ಚಂದ್ರನ ಸಮಗ್ರ ಮಾಹಿತಿ ನೀಡುವ ಉಪಗ್ರಹ ಸಿದ್ಧ
Team Udayavani, Aug 20, 2017, 11:18 AM IST
ಬೆಂಗಳೂರು: ಚಂದ್ರನ ಕುರಿತಂತೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಪೂರಕವಾಗಿರುವ ಉಪಗ್ರಹ ತಯಾರಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಉಡಾವಣೆಗೆ ಸಿದ್ಧತೆ ನಡೆಯುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಹೇಳಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ವತಿಯಿಂದ ಕಾಸಿಯಾ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020ರ ವೇಳೆಗೆ ಸುಮಾರು 18 ಉಪಗ್ರಹಗಳನ್ನು ಉಡಾವಣೆ ಮಾಡಲು ಸಿದ್ಧತೆ ಭರದಿಂದ ಸಾಗಿದೆ. ಜತೆಗೆ ಉಡಾವಣೆ ಹಾಗೂ ಬೇರೆ ಬೇರೆ ಕಕ್ಷೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸುವಂತೆ ಮಾಡುವ ಸಂಶೋಧನೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಇಸ್ರೋ ವತಿಯಿಂದ ಉಪಗ್ರಹಗಳ ಉಡಾವಣೆಗೆ ಅಗತ್ಯವಾದ ಸಂಪನ್ಮೂಲಗಳನ್ನು ಸರ್ಕಾರ ಒದಗಿಸಿದರೆ ಸಂಶೋಧನೆ ಮತ್ತು ಉಡಾವಣಾ ಯೋಜನೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎ.ಎಸ್.ಕಿರಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಾಸಿಯಾ ಅಧ್ಯಕ್ಷ ಆರ್.ಹನುಮಂತೇಗೌಡ, ಮಾಜಿ ಅಧ್ಯಕ್ಷ ಎ.ಪದ್ಮನಾಭ, ಉಪಾಧ್ಯಕ್ಷ ಬಸವರಾಜ ಎಸ್.ಜವಳಿ, ಜಂಟಿ ಕಾರ್ಯದರ್ಶಿ ಲತಾ ಗಿರೀಶ್, ಪ್ರಧಾನ ಕಾರ್ಯದರ್ಶಿ ಟಿ.ಎಸ್.ಉಮಾಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.