Bengaluru: ಬಸ್ನಲ್ಲಿ ಮೊಬೈಲ್ ಕದಿಯುತ್ತಿದ್ದ ಗ್ಯಾಂಗ್ ಸೆರೆ
Team Udayavani, Apr 13, 2024, 11:15 AM IST
ಬೆಂಗಳೂರು: ಹೆಚ್ಚಿನ ಪ್ರಯಾಣಿಕರು ತುಂಬಿರುವ ಬಿಎಂಟಿಸಿ ಬಸ್ಗಳನ್ನೇ ಟಾರ್ಗೆಟ್ ಮಾಡಿಕೊಂಡು ಪ್ರಯಾಣಿಕರ ಸೋಗಿನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಆರು ಮಂದಿಯ ಗ್ಯಾಂಗ್ ವೈಟ್ ಫೀಲ್ಡ್ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ.
ಆಂಧ್ರಪ್ರದೇಶ ಮೂಲದ ರವಿತೇಜ, ವೆಂಕಟೇಶ್, ಬಾಲರಾಜು, ಪೆದ್ದರಾಜು, ರಮೇಶ್ ಮತ್ತು ಸಾಯಿಕುಮಾರ್ ಬಂಧಿತರು. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ 107 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಸಿಕ್ಕಿ ಬಿದ್ದಿದ್ದು ಹೇಗೆ?: ಏ.4ರಂದು ವ್ಯಕ್ತಿಯೊಬ್ಬರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ ಮೊಬೈಲ್ ಕಳ್ಳತನ ವಾಗಿತ್ತು. ಈ ಬಗ್ಗೆ ಅವರು ವೈಟ್ μàಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಚರಣೆ ನಡೆಸಿ ಆಂಧ್ರಪ್ರದೇಶದ 6 ಮಂದಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿ, ದೂರು ನೀಡಿದ್ದ ವ್ಯಕ್ತಿಯ ಮೊಬೈಲ್ ಫೋನ್ ಸೇರಿದಂತೆ ಒಟ್ಟು 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದರು.
ಬಾಡಿಗೆ ರೂಮ್ನಲ್ಲಿ ಸಂಗ್ರಹ: ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ 10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಆ ವೇಳೆ ಆರೋಪಿಗಳು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚೆನ್ನಸಂದ್ರದಲ್ಲಿ ಒಂದು ಬಾಡಿಗೆ ರೂಮ್ ಮಾಡಿಕೊಂಡಿರುವುದು ಗೊತ್ತಾಗಿದೆ. ನಂತರ ಆ ರೂಮನ್ನು ಪರಿಶೀಲಿಸಿದಾಗ ಬರೋಬ್ಬರಿ 80ಕ್ಕೂ ಹೆಚ್ಚಿನ ಕಂಪನಿಯ ಕದ್ದ ಮೊಬೈಲ್ ಫೋನ್ಗಳನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಗೊತ್ತಾಗಿದೆ. ಅವುಗಳನ್ನು ಅಂತಾರಾಜ್ಯ ಬಸ್ಗಳ ಮೂಲಕ ಹೊರರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂಬುದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.