ಮೊಬೈಲ್ ವೇದನೆ ಗಿಡಗಳ ಸಂವೇದನೆ
Team Udayavani, Dec 4, 2017, 12:37 PM IST
ಬೆಂಗಳೂರು: ಮೊಬೈಲ್ ಜತೆಗಿನ ಮಾತು ವೇದನೆ ಅನಿಸಿದರೆ, ಗಿಡಗಳ ಜತೆಗಿನ ಮಾತು ಸಂವೇದನೆ ಅನಿಸಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತ್ಕುಮಾರ್ ಬಣ್ಣಿಸಿದರು. ಅದಮ್ಯ ಚೇತನ ಟ್ರಸ್ಟ್, 101ನೇ ಹಸಿರು ಭಾನುವಾರದ ಅಂಗವಾಗಿ ಭಾನುವಾರ ನಗರದ ನಾಗರಭಾವಿಯ ಐಎಸ್ಇಸಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸ್ಯಾಗ್ರಹ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಮ್ಮ ಮಾತು ಮೊಬೈಲ್ ಜೊತೆಗಷ್ಟೇ ಅನ್ನುವಂತಾಗಿದೆ.ಇದನ್ನು ಬಿಟ್ಟು ಗಿಡಗಳೊಂದಿಗೆ ನಾವು ಮಾತನಾಡಬೇಕು ಆಗ ಮೊಬೈಲ್ ಮಾತು ವೇದನೆ ಅನಿಸಿ, ಗಿಡಗಳ ಮಾತು ಸಂವೇದನೆ ಎನಿಸಲಿದೆ. ಅದಮ್ಯ ಚೇತನ ಟ್ರಸ್ಟ್, ಬೆಂಗಳೂರನ್ನು ಹಸಿರಾಗಿಸುವ ಪಣ ತೊಟ್ಟಿದ್ದು, ಈ ನಿಟ್ಟಿನಲ್ಲಿ ಯಶಸ್ವಿ ಹೆಜ್ಜೆ ಇರಿಸಿದೆ. ಈಗಗಾಲೇ ನಗರದ ಹಲವೆಡೆ ಸಸ್ಯಾಗ್ರಹ ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ.
ಮುಂದೆ ಇದು ಜನಾಂದೋಲನವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ಬೆಂಗಳೂರಿಗರಿಗೆ ಶುದ್ಧವಾದ ಗಾಳಿ ಸಿಗಬೇಕು ಎಂಬ ಆಶಯದೊಂದಿಗೆ ಸಸ್ಯಾಗ್ರಹ ನಡೆಸುತ್ತಿದ್ದು, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಪ್ರಗತಿ ಪರ ಚಿಂತಕರು, ಸಿನಿಮಾ ತಾರೆಯರು ಮತ್ತು ವೈದ್ಯರು ಕಾರ್ಯಕ್ರಮದೊಂದಿಗೆ ಕೈ ಜೋಡಿಸಿದ್ದಾರೆ ಎಂದರು.
ಅದ್ಯಮ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಮಾತನಾಡಿ, ಹೀಗೇ ಕಾಡು ನಾಶ ಮಾಡುತ್ತಾ ಹೋದರೆ ನಮ್ಮ ಮುಂದಿನ ಪೀಳಿಗೆ ಶುದ್ಧ ಗಾಳಿಗಾಗಿ ಪರಿತಪಿಸುವ ಸ್ಥಿತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯದ ಬಗ್ಗೆ ಎಚ್ಚೆತ್ತುಕೊಂಡು ಹಸಿರು ಸಂರಕ್ಷಣೆಯಲ್ಲಿ ತೊಡಗುವಂತೆ ಮನವಿ ಮಾಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ವೈದ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.