ಕಾಂಗ್ರೆಸ್‌ನಿಂದಾಗೇ ಮೋದಿ ಪ್ರಧಾನಿಯಾಗಿದ್ದಾರೆ


Team Udayavani, Dec 29, 2017, 12:09 PM IST

cong-param.jpg

ಬೆಂಗಳೂರು: ಕಾಂಗ್ರೆಸ್‌ ಭಾರತವನ್ನು ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ಗಟ್ಟಿಗೊಳಿಸಿದ್ದಕ್ಕೆ ಇಂದು ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಬಿಜೆಪಿ ಕೋಮುವಾದದ ಹೆಸರಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ.

ನಗರದ ಅಂಬೇಡ್ಕರ್‌ ಭವನದಲ್ಲಿ ಗುರುವಾರ ಆಯೋಜಿಸಿದ್ದ 133ನೇ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದ್ದರೆ ಅದಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ. ಕಾಂಗ್ರೆಸ್‌ ಪಕ್ಷ ಎಲ್ಲರನ್ನೂ ಒಗ್ಗೂಡಿಸುವ ಸಿದ್ಧಾಂತ ಹೊಂದಿದೆ ಎಂದ ಅವರು, “ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂಬ ಮಾತುಗಳನ್ನು ಬಿಜೆಪಿ ನಾಯಕರು ಆಡುತ್ತಿದ್ದಾರೆ.

ನಮ್ಮದು ಶ್ರೇಷ್ಠ ಸಂವಿಧಾನ. ಯಾವುದೇ ಕಾರಣಕ್ಕೂ ಬದಲಾವಣೆಗೆ ಬಿಡುವುದಿಲ್ಲ ಎಂದು ತಿಳಿಸಿದರು. ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್‌.ಶಂಕರ್‌ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ನೇತೃತ್ವದಲ್ಲಿ ರಚಿತವಾಗಿರುವ ಸಂವಿಧಾನ ನಮ್ಮ ರಾಷ್ಟ್ರದ ಧರ್ಮ ಗ್ರಂಥ.

ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್‌ ಪಕ್ಷ ರಾಷ್ಟ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದೆ. ಬಿಜೆಪಿಯವರು “ಕಾಂಗ್ರೆಸ್‌ ಮುಕ್ತ ಭಾರತ’ ನಿರ್ಮಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, “ಹಸಿವು ಮುಕ್ತ ಭಾರತ’ ನಿರ್ಮಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

ಮೌನದ ಹಿಂದಿನ ಅರ್ಥವೇನು?: ಗ್ರಾಮೀಣಾಭಿವೃದ್ಧಿ ಸಂಪನ್ಮೂಲ ಸಚಿವ ಎಚ್‌.ಕೆ.ಪಾಟೀಲ್‌ ಮಾತನಾಡಿ, ದೇಶದ ಸಂವಿಧಾನ ಬದಲಾಯಿಸುವುದನ್ನು ಕಾಂಗ್ರೆಸ್‌ ಸಹಿಸುವುದಿಲ್ಲ. ಸಂವಿಧಾನ ತಿದ್ದುಪಡಿ ಮಾಡುವ ಕಾರಣವನ್ನು ಪ್ರಧಾನಿ ಸಂಸತ್‌ನಲ್ಲಿ ಸ್ಪಷ್ಟಪಡಿಸಬೇಕು. ಅನಂತ್‌ಕುಮಾರ್‌ ಹೆಗಡೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದರ ಹಿಂದಿನ ಅರ್ಥವೇನು ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್‌ ಮಾತನಾಡಿ, ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿಯವರು  ವ್ಯವಸ್ಥಿತ ತಂತ್ರ ಮಾಡುತ್ತಿ¨ªಾರೆ. ನಾವು ಎಚ್ಚೆತ್ತುಕೊಳ್ಳದಿದ್ದರೆ ಸೋಲಬೇಕಾದೀತು ಎಂದು ಎಚ್ಚರಿಕೆ ನೀಡಿದರಲ್ಲದೆ, ಚುನಾವಣೆ ರಣತಂತ್ರ ರೂಪಿಸುವ ವಿಚಾರದಲ್ಲಿಯೂ ಮಾರ್ಪಾಡು ಮಾಡಿಕೊಳ್ಳಬೇಕು.

ಇಲ್ಲದಿದ್ದರೆ ಬಿಜೆಪಿ ಎದುರಿಸುವುದು ಕಷ್ಟ. ಗುಜರಾತ್‌ ಚುನಾವಣೆಯಲ್ಲಿ ನಾವು ಎಚ್ಚೆತ್ತುಕೊಂಡು ಕೆಲಸ ಮಾಡಿದ್ದಕ್ಕೆ ನಿಜವಾದ ಗೆಲುವು ಕಾಂಗ್ರೆಸ್‌ದಾಯಿತು ಎಂದರು. ಮುಖಂಡರಾದ ವಿ.ಆರ್‌.ಸುದರ್ಶನ್‌, ವೀರಣ್ಣ ಮತ್ತೀಕಟ್ಟಿ, ಪ್ರೊ.ಬಿ.ಕೆ.ಚಂದ್ರಶೇಖರ್‌, ಸಲೀಂ ಅಹಮದ್‌, ರಾಣಿ ಸತೀಶ್‌, ಆರ್‌.ಕೃಷ್ಣಪ್ಪ, ರಾಜ್‌ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.