ಮೋದಿ ದೇಶದ್ರೋಹಿ: ಸಿದ್ದರಾಮಯ್ಯ
Team Udayavani, May 13, 2019, 3:06 AM IST
ಬೆಂಗಳೂರು: ಜಾತಿ, ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶದ್ರೋಹಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
ಮಹಾತ್ಮಾಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಒಬ್ಬನೇ ಒಬ್ಬ ಬಿಜೆಪಿಯವರನ್ನು ತೋರಿಸಿ. ಉಳಿದವರ ದೇಶಪ್ರೇಮವನ್ನು ಪ್ರಶ್ನಿಸುವ ಬಿಜೆಪಿಯವರೇ ನಿಜವಾದ ದೇಶಪ್ರೇಮಿಗಳಲ್ಲ.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಪಕ್ಷದವರಿಗೆ ಭ್ರಷ್ಟಾಚಾರ ಮಾಡಿ ಜೈಲು ಸೇರಿದ ಪಕ್ಷದವರು ದೇಶ ಪ್ರೇಮದ ಸರ್ಟಿಫಿಕೇಟ್ ನೀಡುತ್ತಿದ್ದಾರೆ. ಎಂತಹ ವಿಪರ್ಯಾಸವಲ್ಲವೇ? ದೇಶ ಪ್ರೇಮಿ ಗಾಂಧಿಯನ್ನು ಕೊಂದ ಆರ್‌ಎಸ್‌ಎಸ್‌ನ ಗೋಡ್ಸೆ ಅನುಯಾಯಿಗಳು ನೀಡುವ ದೇಶ ಪ್ರೇಮದ ಸರ್ಟಿಫಿಕೇಟ್ ಯಾರಿಗೆ ಬೇಕಾಗಿದೆ ? ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಮಹಾತ್ಮ ಗಾಂಧಿ, ರಾಜೀವ್ ಗಾಂಧಿ, ಇಂದಿರಾ ಗಾಂಧಿಯವರು ದೇಶಕ್ಕಾಗಿ ಪ್ರಾಣಾರ್ಪಣೆಗೈದರು. ದೇಶಕ್ಕಾಗಿ ಪ್ರಾಣತ್ಯಾಗಗೈದ ಒಬ್ಬನೇ ಒಬ್ಬ ಬಿಜೆಪಿಯವನನ್ನು ತೋರಿಸಿ.
ಉಳಿದವರ ದೇಶಪ್ರೇಮ ಪ್ರಶ್ನಿಸುವ ಬಿಜೆಪಿಯವರೇ ನಿಜವಾದ ದೇಶಪ್ರೇಮಿಗಳಲ್ಲ.ಜಾತಿ, ಧರ್ಮಗಳ ಆಧಾರದ ಮೇಲೆ ದೇಶವನ್ನು ಒಡೆಯುತ್ತಿರುವ ನರೇಂದ್ರ ಮೋದಿಯೇ ನಿಜವಾದ ದೇಶದ್ರೋಹಿ.
— Siddaramaiah (@siddaramaiah) May 12, 2019
ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಆಝಾದ್ ಇವರೆಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ವರ್ಷಗಟ್ಟಲೇ ಜೈಲುವಾಸ ಅನುಭವಿಸಿದರು. ಇವರಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿ ಬಂದ ಒಬ್ಬನೇ ಒಬ್ಬ ಆರ್‌ಎಸ್‌ಎಸ್ ಮುಖಂಡನನ್ನು ತೋರಿಸಿ, ಆ ಮೇಲೆ ಬಿಜೆಪಿಯವರ ದೇಶ ಪ್ರೇಮವನ್ನು ಒಪ್ಪೋಣ ಎಂದಿದ್ದಾರೆ.
ಇದೇ ವೇಳೆ, ಮೋದಿ ಸರ್ಕಾರದ ವಿರುದ್ಧವೂ ವಾಗ್ಧಾಳಿ ನಡೆಸಿರುವ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು ಬಡ ಜನರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವಂತೆ ಮಾಡಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು ಬಡ ಜನರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವಂತೆ ಮಾಡಿದರು. ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿ ಸಾಮಾಜಿಕ ಬದಲಾವಣೆ ಕಾರಣರಾದವರು ಕಾಂಗ್ರೆಸ್‌ನವರು.
ಅದರೆ ನೋಟ್ ಬ್ಯಾನ್ ಮಾಡಿ ಜನರನ್ನು ಬೀದಿಗೆ ತಂದವರು ಮೋದಿಯವರು.— Siddaramaiah (@siddaramaiah) May 12, 2019
ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾದವರು ಕಾಂಗ್ರೆಸ್‌ನವರು. ಆದರೆ, ನೋಟ್ ಬ್ಯಾನ್ ಮಾಡಿ ಜನರನ್ನು ಬೀದಿಗೆ ತಂದವರು ಮೋದಿಯವರು. ಜನರ ದುಡ್ಡಿನಲ್ಲಿ ಪ್ರಧಾನಿ ಮೋದಿ ವಿದೇಶ ಯಾತ್ರೆ ಮಾಡಿಕೊಂಡು ಅರಾಮವಾಗಿದ್ದಾರೆ.
ಈವರೆಗೆ 1690 ಕೋಟಿ ರೂ.ವೆಚ್ಚದಲ್ಲಿ 84 ಬಾರಿ ವಿದೇಶ ಯಾತ್ರೆ ಮಾಡಿದ್ದು ಸುಳ್ಳು ಭಾಷಣ, ವಿದೇಶ ಸುತ್ತಿದ್ದೇ ಅವರ ಸಾಧನೆಗಳಾಗಿವೆ. ಅಭಿವೃದ್ಧಿ ಮತ್ತು ಸೌಹಾರ್ದತೆಯ ಅರ್ಥವೇ ಗೊತ್ತಿರದ ಬಿಜೆಪಿಯನ್ನು ಈ ಬಾರಿ ಜನ ತಿರಸ್ಕರಿಸಲಿದ್ದಾರೆ ಎಂಬ ಭರವಸೆಯಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.