ಖಾಸಗಿ ಬಸ್ ಮಾಲೀಕರಿಗೆ ಕ್ರಮದ ಎಚ್ಚರಿಕೆ
Team Udayavani, Mar 29, 2019, 11:49 AM IST
ಬೆಂಗಳೂರು: ಮತದಾನದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಬೇಕಾಬಿಟ್ಟಿಯಾಗಿ ಪ್ರಯಾಣ ದರ ಹೆಚ್ಚಳ ಮಾಡಬಾರದು ಎಂದು ಖಾಸಗಿ ಬಸ್‌ಗಳ ಮಾಲಿಕರಿಗೆ ಸೂಚನೆ ನೀಡಿರುವ ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ, ಇಂತಹ ಪ್ರಕರಣಗಳು ಗಮನಕ್ಕೆ ಬಂದಲ್ಲಿ ದಂಡದೊಂದಿಗೆ ಪರವಾನಗಿ ಅಮಾನತು ಅಥವಾ ರದ್ದು ಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮತದಾನ ದಿನದ ಆಸುಪಾಸು ಸಾಲು ರಜೆಗಳು ಬಂದಿವೆ. ಈ ವೇಳೆ ನಗರದಲ್ಲಿ ನೆಲೆಸಿರುವ ಅನೇಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಇದರ ಲಾಭ ಪಡೆಯಲು ಖಾಸಗಿ ಬಸ್ ಮಾಲಿಕರು ಬೇಕಾಬಿಟ್ಟಿ ಪ್ರಯಾಣ ದರ ಹೆಚ್ಚಳ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಖಾಸಗಿ ಬಸ್ ಮಾಲಿಕರೊಂದಿಗೆ ಚರ್ಚಿಸಿ, ಸೂಚನೆ ನೀಡಲಾಗಿದೆ. ಆದಾಗ್ಯೂ ಮನಬಂದಂತೆ ಏರಿಕೆ ಮಾಡುವುದು ಕಂಡುಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಬ್ಬ ಅಥವಾ ವಿಶೇಷ ಸಂದರ್ಭಗಳಲ್ಲಿ ಕೆಎಸ್‌ಆರ್‌ಟಿಸಿಯು ಪ್ರಯಾಣ ದರವನ್ನು ಶೇ.20ರಷ್ಟು ಹೆಚ್ಚಿಸಿಕೊಳ್ಳಲು ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಖಾಸಗಿ ಬಸ್‌ಗಳಿಗೆ ಇಂತಹ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಬಸ್‌ಗಳಂತೆ ದರ ಏರಿಕೆ ಮಿತಿ ಶೇ.20 ಅನ್ನು ಮೀರದಂತೆ ನಿಗದಿಪಡಿಸಲಿ. ಅದುಬಿಟ್ಟು, ಮೂರ್‍ನಾಲ್ಕು ಪಟ್ಟು ಹೆಚ್ಚಳ ಮಾಡುವುದರಿಂದ ಪ್ರಯಾಣಿಕರ ಮೇಲೆ ಹೊರೆ ಬೀಳಲಿದೆ ಎಂದರು.
ದರ ಏರಿಕೆ ಪ್ರಸ್ತಾವನೆ: ಕೆಎಸ್‌ಆರ್‌ಟಿಸಿ ಶೇ.18ರಿಂದ 20ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಖಾಸಗಿ ಬಸ್ ಪ್ರಯಾಣ ದರವನ್ನೂ ಶೇ.18ರಷ್ಟು ಏರಿಕೆ ಮಾಡುವಂತೆ ಮಾಲಿಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ.
ಚುನಾವಣೆ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ವಿ.ಪಿ. ಇಕ್ಕೇರಿ ತಿಳಿಸಿದರು. 2014ರಿಂದ ಬಸ್‌ಗಳ ದರ ಪರಿಷ್ಕರಣೆ ಆಗಿಲ್ಲ. ಈ ಮಧ್ಯೆ ಡೀಸೆಲ್ ದರ ಸಾಕಷ್ಟು ಏರಿಕೆ ಆಗಿದೆ. ವಾರದಲ್ಲಿ ಎರಡು-ಮೂರು ದಿನ ಬಸ್‌ಗಳು ಕಾರ್ಯಾಚರಣೆ ಮಾಡುವುದೇ ಇಲ್ಲ.
ಹೀಗಾಗಿ ನಿರ್ವಹಣಾ ವೆಚ್ಚವೂ ಸಂಗ್ರಹವಾಗುತ್ತಿಲ್ಲ. ದರ ಪರಿಷ್ಕರಣೆ ಮಾಡಬೇಕು ಎಂದು ಖಾಸಗಿ ಬಸ್‌ಗಳ ಮಾಲಿಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು. ಇದೆಲ್ಲವೂ ಮಜಲು ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು.
ಖಾಸಗಿ ಬಸ್‌ಗಳಿಗೆ ಯಾವುದೇ ಪ್ರಯಾಣ ದರವೇ ನಿಗದಿ ಆಗಿಲ್ಲ. ಹೀಗಿರುವಾಗ, ಯಾವ ಆಧಾರದಲ್ಲಿ ದಂಡ ಅಥವಾ ಶಿಸ್ತು ಕ್ರಮ ಕೈಗೊಳ್ಳುತ್ತೀರಿ ಎಂದು ಕೇಳಿದಾಗ, “ದರ ನಿಗದಿ ಆಗಿಲ್ಲ ಎನ್ನುವುದು ನಿಜ.
ಆದರೆ, ಸಾಮಾನ್ಯ ದಿನಗಳಲ್ಲಿ ಅವರು ವಿಧಿಸುವ ಪ್ರಯಾಣ ದರ ಹಾಗೂ ವಿಶೇಷ ಸಂದರ್ಭಗಳಲ್ಲಿ ವಿಧಿಸುವ ದರ ಮತ್ತು ಸರ್ಕಾರಿ ಬಸ್‌ಗಳ ದರಗಳಿಗೆ ತಾಳೆ ಹಾಕಲಾಗುವುದು. ತುಂಬಾ ವ್ಯತ್ಯಾಸ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.
1.35 ಕೋಟಿ ರೂ. ದಂಡ ವಸೂಲಿ: ಬೇಕಾಬಿಟ್ಟಿ ಪ್ರಯಾಣದರ ಹೆಚ್ಚಳ ಮಾಡಿದವರ ವಿರುದ್ಧ 2018ರ ನವೆಂಬರ್‌ನಿಂದ 2019ರ ಫೆಬ್ರವರಿ ನಡುವಿನ ಅವಧಿಯಲ್ಲಿ ರಾಜ್ಯ ಸಾರಿಗೆ ಪ್ರಾಧಿಕಾರದಿಂದ ಕಾರ್ಯಾಚರಣೆ ನಡೆಸಿ, 1.35 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ 842 ಪ್ರಕರಣಗಳ ತನಿಖೆ ನಡೆಸಿದ್ದು, 584 ರಹದಾರಿ ಅಮಾನತು ಮಾಡಲಾಗಿದೆ. 59 ರಹದಾರಿಗಳನ್ನು ರದ್ದು ಮಾಡಲಾಗಿದೆ ಎಂದು ವಿ.ಪಿ.ಇಕ್ಕೇರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.