ಲಾಕರ್ನಲ್ಲಿ ಹಣ,ದಾಖಲೆ: ಇಂದು ಅವಿನಾಶ್ ವಿಚಾರಣೆ?
Team Udayavani, Jul 23, 2018, 6:15 AM IST
ಬೆಂಗಳೂರು: ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ನ ಲಾಕರ್ನಲ್ಲಿ ಪತ್ತೆಯಾದ ನೂರಾರು ಕೋಟಿ ರೂ. ಸಂಪತ್ತಿನ ಕುರಿತು ತನಿಖೆ ಮುಂದುವರಿಸಿರುವ ಐಟಿ ಅಧಿಕಾರಿಗಳು, ಲಾಕರ್ ಬಳಕೆದಾರ ಎನ್ನಲಾದ ಉದ್ಯಮಿ ಅವಿನಾಶ್ ಅಗರ್ವಾಲ್ ಕುಕ್ರೇಜಾ ಅವರನ್ನು ಸೋಮವಾರ ಹೆಚ್ಚಿನ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
ಬೌರಿಂಗ್ ಕ್ಲಬ್ನಲ್ಲಿ ಪತ್ತೆಯಾದ ಹಣ, ವಜ್ರಾಭರಣ, ನೂರಾರು ಕೋಟಿ ರೂ. ಮೌಲ್ಯದ ಆಸ್ತಿಪತ್ರಗಳ ಮೌಲ್ಯಮಾಪನ ಹಾಗೂ ಪಂಚನಾಮ ಪ್ರಕ್ರಿಯೆಗಳನ್ನು ಐಟಿ ಅಧಿಕಾರಿಗಳು ಶನಿವಾರ ರಾತ್ರಿ ಪೂರ್ಣಗೊಳಿಸಿದ್ದಾರೆ. ಅಲ್ಲದೆ, ಅವಿನಾಶ್ ಅವರ ನಿವಾಸ, ಬೆಂಗಳೂರು ಸೇರಿದಂತೆ ಇನ್ನಿತರೆಡೆ ಆತನ ಉದ್ಯಮಗಳ ಕಂಪೆನಿಗಳ ಕಚೇರಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಆತ ಸದಸ್ಯತ್ವ ಹೊಂದಿದ್ದ ಇತರೆ ಕ್ಲಬ್ಗಳಲ್ಲೂ ಕಾರ್ಯಾಚರಣೆ ನಡೆಸಿ ಅನೇಕ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಮಧ್ಯೆ ಬೌರಿಂಗ್ ಕ್ಲಬ್ನಲ್ಲಿ ಪತ್ತೆಯಾದ ಸಂಪತ್ತಿಗೆ ಸಂಬಂಧಿಸಿದಂತೆ ಸೋಮವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಅವಿನಾಶ್ ಅಗರ್ವಾಲ್ಗೆ ಸೂಚನೆ ನೀಡಿದ್ದು, ವಿಚಾರಣೆಗಾಗಿ ಐಟಿ ಕಚೇರಿಗೆ ಅವಿನಾಶ್ ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಅವಿನಾಶ್ ಅಗರವಾಲ್ ಜತೆ ವ್ಯವಹಾರ ಹೊಂದಿರುವವರ ಬಗ್ಗೆಯೂ ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದು, ಕೆಲವು ಗಣ್ಯರು ಆತನೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗುತ್ತಿದೆ. ಆದರೆ, ತನಿಖಾ ಹಂತದಲ್ಲಿ ಯಾವುದೇ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.