಿ ಪ್ರತ್ಯೇಕ ಒಪಿಡಿ ದಾಖಲೆ ನಿರ್ವಹಣೆ, ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಔಷಧೋಪಚಾರಗಳನ್ನು ಒದಗಿಸಲಿದೆ ಎಂದು ಸಚಿವ ಹೆಬ್ಬಾರ್ ಹೇಳಿದರು.
ಸ್ಥಳದಲ್ಲಿಯೇ ಪರೀಕ್ಷೆಗಳನ್ನು ಕೈಗೊಂಡು ವರದಿ ಮತ್ತು ಚಿಕಿತ್ಸೆ ನೀಡಲು ಅನುವಾಗುವಂತೆ ಪ್ರಯೋಗಾಲಯದ ಉಪಕರಣಗಳನ್ನು ಇರಿಸಲಾಗಿದೆ. ತುರ್ತು ಚಿಕಿತ್ಸೆ ಮತ್ತು ಅಪಘಾತ ಸಂದರ್ಭದಲ್ಲಿ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗೆ ಇಎಸ್‌ಐ ಅಥವಾ ಉನ್ನತೀಕರಿಸಿದ ಆಸ್ಪತ್ರೆಗಳಿಗೆ ರವಾನಿಸಲು ಈ ಸೇವೆ ಸಹಕಾರಿ ಆಗಿದೆ ಎಂದ ಅವರು, ಆಕರ್ಷಕವಾಗಿ ರೂಪಿಸಿ ವಿನ್ಯಾಸಗೊಳಿಸಲಾಗಿರುವ ‘ಶ್ರಮಿಕ್ ಸಂಜೀವಿನಿ’ ಕ್ಲಿನಿಕ್‌ಗಳಲ್ಲಿ ಸೇವೆಗಳ ಆನ್‌ಲೈನ್ ವರದಿಗಾಗಿ ರಿಯಲ್ ಟೈಮ್ ರಿಪೋರ್ಟಿಂಗ್, ಜಿಪಿಎಸ್ ಟ್ರೇಸಿಂಗ್ ಸಿಸ್ಟಮ್, ರೋಗಿಯ ವಿವರಗಳನ್ನು ಎಂಐಎಂನಲ್ಲಿ ಅಪ್ ಲೋಡ್ ಮಾಡಲಾಗುತ್ತಿದೆ. ಇದಕ್ಕಾಗಿ ಬಿಎಸ್-6 ಮಾದರಿಯ ವಾಹನಗಳನ್ನು ಇಲಾಖೆ ಬಳಸಿಕೊಂಡಿದೆ ಎಂದ ಅವರು, ತುರ್ತು ಸಂದರ್ಭಗಳಲ್ಲಿ ಶ್ರಮಿಕ್ ಸಂಜೀವಿನಿ ಸೇವೆಯನ್ನು ಸಹಾಯವಾಣಿ ಸಂಖ್ಯೆಗೆ 155214ಗೆ ಕರೆ ಮಾಡಿ ಪಡೆಯಬಹುದಾಗಿದ್ದು, ಯೋಜನೆಯ ತುರ್ತು ಜಾರಿಗೆ ಅನುವಾಗುವಂತೆ ಕಾರ್ಮಿಕ ವಿಮಾ ಸಂಸ್ಥೆಯ ವೈದ್ಯಕೀಯ ಮತ್ತು ಸಿಬ್ಬಂದಿ ಸೇವೆಯನ್ನು ಒದಗಿಸುತ್ತಿದೆ ಎಂದು ತಿಳಿಸಿದರು.
ಅತ್ಯಾಧುನಿಕ ಸಂಚಾರಿ ಕ್ಲಿನಿಕ್: ಶ್ರಮಿಕರು ಇರುವರೆಡೆಗೆ ತೆರಳಿ ಅವರ ಆರೋಗ್ಯ ಪರೀಕ್ಷಿಸಿ ಅಗತ್ಯ ಸಲಹೆ ಸೂಚನೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಸಿದ್ಧಗೊಂಡಿರುವ ಈ ಸಂಚಾರಿ ಕ್ಲಿನಿಕ್‌ಗಳು ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಅಣಿಗೊಂಡಿರುವುದು ವಿಶೇಷ. ಪ್ರತಿ ಸೋಮವಾರದಿಂದ ಶನಿವಾರದವರೆಗೆ ನಿಗಧಿತ ಅವಧಿಯಲ್ಲಿ ನಿಗದಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ಈ ಸಂಚಾರಿ ಕ್ಲಿನಿಕ್ ಸೇವೆಯನ್ನು ಆರಂಭದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆಯನ್ನು ಈ ಶ್ರಮಿಕ್ ಸಂಜೀವಿನಿ ಒದಗಿಸುತ್ತಿದೆ. ಪ್ರತಿ ಸಂಚಾರಿ ಕ್ಲಿನಿಕ್‌ಗಳು ಓರ್ವ ವೈದ್ಯ, ಓರ್ವ ನರ್ಸ್, ಓರ್ವ ಫಾರ್ಮಸಿಸ್ಟ್, ಓರ್ವ ಲ್ಯಾಬ್ ಟೆಕ್ನಿಷಿಯನ್, ಎಎನ್‌ಎಮ್, ಚಾಲಕ ಮತ್ತು ಸಹಾಯಕ ಸಿಬ್ಬಂದಿಯನ್ನು ಹೊಂದಿರಲಿದೆ.
ಹೈಟೆಕ್ ಸೇವೆಗಳು ಲಭ್ಯ: ಗುಣಮುಖ ಸೇವೆಗಳು, ಪ್ರಥಮ ಚಿಕಿತ್ಸಾ ಸೇವೆಗಳು, ಪ್ರಯೋಗಾಲಯ ಪರೀಕ್ಷಾ ಸೇವೆಗಳು, ಕೋವಿಡ್ ಪರೀಕ್ಷಾ ಸೇವೆಗಳು, ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ ಸೇವೆಗಳು, ಅನುಸರಣಾ ಸೇವೆಗಳು, ಕುಟುಂಬ ಯೋಜನಾ ಸೇವೆಗಳು, ಪ್ರಸವ ಪೂರ್ವ ಮತ್ತು ನಂತರದ ಸೇವೆಗಳು, ಚುಚ್ಚು ಮದ್ದು ಸೇವೆಗಳು, ಸಮಾಲೋಚನಾ ಸೇವೆಗಳು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಆರೋಗ್ಯ ಶಿಕ್ಷಣ ಮತ್ತು ಪರಿಸರ ನೈರ್ಮಲ್ಯ ಸೇವೆಗಳು ಸೇರಿದಂತೆ ಇತರೆ ನಿರ್ದೇಶಿತ ಹೈಟೆಕ್ ಆರೋಗ್ಯ ಸೇವೆಗಳು ಸ್ಥಳದಲ್ಲಿಯೇ ದೊರಕಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.