ಜೂ. 10ಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
Team Udayavani, Jun 6, 2019, 3:00 AM IST
ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ನಿರ್ಮಾಣವಾಗಿದ್ದು, ಕೇರಳಕ್ಕೆ ಜೂನ್ 8 ರಂದು ಮುಂಗಾರು ಪ್ರವೇಶಿಸಲಿದೆ. ಅದರಂತೆ ರಾಜ್ಯಕ್ಕೆ ಎರಡು ದಿನ ತಡವಾಗಿ, ಅಂದರೆ ಜೂ. 10ರೊಳಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೂ.8ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆಯಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರದ ವಿಜ್ಞಾನಿ ಸುನೀಲ್ ಗವಾಸ್ಕರ್ ಮಾಹಿತಿ ನೀಡಿದರು.
ಕರಾವಳಿ ಭಾಗದಲ್ಲಿರುವ ಮೇಲ್ಮೆ„ಸುಳಿಗಾಳಿ ಹಾಗೂ ದಕ್ಷಿಣ ಒಳನಾಡಿನಲ್ಲಿನ ಟ್ರಫ್ನಿಂದಾಗಿ ರಾಜ್ಯದ ಹಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳು ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.